ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಕೇಸ್: ಬ್ರಿಜ್ ಭೂಷಣ್ ಸಿಂಗ್‌ಗೆ ಬಿಗ್‌ ರಿಲೀಫ್‌

ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಮಾತ್ರವಲ್ಲ ಸಹ ಆರೋಪಿ ವಿನೋದ್ ತೋಮರ್ ಅವರನ್ನು ಸಹ ಖುಲಾಸೆಗೊಳಿಸಲಾಗಿದೆ.

ಸಂಗ್ರಹ ಚಿತ್ರ

ನವದೆಹಲಿ: ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ( Wrestling Federation of India ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ( Brij Bhushan Singh) ಅವರನ್ನು ಖುಲಾಸೆಗೊಳಿಸಿದೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಮಾತ್ರವಲ್ಲ ಸಹ ಆರೋಪಿ ವಿನೋದ್ ತೋಮರ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.

ನ್ಯಾಯಾಲಯದ ಆದೇಶದ ಬಳಿಕ ಮಾತನಾಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್ "ನನ್ನ ವಿರುದ್ಧ ಆರೋಪ ಹೊರಿಸಲಾದ ದಿನ, ಆರೋಪ ಸಾಬೀತಾದರೆ, ನಾನು . ಸ್ವಇಚ್ಛೆಯಿಂದ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದೆ; ಇಂದು ನ್ಯಾಯಾಲಯ ನನ್ನನ್ನು ಖುಲಾಸೆಗೊಳಿಸಿದೆ.

ಭಾರತದ ಪ್ರಮುಖ ಮಹಿಳಾ ಕುಸ್ತಿಪಟುಗಳು ಮಾಜಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ, ಬಲವಂತದ ಅಪ್ಪುಗೆ, ಅನಗತ್ಯ ಸ್ಪರ್ಶ ಮತ್ತು ವೃತ್ತಿಪರ ಸಹಾಯದ ಬದಲಿಗೆ ಲೈಂಗಿಕ ಸೌಕರ್ಯಗಳನ್ನು ಕೇಳಿದ ಗಂಭೀರ ಆರೋಪಗಳನ್ನು ಮಾಡಿದ್ದರು. ಒಲಿಂಪಿಕ್ ಪದಕ ವಿಜೇತರಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಆರಂಭಿಸಿದ್ದರು. 2023 ರಲ್ಲಿ, ದೆಹಲಿ ಪೊಲೀಸರು ಅವರ ವಿರುದ್ಧ ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪ ಹೊರಿಸಿ ಆರೋಪಪಟ್ಟಿ ಸಲ್ಲಿಸಿದ್ದರು.

ಶಿಕ್ಷಣ ಸುಧಾರಣೆಗಾಗಿ ನಡೆದ ಪ್ರತಿಭಟನೆ ವೇಳೆ ಇದೆಂಥ ವಿಕೃತಿ? ದೆಹಲಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರು ನೀಡಿದಾಗ ಇದೆಲ್ಲ ಕಾಮನ್‌ ಎಂದಿದ್ದ ಆಯೋಜಕರು

ಆರಂಭದಲ್ಲಿ ಅಪ್ರಾಪ್ತ ವಯಸ್ಕ ಕುಸ್ತಿಪಟುವೊಬ್ಬರು ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ, ನಂತರ ಆಕೆ ಮತ್ತು ಆಕೆಯ ತಂದೆ ದೂರು ಹಿಂಪಡೆದ ಕಾರಣ ನ್ಯಾಯಾಲಯವು ಈ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸಿತು. ಸುದೀರ್ಘ ವಿಚಾರಣೆಯ ನಂತರ, ಆರೋಪಗಳನ್ನು ಸಾಬೀತುಪಡಿಸಲು ಸೂಕ್ತ ಮತ್ತು ಬಲವಾದ ಸಾಕ್ಷ್ಯಾಧಾರಗಳು ಇಲ್ಲದ ಕಾರಣ, ರೌಸ್ ಅವೆನ್ಯೂ ನ್ಯಾಯಾಲಯವು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಅವರ ಸಹ-ಆರೋಪಿ ವಿನೋದ್ ತೋಮರ್ ಇಬ್ಬರನ್ನೂ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ.

Vishakha Bhat Heggar

View all posts by this author