ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ನಡುವೆ 88 ನಿಮಿಷಗಳ ಮಾತುಕತೆ: ಸಭೆಯಲ್ಲಿ ಚರ್ಚೆಯಾಗಿದ್ದೇನು?

ಕೇಂದ್ರ ಮಾಹಿತಿ ಆಯೋಗದ ಹುದ್ದೆಗಳ ನೇಮಕಾತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ನಡುವೆ ನಡೆದ ಚರ್ಚೆ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮಾಹಿತಿ ಆಯುಕ್ತರ ಅಭ್ಯರ್ಥಿಗಳ ಆಯ್ಕೆ ಕುರಿತು ಉಭಯ ನಾಯಕರು ಪರಸ್ಪರ ಚರ್ಚಿಸಿದ್ದಾರೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿಯವರು ಎಲ್ಲಾ ನೇಮಕಾತಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹಾಗೂ ಲಿಖಿತ ರೂಪದಲ್ಲಿ ತಮ್ಮ ಆಕ್ಷೇಪಣೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ನಡುವೆ 88 ನಿಮಿಷ ಚರ್ಚೆಯಾಗಿದ್ದೇನು?

ರಾಹುಲ್‌ ಗಾಂಧಿ, ನರೇಂದ್ರ ಮೋದಿ -

ಹರೀಶ್‌ ಕೇರ
ಹರೀಶ್‌ ಕೇರ Dec 11, 2025 12:22 PM

ನವದೆಹಲಿ, ಡಿ.11: ಖಾಲಿಯಿರುವ ಮಾಹಿತಿ ಆಯೋಗದ ಹುದ್ದೆಗಳಿಗೆ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನಡುವೆ ನಡೆದ 88 ನಿಮಿಷಗಳ ಸುದೀರ್ಘ ಸಭೆ ಸಂಸತ್ತಿನಲ್ಲಿ ಉಹಾಪೋಹಗಳಿಗೆ ಕಾರಣವಾಗಿದೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ಆಯುಕ್ತರ ಅಭ್ಯರ್ಥಿಗಳ ಆಯ್ಕೆ ಕುರಿತು ಉಭಯ ನಾಯಕರು ಪರಸ್ಪರ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಾಮನಿರ್ದೇಶಿತ ಒಬ್ಬ ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರು ಮಾಹಿತಿ ಆಯೋಗ, ಚುನಾವಣಾ ಆಯೋಗ ಮತ್ತು ವಿಜಿಲೆನ್ಸ್‌ ಇಲಾಖೆಯ ಪ್ರಮುಖ ಉನ್ನತ ಹುದ್ದೆಗಳ ಕುರಿತು ಚರ್ಚಿಸಲು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರೀಕ್ಷೆಯಿದೆ.

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಹುಲ್‌ ಗಾಂಧಿಯವರು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಕಛೇರಿಗೆ ತಲುಪಿದ ಬಳಿಕ 1 ಗಂಟೆ 7 ನಿಮಿಷಕ್ಕೆ ಸರಿಯಾಗಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಮಾಹಿತಿ ಆಯೋಗ, ಚುನಾವಣಾ ಆಯೋಗದ ಕುರಿತು ಚರ್ಚೆ ನಡೆಸಿದ ಬಳಿಕ ಮಾಹಿತಿ ಆಯುಕ್ತರ ನೇಮಕ ಮಾತ್ರವಲ್ಲ, ಎಂಟು ಜನ ಮಾಹಿತಿ ಆಯುಕ್ತರು ಮತ್ತು ವಿಜಿಲೆನ್ಸ್ಸ್‌ ಆಯುಕ್ತರ ನೇಮಕದ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿಯವರು ಎಲ್ಲಾ ನೇಮಕಾತಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹಾಗೂ ಲಿಖಿತ ರೂಪದಲ್ಲಿ ತಮ್ಮ ಆಕ್ಷೇಪಣೆ ಸಲ್ಲಿಸಿದ್ದು, ಆಯ್ಕೆಯ ಮಾನದಂಡಗಳ ಕುರಿತಾಗಿ ತಕರಾರು ಮತ್ತು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಸಮಿತಿಯ ಮುಂದೆ ಪ್ರಸ್ತಾಪಿಸಲಾದ ದಲಿತ, ಆದಿವಾಸಿ, ಒಬಿಸಿ/ ಇಬಿಸಿ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳು ಸಭೆಗೆ ಗೈರು ಹಾಜರಾಗಿರುವ ವಿಚಾರದಲ್ಲಿ ರಾಹುಲ್‌ ಗಾಂಧಿಯವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಈ ಹುದ್ದೆಗಳಿಗೆ ಅರ್ಜಿದಾರರ ಜಾತಿವಾರು ಮಾಹಿತಿಯನ್ನು ರಾಹುಲ್‌ ಗಾಂಧಿಯವರು ಕೇಳಿದ್ದು, ಅರ್ಜಿದಾರರ ಗುಂಪಿನಲ್ಲಿ ಶೇ. 7ಕ್ಕಿಂತ ಕಡಿಮೆ ಜನರು ಬಹುಜನ ಬಹುಸಂಖ್ಯಾತ ಸಮುದಾಯಗಳಿಂದ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ

ಈ ಕುರಿತು ಸಂಸತ್ತಿನ ಕಾರಿಡಾರ್‌ಗಳಲ್ಲಿ ಚರ್ಚೆ ತೀವ್ರವಾಗಿದ್ದು, ಕೇಂದ್ರ ಮಾಹಿತಿ ಆಯೋಗದಲ್ಲಿ ಮುಖ್ಯ ಆಯುಕ್ತರ ಹುದ್ದೆಯೂ ಸೇರಿದಂತೆ ಒಟ್ಟು 8 ಹುದ್ದೆಗಳು ಖಾಲಿಯಿವೆ. ಆರ್‌ಟಿಐ ಅರ್ಜಿದಾರರು ಸಲ್ಲಿಸಿರುವ ದೂರುಗಳು ಮತ್ತು ಮೇಲ್ಮನವಿಗಳನ್ನು ಅಧಿಕಾರಿಗಳೇ ಪರಿಶೀಲಿಸುತ್ತಾರೆ. ಸೆಪ್ಟೆಂಬರ್ ಮಧ್ಯದವರೆಗೆ ಹಿರಾಲಾಲ್ ಸಮಾರಿಯಾ ಭಾರತದ ಮುಖ್ಯ ಮಾಹಿತಿ ಆಯುಕ್ತರಾಗಿ ಸೇವೆ ಸಲ್ಲಿಸಿದರು. ಸೆಪ್ಟೆಂಬರ್ 13 ರಂದು ಅವರು ನಿವೃತ್ತಿ ಹೊಂದಿದ ಬಳಿಕ ಈ ಹುದ್ದೆ ಖಾಲಿಯಾಗಿದೆ. ಪ್ರಸ್ತುತ ಇಲಾಖೆಯಲ್ಲಿ ಕೇವಲ ಇಬ್ಬರು ಮಾಹಿತಿ ಆಯುಕ್ತರು ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ.

ಅಂತಿಮ ನೇಮಕಾತಿಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12(3) ರ ಅಡಿಯಲ್ಲಿ, ಪ್ರಧಾನ ಮಂತ್ರಿಗಳು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೆ ಹೆಸರುಗಳನ್ನು ಆಯ್ಕೆ ಮಾಡಲು ಮತ್ತು ಶಿಫಾರಸು ಮಾಡಲು ವಿರೋಧ ಪಕ್ಷದ ನಾಯಕರು ಮತ್ತು ಪ್ರಧಾನ ಮಂತ್ರಿಗಳು ನಾಮನಿರ್ದೇಶನ ಮಾಡಿದ ಕೇಂದ್ರ ಸಚಿವರು ಇರುತ್ತಾರೆ.