ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

New Delhi Stampede : ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 18 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ಶನಿವಾರ ಸಂಜೆ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಗ್‌ರಾಜ್‌ಗೆ ತೆರಳುವ ರೈಲುಗಳನ್ನು ಹತ್ತುವಾಗ ಊಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾತ್ರಿ ಸುಮಾರು 9:55 ಗಂಟೆಗೆ ನಡೆದಿದೆ. ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಜನರ ಸಾವು

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ

Profile Vishakha Bhat Feb 16, 2025 8:16 AM

ನವದೆದಹಲಿ: ಶನಿವಾರ ಸಂಜೆ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಗ್‌ರಾಜ್‌ಗೆ ತೆರಳುವ ರೈಲುಗಳನ್ನು ಹತ್ತುವಾಗ ಊಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದ್ದು , ಘಟನೆಯಲ್ಲಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಟ್ಟವರಲ್ಲಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಶನಿವಾರ (ಫೆ. 15) ರಾತ್ರಿ ಸುಮಾರು 9:55 ಗಂಟೆಗೆ ನಡೆದಿದೆ. (New Delhi Stampede) ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.



ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್‌ಪ್ರೆಸ್ ವಿಳಂಬವಾಗಿ ಬಂದಿದ್ದರಿಂದ ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಕಾಲ್ತುಳಿತ ದುರಂತದ ವಿಷಯ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆ ನಾವಿರುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ತೊಂದರೆಗೊಳಗಾದವರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ: New Delhi Stampede: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಕುಂಭಮೇಳಕ್ಕೆ ಹೊರಟ 15 ಮಂದಿಗೆ ಗಾಯ

ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂಪಾಯಿ ನೆರವು ಘೋಷಿಸಲಾಗಿದೆ.