ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಸ್‌ಐಆರ್‌ ವಿರೋಧಿಸಿ 'ಇಂಡಿಯಾ' ಒಕ್ಕೂಟ ಪ್ರತಿಭಟನೆ: ಚುನಾವಣಾ ಆಯೋಗದ ಕಚೇರಿಗೆ ಬಿಗಿ ಭದ್ರತೆ

ರಾಷ್ಟ್ರಮಟ್ಟದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆಗಾಗಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದೆಹಲಿಯ ಚುನಾವಣಾ ಆಯೋಗದ ಮುಖ್ಯ ಕಚೇರಿ ಸುತ್ತಲೂ ಮಂಗಳವಾರದಂದು ಉನ್ನತ ಮಟ್ಟದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ದೆಹಲಿಯಲ್ಲಿ ಎಸ್‌ಐಆರ್‌ ವಿರೋಧಿಸಿ 'ಇಂಡಿಯಾ' ಒಕ್ಕೂಟ ಪ್ರತಿಭಟನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 6, 2026 12:47 PM

ನವದೆಹಲಿ: ರಾಷ್ಟ್ರಮಟ್ಟದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆಗಾಗಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಬೃಹತ್ (INDIA Bloc) ರ‍್ಯಾಲಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದೆಹಲಿಯ ಚುನಾವಣಾ ಆಯೋಗದ ಮುಖ್ಯ ಕಚೇರಿ ಸುತ್ತಲೂ ಮಂಗಳವಾರದಂದು ಉನ್ನತ ಮಟ್ಟದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶುಕ್ರವಾರದಿಂದಲೇ ಹಲವು ಸಂಘಟನೆಗಳು ಈ ವಿಶೇಷ ಪರಿಷ್ಕರಣೆ ವಿರುದ್ಧ ಬೀದಿಗಿಳಿದು ಹೋರಾಡುತ್ತಿರುವುದರಿಂದ, ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಅಂದಿನಿಂದಲೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ದೆಹಲಿ ಪೊಲೀಸರು, ಶೀಘ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರಿಯ ಸಶಸ್ತ್ರ ಪೊಲೀಸ್‌ ಪಡೆ ಸೇರಿದಂತೆ 3,000 ಕ್ಕೂ ಹೆಚ್ಚು ಸೈನಿಕರು ಮತ್ತು ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಿಯೋಜಿಸಲಾಗಿದೆ. ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿರುವ ಜಂತರ್‌ ಮಂತರ್‌, ಅಶೋಕ ರೋಡ್‌ ಹಾಗೂ ಸಂಸತ್‌ ಮಾರ್ಗಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ನವದೆಹಲಿ ವ್ಯಾಯಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್‌ 163 ಅಡಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೆಹಲಿ ಪೊಲೀಸರು, ಶೀಘ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ 3,000ಕ್ಕೂ ಹೆಚ್ಚು ಸೈನಿಕರು ಮತ್ತು ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಿಯೋಜಿಸಲಾಗಿದೆ. ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿರುವ ಜಂತರ್ ಮಂತರ್, ಅಶೋಕ್ ರೋಡ್ ಹಾಗೂ ಸಂಸತ್ ಮಾರ್ಗಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನವದೆಹಲಿ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 163 (ಹಳೆಯ 144ನೇ ಕಾಯ್ದೆ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅನಧಿಕೃತವಾಗಿ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಧರಣಿ ನಡೆಸುವುದು ಹಾಗೂ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರತಿಭಟನಾಕಾರರು ಮುಖ್ಯ ರಸ್ತೆಗಳನ್ನು ಪ್ರವೇಶಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್‌ಗಳು, ಸಿಮೆಂಟ್ ಬ್ಲಾಕ್‌ಗಳು ಹಾಗೂ ಮುಳ್ಳುತಂತಿಗಳನ್ನು ಬಳಸಿ ತಾತ್ಕಾಲಿಕ ತಡೆಗೋಡೆಗಳನ್ನು ನಿರ್ಮಿಸಲಾಗಿದೆ. ಕೇಂದ್ರ ದೆಹಲಿಯ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕನ್ನಾಟ್ ಪ್ಲೇಸ್, ಪಟೇಲ್ ಚೌಕ್, ಟಾಲ್ಸ್‌ಟಾಯ್ ಮಾರ್ಗ, ಸಂಸತ್ ಭವನ ರಸ್ತೆ ಹಾಗೂ ಜಂತರ್ ಮಂತರ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸಾರ್ವಜನಿಕರು ಈ ಭಾಗಗಳಲ್ಲಿ ಸಂಚರಿಸದಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಸಂಚಾರ ವ್ಯತ್ಯಯ ಸಾರ್ವಜನಿಕರಿಗೆ ಸೂಚನೆ

ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಮುಚ್ಚಿರುವುದರಿಂದ ದೆಹಲಿ-ನೋಯ್ಡಾ ಹಾಗೂ ದೆಹಲಿ-ಗುರುಗ್ರಾಮ ಸಂಪರ್ಕಿಸುವ ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಪ್ರಮುಖ ಮೆಟ್ರೋ ನಿಲ್ದಾಣಗಳ ಬಳಿಯೂ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅಗತ್ಯ ಬಿದ್ದರೆ ಕೆಲವು ಗೇಟ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ದೆಹಲಿ ಮೆಟ್ರೋ ರೈಲ್ ಕಾರ್ಪೊರೇಷನ್‌ಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹಾಗೂ ಉದ್ಯೋಗಿಗಳು ಅನಗತ್ಯವಾಗಿ ಮಧ್ಯ ದೆಹಲಿಯ ರಸ್ತೆಗಳಿಗೆ ಬರದಂತೆ ಮತ್ತು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ದೆಹಲಿ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

'ಪೊಲೀಸ್' ಸ್ಟಿಕ್ಕರ್ ಹೊಂದಿದ್ದ ಕಾರ್‌ನಲ್ಲಿ ಬಂದು ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯಿಂದ ಗಿಡ ಕದ್ದ ಭೂಪ; ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ

ವಿಪಕ್ಷಗಳ ಪಟ್ಟು

ಪೊಲೀಸರು ಎಷ್ಟೇ ತಡೆಗೋಡೆಗಳನ್ನು ನಿರ್ಮಿಸಿದರೂ ತಮ್ಮ ಪ್ರತಿಭಟನಾ ಮೆರವಣಿಗೆ ನಿಲ್ಲುವುದಿಲ್ಲ ಎಂದು ವಿಪಕ್ಷಗಳ ನಾಯಕರು ಸ್ಪಷ್ಟಪಡಿಸಿದ್ದಾರೆ. ಜ್ಙಾನೇಶ ಕುಮಾರ ರಾಜೀನಾಮೆ ನೀಡದ ಹೊರತು, ಎಸ್‌ಐಆರ್‌ ಪ್ರಕ್ರಿಯೆ ಅಕ್ರಮಗಳ ವಿಚಾರಣೆ ಮಾಡುವ ವರೆಗೆ ಪ್ರತಿಭಟನೆ ನಿಲ್ಲದು ಎಂದು ವಿಕ್ಷಗಳು ಪಟ್ಟು ಹಿಡಿದಿವೆ. ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ದೆಹಲಿ ಪೊಲೀಸರು ಡ್ರೋನ್ ಕ್ಯಾಮರಾಗಳ ಮೂಲಕವೂ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.