ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗೆಲುವಿನ ಅಂತರಕ್ಕಿಂತ ಡಿಲೀಟ್ ಆದ ಮತಗಳೇ ಹೆಚ್ಚು: ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್‌ ವಿರುದ್ಧ ಟಿಎಂಸಿ ಕಿಡಿ

Deleted Votes Exceed Victory Margin: ತೃಣಮೂಲ ಕಾಂಗ್ರೆಸ್ ಪರವಾಗಿ ಹಾಜರಾದ ಕಲ್ಯಾಣ್ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಕೆಲವು ವಿಚಾರಗಳನ್ನು ಮಂಡಿಸಿದರು. 31 ವಿಧಾನಸಭಾ ಕ್ಷೇತ್ರಗಳಲ್ಲಿ, ಗೆಲುವಿನ ಅಂತರಕ್ಕಿಂತಲೂ ಅಲ್ಲಿ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಯೇ ಹೆಚ್ಚು ಎಂದು ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಸಾಂದರ್ಭಿಕ ಚಿತ್ರ

ಕೋಲ್ಕತ್ತಾ, ಮೇ 11: ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮತ್ತಿತರರಿಗೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಸೂಚನೆ ನೀಡಿದೆ. ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹೊಸದಾಗಿ ಅರ್ಜಿ ಸಲ್ಲಿಸಲು ನ್ಯಾಯಾಲಯವು ಅವರಿಗೆ ಅವಕಾಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಿತು. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದ ಸರಣಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲರು ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಪ್ರಬಲ ವಾದ ಮಂಡಿಸಿದರು.

ತೃಣಮೂಲ ಕಾಂಗ್ರೆಸ್ ಪರವಾಗಿ ಹಾಜರಾದ ಕಲ್ಯಾಣ್ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಕೆಲವು ವಿಚಾರಗಳನ್ನು ಮಂಡಿಸಿದರು. 31 ವಿಧಾನಸಭಾ ಕ್ಷೇತ್ರಗಳಲ್ಲಿ, ಗೆಲುವಿನ ಅಂತರಕ್ಕಿಂತಲೂ ಅಲ್ಲಿ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಯೇ ಹೆಚ್ಚು ಎಂದು ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಒಂದು ಕ್ಷೇತ್ರವನ್ನು ಉಲ್ಲೇಖಿಸಿದ ಅವರು, ತಮ್ಮ ಪಕ್ಷದ (ಟಿಎಂಸಿ) ಅಭ್ಯರ್ಥಿ ಕೇವಲ 862 ಮತಗಳ ಅಂತರದಿಂದ ಸೋತಿದ್ದಾರೆ ಎಂದು ಅವರು ಹೇಳಿದರು.

ಮತದಾರರ ಸಮಗ್ರ ವಿಶೇಷ ಪರಿಷ್ಕರಣೆ ಸಂವಿಧಾನದ ಮೇಲಿನ ದಾಳಿ: ಚಿಂತಕ ಶಿವಸುಂದರ್ ಆತಂಕ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಒಟ್ಟಾರೆ ಮತಗಳ ಅಂತರ ಸುಮಾರು 32 ಲಕ್ಷ ಇತ್ತು. ಆದರೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದರ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಸಂಖ್ಯೆ 35 ಲಕ್ಷಕ್ಕೂ ಹೆಚ್ಚಿದೆ. ಈ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಅವರು ಗಂಭೀರ ಕಳವಳ ವ್ಯಕ್ತಪಡಿಸಿದರು.

ಈ ವಾದಗಳನ್ನು ಆಲಿಸಿದ ನ್ಯಾಯಪೀಠವು ಮಹತ್ವದ ಅವಲೋಕನವನ್ನು ಮಾಡಿತು. ಒಂದು ವೇಳೆ ವಿಧಾನಸಭಾ ಕ್ಷೇತ್ರಗಳಲ್ಲಿನ ಗೆಲುವಿನ ಅಂತರವು, ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಮತಗಳ ಸಂಖ್ಯೆಗಿಂತ ಕಡಿಮೆ ಇರುವುದು ನಿಜವಾಗಿದ್ದರೆ, ಈ ಬಗ್ಗೆ ನ್ಯಾಯಾಲಯದ ಮುಂದೆ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪೀಠವು ತಿಳಿಸಿತು.

ತೃಣಮೂಲ ಕಾಂಗ್ರೆಸ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲೆ ಮತ್ತು ರಾಜ್ಯಸಭಾ ಸಂಸದೆ ಮೇನಕಾ ಗುರುಸ್ವಾಮಿ, ಮತದಾರರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ ಮತ್ತು ತೆಗೆದುಹಾಕುವಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಪ್ರಸ್ತುತ ನಡೆಯುತ್ತಿರುವ ವೇಗದಲ್ಲಿ ಸುಮಾರು ನಾಲ್ಕು ವರ್ಷಗಳು ಬೇಕಾಗಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದರೆ, ಟಿಎಂಸಿ 80 ಸ್ಥಾನಗಳನ್ನು ಗಳಿಸಿತು. ಚುನಾವಣೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಮತದಾನ ದಾಖಲಾಗಿದೆ.