Congress New Head Office : ಕಾಂಗ್ರೆಸ್‌ನ ನೂತನ ಪ್ರಧಾನ ಕಚೇರಿ ‘ಇಂದಿರಾ ಭವನ’ ಉದ್ಘಾಟನೆ ; ಸೋನಿಯಾ , ರಾಹುಲ್ ಸೇರಿದಂತೆ ಹಲವು ಗಣ್ಯರು ಭಾಗಿ
Congress New Head Office : ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ನೂತನ ಪ್ರಧಾನ ಕಚೇರಿಯ ಉದ್ಘಾಟನೆ ಮಾಡಲಾಗಿದೆ. ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ನವದೆಹಲಿ ಜ. 15, 2025 : ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯನ್ನು (AICC) ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, (Sonia Gandhi) ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬುಧವಾರ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ದೆಹಲಿಯ 9A, ಕೋಟ್ಲಾ ರಸ್ತೆಯಲ್ಲಿ ನೂತನ ಕಚೇರಿಯನ್ನು ಉದ್ಘಾಟನೆ ಮಾಡಿದ್ದಾರೆ.
ಪ್ರಧಾನ ಕಚೇರಿಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಇಂದಿರಾ ಭವನ ಎಂದು ಇಡಲಾಗಿದೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ನೂತನ ಪ್ರಧಾನ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ವಂದೇ ಮಾತರಂ ಹಾಗೂ ರಾಷ್ಟ್ರಗೀತೆಯನ್ನು ಹಾಡಿದರು. ನಂತರ ಸೋನಿಯಾ ಗಾಂಧಿ ಅವರು ಕಟ್ಟಡವನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ, ಸುಖುವಿಂದರ್ ಸಿಂಗ್ ಸುಖು, ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.
Madame Sonia Gandhi & Mallikarjun Kharge inaugurated the new Congress HQs ‘Indira Bhavan’
— Ankit Mayank (@mr_mayank) January 15, 2025
Last Congress office saw 4 PMs, this one will see 40 PMs 🔥 pic.twitter.com/C0NpqV3eOG
ಕೇಂದ್ರದಲ್ಲಿ ಕಾಂಗ್ರೆಸ್ ತನ್ನ ಅಧಿಕಾರವನ್ನು ಕಳೆದುಕೊಂಡ ನಂತರ ಹೊಸ ಎಐಸಿಸಿ ಪ್ರಧಾನ ಕಚೇರಿಯ ನಿರ್ಮಾಣವು ವಿಳಂಬವಾಗಿತ್ತು. ಇದೀಗ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ, ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಕಾರ್ಯಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿದೆ.