ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಧಾನಿ ನಿವಾಸದ ಬಳಿ ನಡೆದ ಕಾಂಗ್ರೆಸ್ ಪ್ರತಿಭಟನೆಯನ್ನೇ ಟೀಕಿಸಿದ ಸೋನಮ್ ವಾಂಗ್ಚುಕ್ ಪತ್ನಿ! ಕಾರಣವೇನು?

Congress Protest Near PM's Residence: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಪತ್ನಿ ಟೀಕಿಸಿದ್ದಾರೆ. ಕಾಂಗ್ರೆಸ್ ನಡೆಸಿದ ಧರಣಿ ಪ್ರಾಮಾಣಿಕವಲ್ಲ ಎಂದು ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಸೋನಮ್ ವಾಂಗ್ಚುಕ್ ಪತ್ನಿ

ನವದೆಹಲಿ, ಜು.23: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದ ಬಳಿ ಕಾಂಗ್ರೆಸ್ ನಡೆಸಿದ ದಿಢೀರ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ (Rahul Gandhi) ಮತ್ತು ಹಲವಾರು ನಾಯಕರನ್ನು ಬಂಧಿಸಲಾಗಿತ್ತು. ಈ ಪ್ರತಿಭಟನೆಯನ್ನು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರ ಪತ್ನಿ ಟೀಕಿಸಿದ್ದಾರೆ. ಜುಲೈ 21 ರಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ (Congress Protest) ಪ್ರಾಮಾಣಿಕವಲ್ಲ ಎಂದು ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ. ಬದಲಾಗಿ ನಾಯಕರು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಬೇಕಿತ್ತು ಎಂದು ಅವರು ಹೇಳಿದ್ದಾರೆ.

ರಾಜಕಾರಣಿಗಳು, ವಾಂಗ್‌ಚುಕ್ ಮತ್ತು ಅವರ ಖ್ಯಾತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆಂಗ್ಮೋ ಹೇಳಿದ್ದಾರೆ. ಆದರೆ ಸಾರ್ವಜನಿಕರನ್ನು ಇನ್ನು ಮುಂದೆ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಕಳೆದ ವಾರ ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಸೇರಲ್ಪಟ್ಟ ವಾಂಗ್‌ಚುಕ್ ಅವರು ಇದೀಗ ಆಸ್ಪತ್ರೆಯಿಂದಲೇ ಉಪಾವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ. ಅವರ ಉಪವಾಸ ಇಂದು (ಗುರುವಾರ, ಜು.23) 26 ನೇ ದಿನಕ್ಕೆ ಕಾಲಿಟ್ಟಿದೆ.

ಪ್ರಧಾನಿ ನಿವಾಸದ ಹೊರಗೆ ನಡೆದ ಪ್ರತಿಭಟನೆಯಲ್ಲಿ ಪ್ರಾಮಾಣಿಕತೆಯ ಕೊರತೆ ಇತ್ತು. ಸಾರ್ವಜನಿಕರನ್ನು ಇನ್ನು ಮುಂದೆ ಮೋಸಗೊಳಿಸಲು ಸಾಧ್ಯವಿಲ್ಲ. ಇದು ಜಾಗೃತ ಭಾರತ. ಪ್ರಾಮಾಣಿಕರಲ್ಲದವರನ್ನು ಯುವಕರು ಹೊರಹಾಕುತ್ತಾರೆ ಎಂದು ಆಂಗ್ಮೋ ಹೇಳಿದರು.

'ಶಿಕ್ಷಣ ಎಲ್ಲರಿಗೂ ಸೇರಿದ್ದು'; ಸಿಜೆಪಿ ಪ್ರತಿಭಟನೆಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಪ್ರತಿಕ್ರಿಯೆ

ಅಂದಹಾಗೆ, ಸಂಸತ್ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ನಡೆದ ದಮನದ ಕ್ರಮವನ್ನು ರಾಹುಲ್ ಮತ್ತು ಕಾಂಗ್ರೆಸ್ ಹಿರಿಯ ನಾಯಕರು ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಕಾಂಗ್ರೆಸ್ ಮಂಗಳವಾರ (ಜು. 21) ಧರಣಿ ನಡೆಸಿತ್ತು. ರಾಹುಲ್ ಅವರನ್ನು ಪ್ರತಿಭಟನಾ ಸ್ಥಳದಿಂದ ಎಳೆದೊಯ್ದು ಬಂಧಿಸಲಾಯಿತು. ಈ ಗಲಾಟೆಯಲ್ಲಿ ಅವರ ಮೂಗಿನಿಂದ ರಕ್ತಸ್ರಾವವಾಯಿತು.

ಕಾಕ್‌ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗಳು ರಾಜಕೀಯ ವರ್ಗಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿವೆ. ಇನ್ನು ಮುಂದೆ ಕೇವಲ ಸಾಂಕೇತಿಕ ಕ್ರಮಗಳು ಅಥವಾ ತೋರಿಕೆಯ ಭರವಸೆಗಳು ಸಾಕಾಗುವುದಿಲ್ಲ ಎಂದು ಅವರು ಹೇಳಿದರು. “ಈ ಚಳವಳಿಯು ಪ್ರತಿಯೊಬ್ಬ ರಾಜಕೀಯ ನಾಯಕನಿಗೂ ಅವರು ಹೇಳಿದ್ದನ್ನು ಕಾರ್ಯರೂಪಕ್ಕೆ ತರಬೇಕು ಎಂಬುದನ್ನು ತೋರಿಸಿಕೊಟ್ಟಿದೆ. ಇನ್ನು ಮುಂದೆ ಅವರು ಜನರನ್ನು ದಾರಿ ತಪ್ಪಿಸಲು ಅಥವಾ ಪ್ರಾಮಾಣಿಕತೆಯಿಲ್ಲದೆ ವರ್ತಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಚೆವೆನಿಂಗ್ ವಿದ್ವಾಂಸರೂ ಆಗಿರುವ ಆಂಗ್ಮೋ, ಈ ಚಳುವಳಿ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಪ್ರತಿಪಾದಿಸಿದರು.

ಇನ್ನು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್, ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದರು ಎಂದು ವಾಂಗ್ಚುಕ್ ಹೇಳಿದ್ದಾರೆ.