ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (Cockroach Janata Party) ‘X’ ಖಾತೆ ಮರುಸ್ಥಾಪನೆಗೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ. ಈ ಕುರಿತು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಕುರಿತು ಕೇಂದ್ರ ಸರ್ಕಾರ ಮತ್ತು ಎಕ್ಸ್ ಗೆ ನೊಟೀಸ್ ಜಾರಿಗೊಳಿಸಿ “ಸಮಗ್ರ ಅಫಿಡವಿಟ್” ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಇನ್ ಸ್ಟಾಗ್ರಾಮ್ ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಹುಟ್ಟಿಕೊಂಡು ಭಾರಿ ಜನಪ್ರಿಯತೆ ಪಡೆದುಕೊಂಡ ಕಾಕ್ರೋಚ್ ಜನತಾ ಪಕ್ಷ ಕೆಲವು ದಿನಗಳಿಂದ ವಿವಾದಗಳಿಂದ ಸುದ್ದಿ ಮಾಡುತ್ತಿದೆ. ಈ ನಡುವೆ ಅದು ತನ್ನ ಎಕ್ಸ್ ಖಾತೆಗೆ ನಿಷೇಧ ಹೇರಿರುವ ಕೇಂದ್ರದ ನಿರ್ಣಯವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ನಿರುದ್ಯೋಗದ ಕುರಿತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯವರ ಹೇಳಿಕೆಯ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಂಬನಾತ್ಮಕ ಅಭಿಯಾನದ ಭಾಗವಾಗಿ ಕಾಕ್ರೋಚ್ ಜನತಾ ಪಕ್ಷ ಆರಂಭಗೊಂಡು ಭಾರಿ ಜನಪ್ರಿಯತೆ ಪಡೆದುಕೊಂಡಿತು. ಇದು ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಗಿಂತಲೂ ಹೆಚ್ಚಿನ ಅನುಯಾಯಿಗಳನ್ನು ಗಳಿಸಿತ್ತು. ಇದರ ಬಳಿಕ ಪಕ್ಷದ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಯಿತು.
ಯಶವಂತಪುರ-ವಿಜಯಪುರ ದ್ವೈಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು
ಹೀಗಾಗಿ ತನ್ನ ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯನ್ನು ತಕ್ಷಣ ಮರುಸ್ಥಾಪಿಸಲು ನಿರ್ದೇಶಿಸಲು ದೆಹಲಿ ಹೈಕೋರ್ಟ್ ಮೊರೆ ಹೋದ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಶುಕ್ರವಾರ ನಿರಾಕರಿಸಿರುವ ಹೈಕೋರ್ಟ್, ಅರ್ಜಿಯಲ್ಲಿ ಆಕ್ರಮಣಕಾರಿ ಅಂಶಗಳು ಕಂಡು ಬಂದಿರುವುದಾಗಿ ಹೇಳಿದೆ.
ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರ ಪೀಠ, ಇದನ್ನು ಸಂಪೂರ್ಣವಾಗಿ ಪರಿಗಣಿಸುವ ಅಗತ್ಯವಿದೆ. ಕೇಂದ್ರ ಸರ್ಕಾರ ಮತ್ತು ಎಕ್ಸ್ ವಿಚಾರವನ್ನು ಆಲಿಸಿದ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಆಕ್ಷೇಪಾರ್ಹ ಪೋಸ್ಟ್‌ಗಳಿಗೆ ಸಂಬಂಧಿಸಿ ಹಿಂದೆ ಕೆಲವು ಪ್ರಕರಣಗಳಲ್ಲಿ ತಾತ್ಕಾಲಿಕವಾಗಿ ಖಾತೆ ನಿರ್ಬಂಧಿಸಿ ಬಳಿಕ ಮರುಸ್ಥಾಪಿಸಲು ಆದೇಶಿಸಲಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿದೆ ಎಂದು ಹೇಳಿರುವ ಪೀಠ, ಕಾಕ್ರೋಚ್ ಜನತಾ ಪಕ್ಷದ ಸಂಪೂರ್ಣ ಚಟುವಟಿಕೆಯಲ್ಲಿ ಸ್ವಲ್ಪ ಆಕ್ಷೇಪಾರ್ಹ ಸಂಗತಿಗಳಿವೆ ಎಂದು ಹೇಳಿದೆ.
ಕುಟುಂಬ ಸದಸ್ಯರ ಸಾವಿನಿಂದ ಎದೆ ಬಡಿದುಕೊಂಡು ಗೋಳಾಡಿದ ಮಹಿಳೆ; ಕೊಲೆ ರಹಸ್ಯ ಬಯಲಾಗುತ್ತಿದ್ದಂತೆ ಆಗಿದ್ದೇ ಬೇರೆ!
ಅರ್ಜಿಯ ಕುರಿತು ಕೇಂದ್ರ ಸರ್ಕಾರ ಮತ್ತು ಎಕ್ಸ್‌ಗೆ "ಸಮಗ್ರ ಅಫಿಡವಿಟ್" ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಾಲಯ ನಿರ್ಬಂಧ ಆದೇಶಗಳನ್ನು ಪರಿಶೀಲಿಸುವ 2009ರ ನಿರ್ಬಂಧ ನಿಯಮಗಳ 14ರ ಅಡಿಯಲ್ಲಿ ಕೇಂದ್ರದ ಪರಿಶೀಲನಾ ಸಮಿತಿಯ ಮುಂದೆ ತನ್ನ ಪ್ರಕರಣವನ್ನು ಮಂಡಿಸಲು ಡಿಪ್ಕೆಗೆ ಸ್ವಾತಂತ್ರ್ಯ ನೀಡುವುದಾಗಿ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿ ಜುಲೈ 6 ರಂದು ಮುಂದಿನ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ನಿರ್ದೇಶನ ನೀಡಿದೆ.