Delhi Election 2025: ದೆಹಲಿ ಚುನಾವಣೆ; ಕಾಂಗ್ರೆಸ್ ಆಡಳಿತಕ್ಕೆ ಬಂದರೆ 300 ಯೂನಿಟ್ ವಿದ್ಯುತ್ ಫ್ರೀ-ಗ್ಯಾಸ್ ಸಿಲಿಂಡರ್ ಕೇವಲ 500 ರೂಪಾಯಿಗೆ!
ಫೆಬ್ರವರಿ 5 ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ತನ್ನ ʼಫ್ರೀʼ ಅಸ್ತ್ರವನ್ನು ಬಳಸಿದೆ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ 300 ಯೂನಿಟ್ ವಿದ್ಯುತ್ ಉಚಿತ ಮತ್ತು ಗ್ಯಾಸ್ ಸಿಲಿಂಡರ್ ಅನ್ನು ಕೇವಲ 500 ರೂಪಾಯಿಗೆ ನೀಡುವುದಾಗಿ ಆಶ್ವಾಸನೆ ನೀಡಿದೆ.
ನವದೆಹಲಿ: ಫೆಬ್ರವರಿ 5 ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಈ ಬಾರಿ ದೆಹಲಿ ಗದ್ದುಗೆಯನ್ನು ಯಾರು ಏರುತ್ತಾರೆಂಬ ಕುತೂಹಲ ಹಲವರಲ್ಲಿದೆ. ಚುನಾವಣೆಯ ಕಾವು ತಾರಕಕ್ಕೇರಿದ್ದು,ಕಾಂಗ್ರೆಸ್ ಪಕ್ಷ ಭಾರೀ ಮತ ಪ್ರಚಾರ ಮಾಡುತ್ತಿದೆ. ಮತದಾರನ ಮೇಲೆ ಕಾಂಗ್ರೆಸ್ ತನ್ನ ʼಫ್ರೀʼ ಅಸ್ತ್ರ ಪ್ರಯೋಗ ಮಾಡುತ್ತಿದೆ(Delhi Election-2025)
ಈ ಬಾರಿ ಚುನಾವಣೆಯಲ್ಲಿ ಆಮ್ ಆದ್ಮಿಯನ್ನು ಮಣಿಸಬೇಕೆಂದು ಎರಡೂ ರಾಷ್ಟ್ರೀಯ ಪಕ್ಷಗಳು ಟೊಕ್ಕ ಕಟ್ಟಿ ನಿಂತಿವೆ. ಎರಡು ಪಕ್ಷಗಳಿಗೂ ಈ ಚುನಾವಣೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇತ್ತ ಎರಡು ಅವಧಿಗೆ ದೆಹಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಆಮ್ ಆದ್ಮಿ ಕೂಡ ಹ್ಯಾಟ್ರಿಕ್ ಗೆಲುವು ಸಾಧಿಸಲು ಸಾಕಷ್ಟು ಕಸರತ್ತು ನಡೆಸುತ್ತಿದೆ.
#WATCH | Delhi: If voted to power in #DelhiElections2025, Congress announces to provide LPG cylinders at Rs 500, free ration kits and 300 units of free electricity
— ANI (@ANI) January 16, 2025
(Source: Congress) pic.twitter.com/SK4HsNnCAk
ಚುನಾವಣೆ ಮತ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳನ್ನು ನೀಡುವಂತೆ ಆಶ್ವಾಸನೆ ನೀಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಕೇವಲ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಉಚಿತ ಪಡಿತರ ಕಿಟ್, 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಇಂದು(ಜ.16) ಭರವಸೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಭರವಸೆಗಳನ್ನು ಘೋಷಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಆಯ್ಕೆ ಮಾಡುವಂತೆ ದೆಹಲಿ ಮತದಾರರರಿಗೆ ಹೇಳಿದ್ದು, ಐದು ಪ್ರಮುಖ ಭರವಸೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. 3 ಬಾರಿ ಅಧಿಕಾರದಲ್ಲಿದ್ದರೂ ರಾಷ್ಟ್ರ ರಾಜಧಾನಿಯ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ಮೋದಿ ಮತ್ತು ಕೇಜ್ರಿವಾಲ್ ಸರ್ಕಾರಗಳು ಏನನ್ನೂ ಮಾಡಿಲ್ಲ ಎಂದು ರೇವಂತ್ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ:Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್ ಆಲಿ ಖಾನ್‌ನನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಎಲ್ಲ 70 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಾಕಿ ಉಳಿಸಿಕೊಂಡಿದ್ದ 2 ಸ್ಥಾನಗಳಿಗೂ ಇಂದು ಅಭ್ಯರ್ಥಿಗಳನ್ನು ಘೋಷಿಸಿದೆ.