#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Cylinder Blast: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್‌ಗಳ ಸ್ಫೋಟ!

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್​ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಿರಂತರ ಸಿಲಿಂಡರ್‌ ಸ್ಫೋಟವಾಗುತ್ತಿದೆ.

ಕುಂಭಮೇಳದಲ್ಲಿ ಸಿಲಿಂಡರ್‌ಗಳ ಸ್ಫೋಟ!

ಕುಂಭಮೇಳ ಬೆಂಕಿ ಅವಘಡ

Profile Deekshith Nair Jan 19, 2025 5:51 PM

ಲಖನೌ: ಉತ್ತರ ಪ್ರದೇಶದ(Uttar Pradesh) ಪ್ರಯಾಗ್​ರಾಜ್​ನ ಬಹುದೊಡ್ಡ ಧಾರ್ಮಿಕ ಉತ್ಸವವಾದ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್​ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ(Cylinder Blast)

ಶಾಸ್ತ್ರಿ ಬ್ರಿಡ್ಜ್​ ಸೆಕ್ಟರ್ 19ರಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿವೆ. ಸಾಧು, ಸಂತರು ಅಡುಗೆ ಮಾಡುವಾಗ ಟೆಂಟ್‌ಗಳಲ್ಲಿ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಆಗ ಆ ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೊದಲು ಒಂದು ಟೆಂಟ್​ನಲ್ಲಿ ಹೊತ್ತಿದ ಬೆಂಕಿ ಬಳಿಕ ಪಕ್ಕದ 25ಕ್ಕೂ ಹೆಚ್ಚು ಟೆಂಟ್​ಗಳಿಗೆ ಆವರಿಸಿದೆ ಎನ್ನಲಾಗಿದೆ. ಅಲ್ಲದೇ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೊಂದಾಗಿ ಸಿಲಿಂಡರ್​ಗಳು ಸ್ಪೋಟಗೊಂಡಿವೆ. ಭಾರೀ ಅಗ್ನಿ ಅವಘಡದಲ್ಲಿ ಹಲವು ವಾಹನಗಳು ಸುಟ್ಟು ಭಸ್ಮಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಮಾಹಿತಿ ಸಿಕ್ಕ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಆರಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮಹಾ ಕುಂಭಮೇಳಕ್ಕೆ ಇಂದು ಕೂಡ ಸಾಧು ಸಂತರು ಸೇರಿದಂತೆ ಕೋಟ್ಯಂತರ ಭಕ್ತರು ಆಗಮಿಸಿದ್ದರು.



ಇಂದು ಹಲವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಇದೇ ವೇಳೆಯಲ್ಲಿ ಪ್ರಯಾಗ್​ರಾಜ್​ನ ಶಾಸ್ತ್ರಿ ಬ್ರಿಡ್ಜ್​ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಕರ ಸಂಕ್ರಾಂತಿಯಂದೇ ಕೋಟ್ಯಂತರ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು. ಫೆಭ್ರವರಿ 26ರವರೆಗೂ ವೈಭವದ ಕುಂಭಮೇಳ ನಡೆಯಲಿದೆ.

ಈ ಸುದ್ದಿಯನ್ನೂ ಓದಿ:Mahakumbh 2025: ಮಹಾ ಕುಂಭಮೇಳ;ಬೆಂಗಳೂರು-ಪ್ರಯಾಗರಾಜ್ ವಿಮಾನಗಳು 41% ದುಬಾರಿ!