ಆಪರೇಷನ್ ಸಿಂದೂರ್‌ನ ಮೊದಲ ದಿನವೇ ಭಾರತೀಯ ಸೇನೆ ಸೋತಿದೆ; ನಾಲಿಗೆ ಹರಿಬಿಟ್ಟ ಕೈ ಶಾಸಕ
ಆಪರೇಷನ್ ಸಿಂದೂರ್‌ನ ಮೊದಲ ದಿನವೇ ಭಾರತೀಯ ವಾಯುಸೇನೆಯು ಸೋತಿದೆ ಎಂದು ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಈಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರು ಆಪರೇಷನ್ ಸಿಂದೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
(ಸಂಗ್ರಹ ಚಿತ್ರ) -
ಪುಣೆ: ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನ ಬೈಸರನ್ ಕಣಿವೆಯಲ್ಲಿ ಕಳೆದ ಏಪ್ರಿಲ್ ತಿಂಗಳಾಂತ್ಯದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ (terror attack) ಪ್ರತಿಯಾಗಿ ಮೇ 7ರಂದು ಭಾರತೀಯ ಸೇನೆ (Indian army) ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯ ಮೊದಲ ದಿನವೇ ಭಾರತೀಯ ವಾಯುಸೇನೆಗೆ (Indian air force) ಭಾರಿ ಪ್ರಮಾಣದಲ್ಲಿ ಸೋಲುಂಟಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ (Former Maharashtra Chief Minister) ಮತ್ತು ಹಿರಿಯ ಕಾಂಗ್ರೆಸ್ ನಾಯಕ (Congress leader) ಪೃಥ್ವಿರಾಜ್ ಚವಾಣ್ (Prithviraj Chavan) ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂದೂರ್ ನ ಮೊದಲ ದಿನವೇ ಭಾರತೀಯ ವಾಯುಸೇನೆ ಸೋತಿದೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂದೂರ್‌ನ ಮೊದಲ ದಿನವೇ ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಪಾಕಿಸ್ತಾನದಿಂದ ಹೊಡೆದುರುಳಿಸುವ ಸಾಧ್ಯತೆಯ ನಡುವೆಯೇ ಭಾರತೀಯ ವಾಯುಪಡೆಯ ಯುದ್ಧವಿಮಾನಗಳು ಸಂಪೂರ್ಣವಾಗಿ ನೆಲ ಕಚ್ಚಿವೆ ಎಂದು ಹೇಳಿದ್ದಾರೆ.
US Travel Ban: 30 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧ; ಇದೇನು ಆದೇಶ ಹೊರಡಿಸಿದ ಟ್ರಂಪ್!
ಮೇ 7ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ಒಂದೇ ಒಂದು ವಿಮಾನವೂ ಕೂಡ ಹಾರಲಿಲ್ಲ. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹಾರಾಟ ನಡೆಸಿದ್ದರೆ ಪಾಕಿಸ್ತಾನವು ಅದನ್ನು ಹೊಡೆದುರುಳಿಸುತ್ತಿತ್ತು. ಅದಕ್ಕಾಗಿ ಇಲ್ಲಿನ ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.
ಭಾರತೀಯ ವಾಯುಸೇನೆಯು ಯುದ್ದಗಳನ್ನು ಗಾಳಿಯಲ್ಲಿ ನಡೆಸುತ್ತದೆ. ಇದಕ್ಕಾಗಿ ದೊಡ್ಡ ಮಿಲಿಟರಿ ಪಡೆಗಳನ್ನು ನಿರ್ವಹಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ ಅವು, ಆಪರೇಷನ್ ಸಿಂದೂರ್ ನಲ್ಲಿ ಮಿಲಿಟರಿಯ ಒಂದು ಕಿಲೋಮೀಟರ್ ಕೂಡ ಚಲಿಸಿಲ್ಲ. ಎರಡು ಅಥವಾ ಮೂರು ದಿನಗಳಲ್ಲಿ ನಡೆದಿರುವುದು ಕೇವಲ ವೈಮಾನಿಕ ಮತ್ತು ಕ್ಷಿಪಣಿ ಯುದ್ಧವಾಗಿತ್ತು. ಭವಿಷ್ಯದಲ್ಲಿಯೂ ಸಹ ಇದೇ ರೀತಿಯ ಯುದ್ಧಗಳು ನಡೆಯುತ್ತವೆ. ಹೀಗಿರುವಾಗ 12 ಲಕ್ಷ ಸೈನಿಕರ ಸೈನ್ಯವನ್ನು ನಿರ್ವಹಿಸುವ ಅಗತ್ಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಶಾಸಕನ ಹೇಳಿಕೆಗೆ ಈ ಹಿಂದೆಯೇ ವಾಯುಸೇನೆ ಪ್ರತಿಕ್ರಿಯೆ ನೀಡಿತ್ತು. ಆದರೂ ಇಂಡೋನೇಷ್ಯಾದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಅವರ ಹೇಳಿಕೆಯನ್ನು ಭಾರತ ನಿರಾಕರಿಸಿದೆ.
Donald Trump: "ಇಸ್ಲಾಮಿಕ್ ಭಯೋತ್ಪಾನೆಯನ್ನು ಕಿತ್ತೆಸೆಯಬೇಕು"; ಸಿಡ್ನಿ ಗುಂಡಿನ ದಾಳಿ ಖಂಡಿಸಿದ ಟ್ರಂಪ್
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಮೇ 7 ರಂದು ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ನಡೆಸಿದ್ದು, ಇದರಲ್ಲಿ 26 ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಭಾರತೀಯ ವಾಯುಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯು ಮೇ 7 ರಿಂದ 10 ರವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.