ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಘೋಷಣೆಗೆ ಮುನ್ನ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು: ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ ಎಂದ ಕಾಂಗ್ರೆಸ್

2026ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಂಗಾಳದ 294 ಸ್ಥಾನಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ರೀತಿಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಸಂಗ್ರಹ ಚಿತ್ರ

ನವದೆಹಲಿ: ಈ ಬಾರಿ ನಡೆಯಲಿರುವ ಪಶ್ಚಿಮ ಬಂಗಾಳದ (west bengal) ವಿಧಾನ ಸಭಾ ಚುನಾವಣೆಯಲ್ಲಿ (Assembly election) ಕಾಂಗ್ರೆಸ್ (Congress) ಏಕಾಂಗಿಯಾಗಿ ಸ್ಪರ್ಧಿಸಲಿದೆ. ಇಲ್ಲಿನ 294 ಸ್ಥಾನಗಳಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ. ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress National President Mallikarjun Kharge) ಅವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working Committee) ಸಭೆಯಲ್ಲಿ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗ (CPI(M)-led Left Front) ಅಥವಾ ತೃಣಮೂಲ ಕಾಂಗ್ರೆಸ್ (Trinamool Congress) ಜೊತೆ ಮೈತ್ರಿ ಮಾಡಿಕೊಳ್ಳದೇ ಇರಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ಮುಂದಿನ ಮಾರ್ಚ್- ಏಪ್ರಿಲ್ ನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗ ಅಥವಾ ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧಿಕೃತವಾಗಿ ತಿಳಿಸಿದೆ.

SBI CBO Recruitment 2026: ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ
ಪಶ್ಚಿಮ ಬಂಗಾಳದ ಪಕ್ಷದ ಪ್ರತಿನಿಧಿಗಳಾಗಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುವಾಂಕರ್ ಸರ್ಕಾರ್, ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಐದು ಬಾರಿ ಲೋಕಸಭಾ ಸದಸ್ಯರಾಗಿರುವ ಅಧೀರ್ ರಂಜನ್ ಚೌಧರಿ ಮತ್ತು ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಲೋಕಸಭಾ ಸದಸ್ಯ ಇಶಾ ಖಾನ್ ಚೌಧರಿ ನೇತೃತ್ವದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳದ ಪಕ್ಷದ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಅಥವಾ ಸೀಟು ಹಂಚಿಕೆ ಕುರಿತು ಈ ಹಿಂದಿನ ಅನುಭವಗಳು ಪಕ್ಷದ ಕಾರ್ಯಕರ್ತರನ್ನು ದುರ್ಬಲಗೊಳಿಸಿವೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲರೊಂದಿಗಿನ ಚರ್ಚಿಸಿದ ಬಳಿಕ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಿದ್ಧತೆಗಳು ಪ್ರಾರಂಭವಾಗುತ್ತವೆ ಎಂದು ತಿಳಿಸಿದರು.

ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇನ್ನು ಹಲವರು ಉಪಸ್ಥಿತರಿದ್ದರು.

ಸಿಪಿಐ(ಎಂ) ನೇತೃತ್ವದ ಎಡರಂಗದೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದ ಅಧೀರ್ ರಂಜನ್ ಚೌಧರಿ ಸಭೆಯ ಬಳಿಕ ಮಾತನಾಡಿ, ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಟಿಪ್ಸ್ ನೀಡಿದ್ರೆ ಇಲ್ಲಿ ಸಿಬ್ಬಂದಿ ಡ್ಯಾನ್ಸ್ ಮಾಡ್ತಾರೆ! ಬೆಂಗಳೂರಿನ ಈ ಕೆಫೆಯ ವಿಶಿಷ್ಟ ಸಂಪ್ರದಾಯಕ್ಕೆ ಫಿದಾ ಆದ ಗ್ರಾಹಕರು!

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ 2016ರಿಂದ ಎಡರಂಗ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯಲ್ಲಿ ಸಿಪಿಐ(ಎಂ) ಮಾಜಿ ಪ್ರಧಾನ ಕಾರ್ಯದರ್ಶಿ ದಿವಂಗತ ಸೀತಾರಾಮ್ ಯೆಚೂರಿ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಐದು ಬಾರಿ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಪ್ರಮುಖ ಪಾತ್ರವಹಿಸಿದ್ದರು. ಯೆಚೂರಿಯವರ ನಿಧನದ ಬಳಿಕ ಸಿಪಿಐ(ಎಂ)ನಲ್ಲಿ ಕಾಂಗ್ರೆಸ್ ಜೊತೆ ಸೇರಲು ಧ್ವನಿ ಎತ್ತುವ ಒಬ್ಬ ರಾಷ್ಟ್ರೀಯ ನಾಯಕನೂ ಇಲ್ಲ. ಹೀಗಾಗಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ವಿದ್ಯಾ ಇರ್ವತ್ತೂರು

View all posts by this author