Cloudburst: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ; ಭಾರೀ ನಾಶ, ಹಲವರು ನಾಪತ್ತೆ ಶಂಕೆ
ಶುಕ್ರವಾರ ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಡೆಹ್ರಾಡೂನ್: ಶುಕ್ರವಾರ ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ.
ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಸಹ ಹಾನಿಗೊಳಗಾಗಿವೆ. ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ಮೇಘಸ್ಫೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಭಾರೀ ಮಳೆಯಿಂದಾಗಿ ಥರಾಲಿ-ಗ್ವಾಲ್ಡಮ್ ರಸ್ತೆ ಮತ್ತು ಥರಾಲಿ-ಸಾಗ್ವಾರಾ ರಸ್ತೆಗಳು ಮುಚ್ಚಲ್ಪಟ್ಟಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಒಂದು ವಿಡಿಯೋದಲ್ಲಿ ಜನರು ತಮ್ಮ ಮನೆಗಳ ಮೂಲಕ ನಡೆದುಕೊಂಡು ಹೋಗುವುದನ್ನು ತೋರಿಸಲಾಗಿದೆ, ಅವು ಅವಶೇಷಗಳು ಮತ್ತು ಮೊಣಕಾಲು ಆಳದ ನೀರಿನಿಂದ ಆವೃತವಾಗಿವೆ. ನಿನ್ನೆ ರಾತ್ರಿ NDRF ಮತ್ತು SDRF ತಂಡಗಳು ಸ್ಥಳಕ್ಕೆ ತೆರಳಿದವು. ಪ್ರವಾಹದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದಲ್ಲದೆ, ನಾವು ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದೇವೆ" ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿವೇಕ್ ಪ್ರಕಾಶ್ ತಿಳಸಿದ್ದಾರೆ.
🚨 थराली क्षेत्र से आपदा अपडेट 🚨
— Chamoli Police Uttarakhand (@chamolipolice) August 23, 2025
बीती रात्रि थाना थराली क्षेत्र में हुई अतिवृष्टि से जनजीवन प्रभावित हुआ। स्थिति की गंभीरता को देखते हुए थाना थराली पुलिस ने रात्रि में ही मुस्तैदी दिखाते हुए स्थानीय लोगो को सतर्क किया तथा घरों से निकालकर सुरक्षित स्थानों पर पहुँचाया। pic.twitter.com/5MaiBgTc5D
ಈ ಸುದ್ದಿಯನ್ನೂ ಓದಿ: Cloudburst: ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: ನಾಲ್ವರು ಸಾವು, ಹಲವರಿಗೆ ಗಾಯ
ನ್ನೆ ತಡರಾತ್ರಿ, ಚಮೋಲಿ ಜಿಲ್ಲೆಯ ಥರಾಲಿ ಪ್ರದೇಶದಲ್ಲಿ ಮೇಘಸ್ಫೋಟದ ದುರಂತ ವರದಿ ಬಂದಿದೆ. ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ನಿಟ್ಟಿನಲ್ಲಿ, ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.