Operation Sindoor: ಆಪರೇಷನ್ ಸಿಂಧೂರ್- ರಕ್ಷಣಾ ಸಚಿವಾಲಯದಿಂದ ಇಂದು ಬೆಳಗ್ಗೆ 10ಗಂಟೆಗೆ ಮಹತ್ವದ ಸುದ್ದಿಗೋಷ್ಠಿ
India attack Pakistan: ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್ ಪತರುಗುಟ್ಟಿ ಹೋಗಿದೆ.
 
                                -
 Rakshita Karkera
                            
                                May 7, 2025 8:38 AM
                                
                                Rakshita Karkera
                            
                                May 7, 2025 8:38 AM
                            ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ(Operation Sindoor) ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (POK)ದ ಒಂಬತ್ತು ಸ್ಥಳಗಳನ್ನು ಹೊಡೆದುರುಳಿಸುವ ಮೂಲಕ ಭಾರತ ಸೇಡು ತೀರಿಸಿಕೊಂಡಿದೆ. ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದ್ದು, ಈ ಬಗ್ಗೆ ಭಾರತೀಯ ಸೇನೆಯು ಇಂದು ಬೆಳಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದೆ. ಸುದ್ದಿಗೋಷ್ಠಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸೇನಾ ಮುಖ್ಯಸ್ಥರು ಭಾಗಿಯಾಗುವ ಸಾಧ್ಯತೆ ಇದೆ.
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್ ಪತರುಗುಟ್ಟಿ ಹೋಗಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಹಾಗೂ POK ಅಲ್ಲಿರುವ 9 ಸ್ಥಳಗಳಾದ ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ.
ಈ ಸುದ್ದಿಯನ್ನೂ ಓದಿ: Operation Sindoor: ಪಾಕ್ ವಿರುದ್ಧ ಪ್ರತೀಕಾರದ ದಾಳಿಗೆ ʻಆಪರೇಷನ್ ಸಿಂಧೂರ್ʼ ಹೆಸರಿಟ್ಟಿದ್ದೇಕೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.
ಮತ್ತೊಂದೆಡೆ ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಭಾರತದ ದಾಳಿಯನ್ನು ಖಚಿತಪಡಿಸಿರುವ ಪಾಕಿಸ್ತಾನ, ಭಾರತೀಯ ದಾಳಿಯಲ್ಲಿ 9 ಸ್ಥಳಗಳು ಹಾನಿಗೊಳಗಾಗಿವೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿತ್ತು.
 
            