ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Accident Case: ಹೈವೇಯಲ್ಲಿ ನಡೀತು ಘನಘೋರ ದುರಂತ! LPG ಟ್ಯಾಂಕರ್‌ ಬ್ಲಾಸ್ಟ್‌- ಏಳು ಮಂದಿ ಸಾವು

LPG tanker explodes: ಹೋಶಿಯಾರ್‌ಪುರ- ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾ ಬಳಿ ಪಿಕಪ್ ವಾಹನಕ್ಕೆ ಟ್ಯಾಂಕರ್ ವೊಂದು ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ. 15 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಕೆಲವರು ಚೇತರಿಸಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಆರ್ಥಿಕ ಪರಿಹಾರವನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

ಮಂಡಿಯಾಲ: ಪಿಕಪ್ ವಾಹನಕ್ಕೆ ಡಿಕ್ಕಿ (collision) ಹೊಡೆದ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡು (LPG tanker explodes) ಏಳು ಜನರು ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಪಂಜಾಬ್ ನ (Punjab) ಹೋಶಿಯಾರ್‌ಪುರ- ಜಲಂಧರ್ ರಸ್ತೆಯ ಮಂಡಿಯಾಲ (Mandiala) ಅಡ್ಡಾ ಬಳಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಸುಕ್‌ಜೀತ್ ಸಿಂಗ್ ಸೇರಿದಂತೆ ಬಲ್ವಂತ್ ರೈ, ಧರ್ಮೇಂದರ್ ವರ್ಮಾ, ಮಂಜಿತ್ ಸಿಂಗ್, ವಿಜಯ್, ಜಸ್ವಿಂದರ್ ಕೌರ್ ಮತ್ತು ಆರಾಧನಾ ವರ್ಮಾ ಎಂಬವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ಯಾಂಕರ್ ರಾಮ್ ನಗರ್ ಧೇಹಾ ಲಿಂಕ್ ರಸ್ತೆಯ ಕಡೆಗೆ ತಿರುಗುತ್ತಿದ್ದಾಗ ಪಿಕಪ್ ಟ್ರಕ್‌ಗೆ ಡಿಕ್ಕಿ ಹೊಡೆದು ಮಾರಕ ಸ್ಫೋಟ ಸಂಭವಿಸಿತು. ಈ ಸಂದರ್ಭದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದ ಆರಾಧನಾ ವರ್ಮಾ ಅವರನ್ನು ಅಮೃತಸರಕ್ಕೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅಮೃತಸರ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಪವನ್ ಕುಮಾರ್ ಹೇಳಿದರು.

ಗಾಯಾಳುಗಳಲ್ಲಿ ಬಲ್ವಂತ್ ಸಿಂಗ್, ಹರ್ಬನ್ಸ್ ಲಾಲ್, ಅಮರ್‌ಜೀತ್ ಕೌರ್, ಸುಖಜೀತ್ ಕೌರ್, ಜ್ಯೋತಿ, ಸುಮನ್, ಗುರುಮುಖ್ ಸಿಂಗ್, ಹರ್‌ಪ್ರೀತ್ ಕೌರ್, ಕುಸುಮಾ, ಭಗವಾನ್ ದಾಸ್, ಲಾಲಿ ವರ್ಮಾ, ಸೀತಾ, ಅಜಯ್, ಸಂಜಯ್, ರಾಘವ್ ಮತ್ತು ಪೂಜಾ ಸೇರಿದ್ದು, ಇವರಲ್ಲಿ ಕೆಲವರನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಘಟನೆಯ ಭಯಾನಕ ಕ್ಷಣಗಳನ್ನು ನೆನಪಿಸಿಕೊಂಡ ಮಂಡಿಯಾಲ ನಿವಾಸಿ ಗುರುಮುಖ್ ಸಿಂಗ್, ಭಾರಿ ಸ್ಫೋಟದ ಶಬ್ದ ಕೇಳಿಸಿತು. ಇದ್ದಕ್ಕಿದ್ದಂತೆ ಬೆಂಕಿ ನಮ್ಮನ್ನು ಸುತ್ತುವರೆದಿತ್ತು. ಹೆಂಡತಿ, ಮಗಳು ಮತ್ತು ಸೊಸೆಗೆ ಸುಟ್ಟ ಗಾಯಗಳಾಗಿದೆ. ಹೇಗೋ, ನಾನು ನನ್ನ ಮೊಮ್ಮಗನನ್ನು ಕಂಬಳಿಯಲ್ಲಿ ಸುತ್ತಿ ಅಪಾಯದಿಂದ ರಕ್ಷಿಸಿದೆ ಎಂದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹೋಶಿಯಾರ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ತನಿಖೆ) ಮುಖೇಶ್ ಕುಮಾರ್, ಬುಲ್ಲೋವಾಲ್ ಪೊಲೀಸ್ ಠಾಣೆಯ ಎಸ್ ಹೆಚ್ ಒ ಸಬ್-ಇನ್ಸ್‌ಪೆಕ್ಟರ್ ಮಣೀಂದರ್ ಸಿಂಗ್, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 105 ಮತ್ತು 324(4) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದರು ಮತ್ತು ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡ ಮತ್ತು ಅನೇಕರಿಗೆ ಗಾಯಗಳನ್ನುಂಟು ಮಾಡಿದ ದುರಂತದ ಬಗ್ಗೆ ತಿಳಿದ ತುಂಬಾ ನೋವಾಗಿದೆ ಎಂದಿದ್ದು, ಘಟನೆಯ ಬಗ್ಗೆ ಸಂತಾಪವನ್ನು ಸೂಚಿಸಿದ್ದಾರೆ.



ಮಂಡಿಯಾಲ ಮತ್ತು ಪಕ್ಕದ ಹಳ್ಳಿಗಳ ನಿವಾಸಿಗಳು ಪರಿಹಾರ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲಿ ಧರಣಿ ನಡೆಸಿದರು.

ಇದನ್ನೂ ಓದಿ: Police Suspend: ಲಾಕಪ್‌ ಡೆತ್‌ ಪ್ರಕರಣ​; ನಾಲ್ವರು ಪೊಲೀಸರು ಸಸ್ಪೆಂಡ್ ​

ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಾ. ರವಜೋತ್ ಸಿಂಗ್, ಶಾಸಕ ಬ್ರಾಮ್ ಶಂಕರ್ ಜಿಂಪಾ, ಸಂಸದ ರಾಜ್ ಕುಮಾರ್ ಚಬ್ಬೇವಾಲ್ ಮತ್ತು ಜಿಲ್ಲಾಧಿಕಾರಿ ಆಶಿಕಾ ಜೈನ್ ಅವರು ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಸಂಸದ ಸುಖಜಿಂದರ್ ಸಿಂಗ್ ರಾಂಧವಾ ಅವರು ಘಟನೆಯ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author