Karur Stampede: ಕರೂರು ಕಾಲ್ತುಳಿತದಿಂದ 36 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ
ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 36 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

-

ದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ (Vijay) ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 36 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 16 ಮಹಿಳೆಯರು, 8 ಮಂದಿ ಮಕ್ಕಳು ಸೇರಿದ್ದಾರೆ. ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ವಿಜಯ್ ತಮ್ಮ ತಮಿಳಗ ವೆಟ್ರಿ ಕಳಗಂ (Tamilaga Vettri Kazhagam) ಪಕ್ಷದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
ʼʼತಮಿಳುನಾಡಿನ ಕರೂರಿನಲ್ಲಿ ಆಯೋಜಿಸಿದ್ದ ರಾಜಕೀಯ ರ‍್ಯಾಲಿಯಲ್ಲಿ ನಡೆದ ಘಟನೆ ತಿಳಿದು ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದ ಜತೆಗೆ ನಾವಿದ್ದೇವೆ. ಈ ಸಂಕಷ್ಟದ ಸಮಯದಲ್ಲಿ ಅವರಿಗಾಗಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಆದಷ್ಟು ಶೀಘ್ರವಾಗಿ ಚೇತರಿಕೊಳ್ಳಲಿʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಮೋದಿ ಅವರ ಎಕ್ಸ್ ಪೋಸ್ಟ್:
The unfortunate incident during a political rally in Karur, Tamil Nadu, is deeply saddening. My thoughts are with the families who have lost their loved ones. Wishing strength to them in this difficult time. Praying for a swift recovery to all those injured.
— Narendra Modi (@narendramodi) September 27, 2025
ಈ ದುರಂತಕ್ಕೆ ನಟ, ರಾಜಕಾರಣಿ ವಿಜಯ್ ಮತ್ತು ರ‍್ಯಾಲಿ ಆಯೋಜಕರನ್ನೇ ಡಿಎಂಕೆ ದೂಷಿಸಿದೆ. ಜನರನ್ನು ಬಿಸಿಲಿನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಿದ್ದೇ ದುರಂತಕ್ಕೆ ಕಾರಣ ಎಂದು ಡಿಎಂಕೆ ನಾಯಕ ಅಣ್ಣಾದೊರೈ ಆರೋಪಿಸಿದ್ದಾರೆ. "ಸಮಸ್ಯೆ ಏನೆಂದು ನಮಗೆ ಅರ್ಥವಾಗುತ್ತಿದೆ. ಇದು ಈ ಕಾರ್ಯಕ್ರಮದ ಆಯೋಜಕರು ಮಾಡಿದ ಉದ್ದೇಶಪೂರ್ವಕ ತಂತ್ರʼʼ ಎಂದು ದೂರಿದ್ದಾರೆ.
கரூரில் நடைபெற்ற தமிழக வெற்றிக் கழகக் கட்சியின் பிரச்சாரக் கூட்டத்தில் அதன் தலைவர் விஜய் அவர்கள் பேசுகையில் ஏற்பட்ட கூட்ட நெரிசலில் சிக்கி 29 க்கும் மேற்பட்டோர் பேர் உயிரிழந்ததாகவும், மற்றும் பலர் மயக்கமடைந்து மருத்துவமனையில் சிகிச்சை பெற்று வருவதாகவும் வரும் செய்தி…
— Edappadi K Palaniswami-SayYEStoWomenSafety&AIADMK (@EPSTamilNadu) September 27, 2025
ಈ ಸುದ್ದಿಯನ್ನೂ ಓದಿ: Vijay's Rally Stampede: 6 ಗಂಟೆ ವಿಳಂಬ... 30ಸಾವಿರಕ್ಕೂ ಅಧಿಕ ಜನ; ವಿಜಯ್ ರ‍್ಯಾಲಿಯಲ್ಲಿ ಅಷ್ಟಕ್ಕೂ ನಡೆದಿದ್ದೇನು?
ಮೃತರ ಕುಟುಂಬಕ್ಕೆ 10 ಲಕ್ಷ ರೂ. ಘೋಷಣೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಿಸಿದ್ದಾರೆ. ಇತ್ತ ದುರಂತದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ವಿಜಯ್ ಕರೂರಿನಿಂದ ತೆರಳಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಹೀಗಾಗಿ ರಾಜ್ಯದ ವಿವಿಧ ಚುನಾವಣೆ ಸಮಾವೇಶ ನಡೆಸಲಾಗುತ್ತಿದೆ. ಚಿತ್ರರಂಗದಿಂದ ದೂರ ಸರಿದು ವಿಜಯ್ ಕಳೆದ ವರ್ಷ ತಮಿಳಗ ವೆಟ್ರಿ ಕಳಗಂ ಪಕ್ಷ ಹುಟ್ಟು ಹಾಕಿದ್ದಾರೆ. ಪಕ್ಷದ ಅಭ್ಯರ್ಥಿಗಳು ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.