ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಂಸತ್‌ನಲ್ಲಿ ಪ್ರಧಾನಿ ಮೇಲೆ ದಾಳಿಗೆ ಕಾಂಗ್ರೆಸ್‌ ಸಂಚು? ಏಕಾಏಕಿ ಮೋದಿ ಭಾಷಣ ನಿಂತಿದ್ಯಾಕೆ?

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಲಾಗಿದ್ದು, ಪ್ರಧಾನಿ ಮೋದಿ ಮೇಲೆ ಕಾಂಗ್ರೆಸ್‌ ದೈಹಿಕ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿತು.

ಸಂಗ್ರಹ ಚಿತ್ರ

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಲಾಗಿದ್ದು, ಪ್ರಧಾನಿ ಮೋದಿ (Narendra Modi) ಮೇಲೆ ಕಾಂಗ್ರೆಸ್‌ ದೈಹಿಕ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿತು, ಮಹಿಳಾ ಸಂಸದರು ಪ್ರಧಾನಿಯ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಾರೆ ಎಂಬುದು ಹೇಗೆ ನಂಬಲು ಸಾಧ್ಯ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಲೋಕಸಭೆಯಲ್ಲಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ (ನಿವೃತ್ತ) ಅವರ ಅಪ್ರಕಟಿತ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅವಕಾಶ ನೀಡದ ಕಾರಣ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಗುರುವಾರ ಲೋಕಸಭೆ ಆರಂಭವಾಗುತ್ತಿದ್ದಂತೇ, ಪ್ರಧಾನಿ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನು ಪ್ರಶ್ನಿಸಿದ ಪ್ರತಿಪಕ್ಷ ನಾಯಕರು, ಗದ್ದಲದ ನೆಪ ಹೇಳಿ ಪ್ರಧಾನಿ ಭಾಷಣದಿಂದ ತಪ್ಪಿಸಿಕೊಂಡಿರುವುದು ಸದನದ ಸಂಪ್ರದಾಯಕ್ಕೆ ಮಾಡಿದ ಅವಮಾನ ಎಂದರು.

ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಸ್ಪೀಕರ್ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಎಂದರೆ ಮಾತನಾಡಲು ಬಿಡುವುದಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಸಭಾ ಮಾಜಿ ಸದಸ್ಯೆ ಅವರ ಸರ್ವೇ ಕಾರ್ಯ ವಿಳಂಬ ಪ್ರಕರಣ : ಸ್ವಯಂ ಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತರು

ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಭಾಷಣ ಮಾಡುವುದನ್ನು ಪ್ರಧಾನಿ ತಪ್ಪಿಸಿಕೊಂಡಿದ್ದು ಇದುವರೆಗಿನ ಅಭೂತಪೂರ್ವ ಘಟನೆಯಾಗಿದೆ ಎಂದು ಮೂಲಗಳು ತಿಳಿಸಿವೆ, ಪ್ರಧಾನಿಯವರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Vishakha Bhat Heggar

View all posts by this author