Arvind Kejriwal: ಸಾರ್ವಜನಿಕ ಆಸ್ತಿ ವಿರೂಪ ಕಾಯ್ದೆ ಉಲ್ಲಂಘನೆ ಆರೋಪ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ವರದಿ ಸಲ್ಲಿಸಿದ ಪೊಲೀಸರು
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಶಾಸಕ ಮತ್ತು ಎಂಸಿಡಿ ಕೌನ್ಸಿಲರ್ ವಿರುದ್ಧದ ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಶನಿವಾರ ಸ್ಥಿತಿ ವರದಿಯನ್ನು ಸಲ್ಲಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಸತತ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ಸಮಯ ಕೋರಿದ್ದಾರೆ.


ನವದೆಹಲಿ: ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, (Arvind Kejriwal) ಮಾಜಿ ಶಾಸಕ ಮತ್ತು ಎಂಸಿಡಿ ಕೌನ್ಸಿಲರ್ ವಿರುದ್ಧದ ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಶನಿವಾರ ಸ್ಥಿತಿ ವರದಿಯನ್ನು ಸಲ್ಲಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಸತತ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ಸಮಯ ಕೋರಿದ್ದಾರೆ. ವರದಿಯನ್ನು ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ನೇಹಾ ಮಿತ್ತಲ್ ಅವರು ಸ್ಥಿತಿಗತಿ ವರದಿಯನ್ನು ದಾಖಲಿಸಿಕೊಂಡು ಮೇ 3ಕ್ಕೆ ಪ್ರಕರಣವನ್ನು ನಿಗದಿ ಪಡಿಸಿದ್ದಾರೆ.
ಮಾರ್ಚ್ 28 ರಂದು ಪೊಲೀಸರು ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ದ್ವಾರಕಾ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. 2019 ರಲ್ಲಿ ದ್ವಾರಕಾ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಶಾಸಕ ಗುಲಾಬ್ ಸಿಂಗ್ ಮತ್ತು ಎಂಸಿಡಿ ಕೌನ್ಸಿಲರ್ ನಿತಿಕಾ ಶರ್ಮಾ ವಿರುದ್ಧ ದಾಖಲಾಗಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸುವಂತೆ ಮಾರ್ಚ್ 11 ರಂದು ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತ್ತು.
ಏನಿದು ಪ್ರಕರಣ?
ಆಮ್ ಆದ್ಮಿ ಪಕ್ಷ 2019ಲ್ಲಿ ದ್ವಾರಕ ಪ್ರದೇಶದಲ್ಲಿ ಅಕ್ರಮವಾಗಿ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಬೃಹತ್ ಗಾತ್ರದ ಹೋರ್ಡಿಂಗ್ ಅಳವಡಿಸುವ ಮೂಲಕ ಸಾರ್ವಜನಿಕರ ಹಣವನ್ನು ಉದ್ದೇಶಪೂರ್ವಕವಾಗಿ ದುರ್ಬಳಕೆ ಮಾಡಿತ್ತು ಎಂದು ಅರವಿಂದ್ ಕೇಜ್ರಿವಾಲ್, ಶಾಸಕ ಗುಲಾಬ್ ಸಿಂಗ್ ಮತ್ತು ದ್ವಾರಕ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ವಿರುದ್ಧ 2019ರಲ್ಲಿ ದೂರು ಸಲ್ಲಿಸಲಾಗಿತ್ತು. ಈ ಕುರಿತು ಸಾಕ್ಷ್ಯಸಮೇತ ಶಿವಕುಮಾರ್ ಸಕ್ಸೆನಾ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್ ರೀತಿ ಅನಧಿಕೃತ ಹೋರ್ಡಿಂಗ್ ಸಿಟಿಯ ಸೌಂದರ್ಯವನ್ನು ಹಾಳು ಮಾಡುವುದರ ಜೊತೆಗೆ ಸಂಚಾರ ದಟ್ಟಣೆಗೂ ಕಾರಣವಾಗುತ್ತದೆ ಎಂದು ಎಫ್‌ಐಆರ್ ದಾಖಲಿಸುವಂತೆ ಸೂಚಿಸಿತ್ತು.
ಈ ಸುದ್ದಿಯನ್ನೂ ಓದಿ:Arvind Kejriwal: ದಿಲ್ಲಿ ಚುನಾವಣೆಯಲ್ಲಿ ಸೋತ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ? ಆಪ್ ನೀಡಿದ ಸ್ಪಷ್ಟನೆಯಲ್ಲಿ ಏನಿದೆ?
ಈ ಪೋಸ್ಟರ್‌ಗಳಲ್ಲಿ ಕೆಲವು ದೆಹಲಿ ಸರ್ಕಾರದ ಉಪಕ್ರಮಗಳನ್ನು ಜಾಹೀರಾತು ಮಾಡಿದ್ದರೆ, ಇನ್ನು ಕೆಲವು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಧಾರ್ಮಿಕ ಹಬ್ಬಗಳಿಗೆ ಶುಭ ಕೋರಿದ್ದ ಫ್ಲೆಕ್ಸ್‌ಗಳಿದ್ದವು.