JP Nadda: ಪಕ್ಷ ಕಾನೂನನ್ನು ಗೌರವಿಸುತ್ತದೆ; ಸಂಸದರ ಅಸಂಬದ್ಧ ಹೇಳಿಕೆಗೆ ಬಿಜೆಪಿಯಿಂದ ಸ್ಪಷ್ಟನೆ
ಸುಪ್ರೀಂ ಕೋರ್ಟ್ (Supreme Court) ಕಾನೂನು ಮಾಡಿದರೆ ಸಂಸತ್ತು ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಶನಿವಾರ ಹೇಳಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ನೀಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ತಿಳಿಸಿದೆ.


ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಕಾನೂನು ಮಾಡಿದರೆ ಸಂಸತ್ತು ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಶನಿವಾರ ಹೇಳಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಈಗ ತನ್ನ ಮಿತಿಗಳನ್ನು ಮೀರುತ್ತಿದೆ. ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯನ್ನು ಮುಚ್ಚಬೇಕು ಎಂದು ಅವರು ಹೇಳಿದ್ದರು. ಇದೀಗ ಅವರ ಹೇಳಿಕೆ ಕುರಿತು ಭಾರತೀಯ ಜನತಾ ಪಕ್ಷ ತನ್ನ ನಿಲುವನ್ನು ಹೇಳಿದೆ. ಕೇಂದ್ರದ ಆಡಳಿತ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ಸುಪ್ರೀಂ ಕೋರ್ಟ್ ವಿರುದ್ಧ ಮಾಡಿದ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ ನ್ಯಾಯಾಧೀಶರ ಕುರಿತು ನೀಡಿದ ಹೇಳಿಕೆಗಳಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇವು ಅವರ ವೈಯಕ್ತಿಕ ಹೇಳಿಕೆಗಳು, ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಅಥವಾ ಅಂತಹ ಹೇಳಿಕೆಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಬಿಜೆಪಿ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ" ಎಂದು ಜೆಪಿ ನಡ್ಡಾ ಅವರು ಎಕ್ಸ್‌ನಲ್ಲಿ ತಡರಾತ್ರಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಜಾರ್ಖಂಡ್‌ನ ಗೊಡ್ಡಾದ ಸಂಸದ ನಿಶಿಕಾಂತ್ ದುಬೆ ಅವರು, "ದೇಶದಲ್ಲಿ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸಲು ಸುಪ್ರೀಂ ಕೋರ್ಟ್ ಕಾರಣವಾಗಿದೆ " ಎಂದು ಹೇಳಿದ್ದರು. ಸಂಸದರು ಅಲ್ಲಿಗೆ ನಿಲ್ಲದೆ, "ಸುಪ್ರೀಂ ಕೋರ್ಟ್ ತನ್ನ ಮಿತಿಗಳನ್ನು ಮೀರುತ್ತಿದೆ" ಎಂದು ವಾದಿಸಿದ್ದರು. ಪ್ರತಿಯೊಂದಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯನ್ನು ಮುಚ್ಚಬೇಕು ಎಂದು ಹೇಳಿದ್ದರು.
ಮತ್ತೊಬ್ಬ ಸಂಸದ ಸಂಸದ ದಿನೇಶ್ ಶರ್ಮಾ, ಸಂವಿಧಾನವನ್ನು ಉಲ್ಲೇಖಿಸಿ, "ಯಾರೂ ಲೋಕಸಭೆ ಮತ್ತು ರಾಜ್ಯಸಭೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು. ಇದೀಗ ಬಿಜೆಪಿ ತನ್ನ ಸಂಸದರಿಗೆ ತಿರುಗೇಟು ನೀಡಿದೆ. ಭಾರತೀಯ ಜನತಾ ಪಕ್ಷವು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತದೆ ಮತ್ತು ಅದರ ಆದೇಶಗಳು ಮತ್ತು ಸಲಹೆಗಳನ್ನು ಸಂತೋಷದಿಂದ ಸ್ವೀಕರಿಸಿದೆ ಏಕೆಂದರೆ ಒಂದು ಪಕ್ಷವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲಾ ನ್ಯಾಯಾಲಯಗಳು ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಮತ್ತು ಸಂವಿಧಾನದ ರಕ್ಷಣೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ನಾವು ನಂಬುತ್ತೇವೆ. ಅಂತಹ ಹೇಳಿಕೆಗಳನ್ನು ನೀಡದಂತೆ ನಾನು ಅವರಿಬ್ಬರಿಗೂ ಮತ್ತು ಉಳಿದ ಎಲ್ಲರಿಗೂ ಸೂಚನೆ ನೀಡಿದ್ದೇನೆ ಎಂದು ನಡ್ಡಾ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Kancha Gachibowli Land Row: ತೆಲಂಗಾಣ ಸರ್ಕಾರದಿಂದ ಮರಗಳ ಮಾರಣ ಹೋಮ; ಸುಪ್ರೀಂ ಕೋರ್ಟ್‌ನಿಂದ ಚಾಟಿ: ಏನಿದು ವಿವಾದ?
ತಮಿಳುನಾಡು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಕಾನೂನು ಸಮರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಕೆಲವು ದಿನಗಳ ನಂತರ ಬಿಜೆಪಿ ಸಂಸದರ ಈ ಕಟುವಾದ ಹೇಳಿಕೆಗಳು ಬಂದಿವೆ. ಈ ಪ್ರಕರಣದಲ್ಲಿ 10 ಮಸೂದೆಗಳಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲ ಆರ್.ಎನ್. ರವಿ ಅವರು ತೆಗೆದುಕೊಂಡ ನಿರ್ಧಾರವು "ಕಾನೂನುಬಾಹಿರ ಮತ್ತು ಅನಿಯಂತ್ರಿತ" ಎಂದು ತೀರ್ಪು ನೀಡಿತು. ಶಾಸಕಾಂಗವು ಎರಡನೇ ಬಾರಿಗೆ ಅಂಗೀಕರಿಸಿದ ಮಸೂದೆಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಸುಪ್ರೀಂ ಕೋರ್ಟ್ ಪೀಠವು ಮೂರು ತಿಂಗಳ ಗಡುವನ್ನು ನಿಗದಿಪಡಿಸಿತು.