ನವದೆಹಲಿ: ಮುಂದಿನ ತಿಂಗಳ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ (Bangladesh) ಸಂಸತ್ತು ಚುನಾವಣೆ (parliamentary elections) ನಡೆಯಲಿದೆ. ಇದಕ್ಕೂ ಮೊದಲು ಭಾರತೀಯ ಅಧಿಕಾರಿಗಳು ಅಲ್ಲಿಂದ ಮರಳುವಂತೆ ಭಾರತ ಸಲಹೆ ನೀಡಿದೆ. ಬಾಂಗ್ಲಾದೇಶದಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಅಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಭದ್ರತೆ (security) ಆತಂಕದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ನಿಯೋಜಿಸಲಾದ ಭಾರತೀಯ ಅಧಿಕಾರಿಗಳನ್ನು ಮರಳಿ ಕರೆಸಲು ಭಾರತ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಾಂಗ್ಲಾದೇಶದ ಹೈಕಮಿಷನ್ ಮತ್ತು ಎಲ್ಲಾ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಕರ್ತವ್ಯದಲ್ಲಿ ಮುಂದುವರಿಯುತ್ತಾರೆ. ಆದರೆ ಭದ್ರತಾ ಆತಂಕವಿರುವ ಹಿನ್ನೆಲೆಯಲ್ಲಿ ಅವರೆಲ್ಲ ಮರಳಿ ಬರಲು ಆದೇಶಿಸಲಾಗಿದೆ.
ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ ಸೇಫ್
ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿರುವ ಮುಹಮ್ಮದ್ ಯೂನಸ್ ಅವರು ಮುಂಬರುವ ಚುನಾವಣೆಗೂ ಮುನ್ನ ತಮ್ಮ ಆಡಳಿತದ ಸುಧಾರಣೆಗಾಗಿ ಜನಾಭಿಪ್ರಾಯ ಸಂಗ್ರಹಣೆದಲ್ಲಿ ತೊಡಗಿದ್ದು, ಇದರಲ್ಲಿ ಯಾವುದೇ ವ್ಯಕ್ತಿ 10 ವರ್ಷಗಳಿಗಿಂತ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವುದನ್ನು ನಿಷೇಧಿಸುವ ಪ್ರಸ್ತಾಪವೂ ಸೇರಿದೆ ಎನ್ನಲಾಗಿದೆ.
ದೇಶಾದ್ಯಂತ ಫೆಬ್ರವರಿ 12 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರೊಂದಿಗೆ ಜನಾಭಿಪ್ರಾಯ ಸಂಗ್ರಹ ಕಾರ್ಯವು ನಡೆಯಲಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪದಚ್ಯುತಿಯ ಬಳಿಕ ಬಾಂಗ್ಲಾದೇಶದ ರಾಜಕೀಯ ವ್ಯವಸ್ಥೆಯನ್ನು ಮರುರೂಪಿಸಲು ಮುಹಮ್ಮದ್ ಯೂನಸ್ ನೇತೃತ್ವದ ಆಡಳಿತವು ಮತದಾನದ ಕೇಂದ್ರದಲ್ಲಿ ಕಾರ್ಯನಿರ್ವಾಹಕ ಅಧಿಕಾರದ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.