ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಎಂ ವಿಜಯ್‌ ವಿಶೇಷ ಕರ್ತವ್ಯ ಅಧಿಕಾರಿ ನೇಮಕ ಒಂದೇ ದಿನಕ್ಕೆ ರದ್ದು!

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಸಿಎಂ ಅವರ 'ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕ ಮಾಡಿದ್ದ ಒಂದೇ ದಿನಕ್ಕೆ ಆದೇಶವನ್ನು ಹಿಂಪಡೆಯಲಾಗಿದೆ. ವಿಕ್ಷಗಳಿಂದ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ಅಧಿಕಾರಿ ಹುದ್ದೆಯಿಂದ ಕೆಳಗಿಳಿದ ರಿಕ್ಕಿ ರಾಧನ್‌ ಪಂಡಿತ್

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 13, 2026 1:59 PM

ಚೆನ್ನೈ: ತಮಿಳುನಾಡು ಸರ್ಕಾರ (Tamil Nadu Government) ಜೋಸೆಫ್‌ ವಿಜಯ್ (Thalapathy Vijay) ಅವರ ವೈಯಕ್ತಿಕ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ (Rickey Vettrivel ) ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕ ಮಾಡಿದ್ದ ಆದೇಶದ ಕುರಿತು ಭಾರೀ ಟೀಕೆ ಬೆನ್ನಲ್ಲೇ ಇದೀಗ ಅವರನ್ನು ವಿಶೇಷ ಕರ್ತವ್ಯ ಅಧಿಕಾರಿ (OSD) ಆಗಿ ನೇಮಕ ಮಾಡುವುದನ್ನು ರದ್ದುಗೊಳಿಸಿಲಾಗಿದೆ.

ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ಇಲಾಖೆಯಲ್ಲಿ ಓಎಸ್‌ಡಿಯಾಗಿ ಬಡ್ತಿ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐಎಂ ಮತ್ತು ಸಿಪಿಐನಂತಹ ಪಕ್ಷಗಳು ಈ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದವು. ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರು ಎಂದು ಕರ್ತವ್ಯಕ್ಕೆ ಹಾಜರಾಗುತ್ತಾರೋ ಅಂದಿನಿಂದಲೇ ಈ ನೇಮಕಾತಿ ಪೂರ್ವಾನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಇದೀಗ ಆ ಹುದ್ದೆಯನ್ನು ರದ್ದುಗೊಳಿಸಲಾಗಿದೆ.

ಯಾರು ಈ ರಿಕ್ಕಿ ರಾಧನ್ ಪಂಡಿತ್?

ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ದಳಪತಿ ವಿಜಯ್ ಅವರ ವೈಯಕ್ತಿಕ, ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಸಲಹೆಗಾರರಾಗಿದ್ದಾರೆ. ಚೆನ್ನೈನ ನೀಲಂಕರೈನಲ್ಲಿರುವ ವಿಜಯ್ ನಿವಾಸಕ್ಕೆ ಆಗಾಗ್ಗೆ ಭೇಟಿ ನೀಡುವ ಮೂಲಕ ಅವರ ಅತ್ಯಂತ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಜ್ಯೋತಿಷಿ ರಾಧನ್ ಪಂಡಿತ್ ಅವರು, ವಿಜಯ್ ಅವರ ಜಾತಕವನ್ನು ನೋಡಿ ಭವಿಷ್ಯವನ್ನು ನುಡಿದಿದ್ದರು. ರಾಜಕೀಯದಲ್ಲಿ ಅವರು ಬೃಹತ್ ಮಟ್ಟಕ್ಕೆ ಬೆಳೆಯಲಿದ್ದಾರೆ ಎಂದು ಹೇಳಿದ್ದರು.

Thalapathy Vijay: ನಟ ವಿಜಯ್‌-ಸಂಗೀತಾ ಡಿವೋರ್ಸ್‌ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್‌

ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳು ಎಂದಿದ್ದ ರಾಧನ್ ಪಂಡಿತ್, ವಿಜಯ್ ಅವರ ಪಕ್ಷವು 140 ರಿಂದ 170 ಸೀಟುಗಳನ್ನು ಗೆಲ್ಲಲಿದ್ದು, ಶೇಕಡಾ 45ರಷ್ಟು ಮತಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ರಿಕ್ಕಿ ರಾಧನ್ ಪಂಡಿತ್ ಅವರು ವೈದಿಕ ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದಲ್ಲಿ 40 ವರ್ಷಗಳಿಗೂ ಹೆಚ್ಚು ಸುದೀರ್ಘ ಅನುಭವ ಹೊಂದಿದ್ದಾರೆ. ಈ ಹಿಂದೆ ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾಗೂ ಇವರು ಜೋತಿಷ್ಯ ನುಡಿದಿದ್ದರು.