ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cloudburst: ಉತ್ತರಾಖಂಡದಲ್ಲಿ ಮೇಘಸ್ಫೋಟ; 60 ಮಂದಿ ನಾಪತ್ತೆ ಶಂಕೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಥರಾಲಿ ಗ್ರಾಮದಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಧಿಡೀರ್‌ ಪ್ರವಾಹ ಉಂಟಾಗಿ ಇಡೀ ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಸುಮಾರು 60 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾದ ಭೀಕರ ಪ್ರವಾಹದ ದೃಶ್ಯ ವೈರಲ್‌ ಆಗಿದೆ.

ಉತ್ತರಾಖಂಡದಲ್ಲಿ ಮೇಘಸ್ಫೋಟ; 60 ಮಂದಿ ಬಲಿ?

Ramesh B Ramesh B Aug 5, 2025 3:23 PM

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ (Uttarkashi) ಜಿಲ್ಲೆಯ ಧರಾಲಿ ಗ್ರಾಮದಲ್ಲಿ (Dharali village) ಭೀಕರ ಮೇಘಸ್ಫೋಟ (Cloudburst) ಸಂಭವಿಸಿದ್ದು, ಧಿಡೀರ್‌ ಪ್ರವಾಹ ಉಂಟಾಗಿ ಇಡೀ ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಸುಮಾರು 60 ಮಂದಿ ಜಲ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಜತೆಗೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದ ಪರಿಣಾಮ ಭಾರಿ ಭೂಕುಸಿತ ಉಂಟಾಗಿದೆ. ಸದ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾದ ಭೀಕರ ಪ್ರವಾಹದ ದೃಶ್ಯ ವೈರಲ್‌ ಆಗಿದೆ.

ಖೀರ್ ಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ ಸುಮಾರು ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಪೀಡಿತ ಪ್ರದೇಶವು ಗಂಗೋತ್ರಿ ಧಾಮಕ್ಕೆ ಹತ್ತಿರದಲ್ಲಿದ್ದು, ಹಲವು ಪ್ರವಾಸಿಗರು ಸಿಕ್ಕಿಬಿದ್ದಿರುವ ಸಾಧ್ಯತೆ ಇದೆ.



ಈ ಸುದ್ದಿಯನ್ನೂ ಓದಿ: Indian Army: ಪಾಕಿಸ್ತಾನದ ಮಿಲಿಟರಿಗೆ ಅಮೆರಿಕ ಸಹಾಯ; ಸಾಕ್ಷಿ ಸಮೇತ ಪೋಸ್ಟ್‌ ಹಂಚಿಕೊಂಡ ಭಾರತೀಯ ಸೇನೆ

ವೈರಲ್‌ ಆದ ವಿಡಿಯೊದಲ್ಲಿ ಇದ್ದಕ್ಕಿದ್ದಂತೆ ಪ್ರವಾಹ ಜನವಸತಿ ಪ್ರದೇಶದತ್ತ ನುಗ್ಗುತ್ತಿರುವುದು ಕಂಡುಬಂದಿದೆ. ನೋಡನೋಡುತ್ತಿದ್ದಂತೆ ಇಡೀ ಗ್ರಾಮವೇ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಹಿಮಾಲಯನ್‌ ರಾಜ್ಯಗಳಲ್ಲಿ ಮಳೆ ಅಬ್ಬರ ಕಂಡು ಬಂದಿದ್ದು, ಇದರ ಪರಿಣಾಮವಾಗಿ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದೆ. ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸೋಮವಾರ ರಾತ್ರಿ ಇಡೀ ಮಳೆಯಾಗಿದ್ದು, ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿದೆ. ಹರಿದ್ವಾರದಲ್ಲಿ ಗಂಗಾ ಮತ್ತು ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಪರ್ವತದಿಂದ ಪ್ರವಾಹ ಧರಾಲಿಯತ್ತ ಹರಿದು ಬರುತ್ತಿರುವ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪ್ರವಾಹದ ರಭಸಕ್ಕೆ ಹಲವು ಮನೆಗಳು ಕೊಚ್ಚಿ ಹೋಗಿವೆ. ನದಿ ತೀರದ ಬಳಿ ತೆರೆಳದಂತೆ ಉತ್ತರಕಾಶಿ ಪೊಲೀಸರು ಸೂಚಿಸಿದ್ದಾರೆ.



ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಈ ಬಗ್ಗೆ ಮಾಹಿತಿ ನೀಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. "ಧರಾಲಿ (ಉತ್ತರಕಾಶಿ) ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿಯ ಸುದ್ದಿ ತಿಳಿದು ದುಃಖವಾಗಿದೆ. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಜಿಲ್ಲಾಡಳಿತ ಮತ್ತು ಇತರ ಸಂಬಂಧಿತ ತಂಡಗಳು ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ನಾನು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.