ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜ್ಞಾನೇಶ್ ಕುಮಾರ್ ವಿರುದ್ಧ ಜಂತರ್ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ: 700ಕ್ಕೂ ಹೆಚ್ಚು ಮಂದಿ ವಶಕ್ಕೆ, ಇಂಟರ್‌ನೆಟ್ ಸ್ಥಗಿತ

Jantar Mantar Protests: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ದೆಹಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾದ 700ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಮಾಜಿ ಸಿಎಂ ಅತಿಶಿ, ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ನಾಯಕರು ಹಾಗೂ ಕಾರ್ಯಕರ್ತರು ವಶಕ್ಕೆ ಒಳಗಾದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಂತರ್ ಮಂತರ್ ಸುತ್ತಮುತ್ತ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, 12 ಮೆಟ್ರೋ ನಿಲ್ದಾಣಗಳ ಪ್ರವೇಶ-ನಿರ್ಗಮನಕ್ಕೂ ನಿರ್ಬಂಧ ವಿಧಿಸಲಾಯಿತು.

ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ವಸಕ್ಕೆ ಪಡೆದರು

ನವದೆಹಲಿ, ಅ. 2: ಚುನಾವಣಾ ಆಯೋಗದ (Election Commission) ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (Chief Election Commissioner - CEC) ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ (ಅಕ್ಟೋಬರ್‌ 2) ನಡೆದ ಪ್ರತಿಭಟನೆ ವೇಳೆ 700ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಅತಿಶಿ, ಆಮ್ ಆದ್ಮಿ ಪಕ್ಷದ (AAP) ನಾಯಕ ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸೇರಿ ಹಲವು ರಾಜಕೀಯ ನಾಯಕರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ವಶಕ್ಕೆ ಒಳಗಾದವರಲ್ಲಿ ಸೇರಿದ್ದಾರೆ.

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI), ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI) ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳನ್ನು ಮುಂದಿಟ್ಟು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದೆಹಲಿಯ ಜಂತರ್‌-ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು:



ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಜಂತರ್ ಮಂತರ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ಅನಧಿಕೃತ ಸಭೆ, ಪ್ರತಿಭಟನೆ, ಮೆರವಣಿಗೆ ಹಾಗೂ ಘೋಷಣೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೂ ಪ್ರತಿಭಟನಾಕಾರರು ಜಂತರ್ ಮಂತರ್ ಕಡೆಗೆ ತೆರಳಲು ಪ್ರಯತ್ನಿಸಿದರು.

ಶೂಟಿಂಗ್ ವೇಳೆ ಬಾಲಿವುಡ್ ನಟಿ ನುಶ್ರತ್ ಭರುಚ್ಚಾಗೆ ಗಂಭೀರ ಅಪಘಾತ

ಪೊಲೀಸರು ಹಲವರನ್ನು ಬಸ್‌ಗಳಲ್ಲಿ ಕರೆದೊಯ್ದಿದ್ದು, AISA ಅಧ್ಯಕ್ಷೆ ನೇಹಾ ಬೋರಾ ಮತ್ತು ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಕೂಡ ವಶಕ್ಕೆ ಒಳಗಾದರು. NSUI ಕಾರ್ಯಕರ್ತರು ಕೂಡ ಜಂತರ್ ಮಂತರ್ ಕಡೆಗೆ ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ಅವರನ್ನು ತಡೆದರು.

12 ಮೆಟ್ರೋ ನಿಲ್ದಾಣಗಳ ಪ್ರವೇಶ-ನಿರ್ಗಮನ ಬಂದ್

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಂತರ್ ಮಂತರ್ ಸುತ್ತಮುತ್ತ ಸುಮಾರು 1.5 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಭದ್ರತಾ ಕಾರಣಗಳಿಂದ ದೆಹಲಿ ಮೆಟ್ರೋದ 12 ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನಕ್ಕೂ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿತ್ತು.

ಜಂತರ್ ಮಂತರ್ ಪ್ರತಿಭಟನೆ, SIR ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಈಗಾಗಲೇ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಚುನಾವಣಾ ಆಯೋಗವು SIR ಸೇರಿ ಆಯೋಗದ ನಿರ್ಧಾರಗಳನ್ನು ಮೂವರು ಚುನಾವಣಾ ಆಯುಕ್ತರು ಒಮ್ಮತದಿಂದ ಕೈಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ.