Delhi Riots Case: ದೆಹಲಿ ಗಲಭೆ ಪ್ರಕರಣ; ಅಕ್ಟೋಬರ್ 7ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
2020ರಲ್ಲಿ ನಡೆದ ದೆಹಲಿ ಗಲಭೆಗೆ ಸಂಬಂಧಿಸಿ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ-ಉರ್-ರೆಹಮಾನ್ ಅವರ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡಲು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೊಟೀಸ್ ಜಾರಿ ಮಾಡಿದೆ.

-

ನವದೆಹಲಿ: ದೆಹಲಿ ಗಲಭೆ ಪ್ರಕರಣಕ್ಕೆ (Delhi riots case) ಸಂಬಂಧಿಸಿ ಆರೋಪಿಗಳಾದ (student activists) ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ-ಉರ್-ರೆಹಮಾನ್ ಸಲ್ಲಿಸಿದ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ದೆಹಲಿ ಪೊಲೀಸರಿಗೆ (Delhi Police) ನೊಟೀಸ್ (Notice) ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 7ರಂದು ನಿಗದಿಪಡಿಸಿರುವುದಾಗಿ ತಿಳಿಸಿದೆ.
2020ರಲ್ಲಿ ನಡೆದ ದೆಹಲಿ ಗಲಭೆಗೆ ಕಾರಣರಾಗಿದ್ದ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ-ಉರ್-ರೆಹಮಾನ್ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಎ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಲು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೊಟೀಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 7ರಂದು ನಿಗದಿಪಡಿಸಿದೆ. ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ನೀಡಿರುವ ತೀರ್ಪನ್ನು ಆರೋಪಿಗಳು ಜಾಮೀನು ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಎ.ಎಂ. ಸಿಂಘ್ವಿ, ಸಿದ್ಧಾರ್ಥ್ ಡೇವ್, ಸಿದ್ಧಾರ್ಥ್ ಅಗರ್ವಾಲ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಸೆಪ್ಟೆಂಬರ್ 19ರಂದು ಜಾಮೀನು ಅರ್ಜಿಯನ್ನು ಕೈಗೆತ್ತಿಕೊಳ್ಳದೇ ಇರುವ ಬಗ್ಗೆ ನ್ಯಾಯಮೂರ್ತಿ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಉಮರ್ ಖಾಲಿದ್ ಅವರ ವಕೀಲ ಕಪಿಲ್ ಸಿಬಲ್ ಅವರೊಂದಿಗಿನ ಹಿಂದಿನ ವೃತ್ತಿಪರ ಸಂಬಂಧಗಳಿಂದಾಗಿ ತಮ್ಮ ಹಿಂದಿನ ಪೀಠದ ಸಹೋದ್ಯೋಗಿ ನ್ಯಾಯಮೂರ್ತಿ ಮನಮೋಹನ್ ಇದರಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಿದರು.
ಅರ್ಜಿದಾರರು ಐದು ವರ್ಷಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿ ಕಳೆದಿದ್ದು, ಅವರ ಮಧ್ಯಂತರ ಜಾಮೀನು ಅರ್ಜಿಗಳಿಗೂ ನೊಟೀಸ್ ಜಾರಿ ಮಾಡುವಂತೆ ಕೋರಿದರು. ಆದರೆ ನ್ಯಾಯಾಲಯವು ಅಂತಿಮವಾಗಿ ಮುಖ್ಯ ಅರ್ಜಿಯನ್ನು ವಿಲೇವಾರಿ ಮಾಡುತ್ತದೆ ಎಂದು ನ್ಯಾಯಮೂರ್ತಿ ಕುಮಾರ್ ತಿಳಿಸಿದರು.
ಅರ್ಜಿದಾರರು 2019-2020ರ ಅವಧಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 2020ರ ಫೆಬ್ರವರಿಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಪಿತೂರಿ ಮಾಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: Sudha Murthy: ಇನ್ಫೋಸಿಸ್ ಸುಧಾಮೂರ್ತಿಗೆ ಸೈಬರ್ ಕಳ್ಳರ ಕಾಟ; ದೂರು ದಾಖಲು
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ತಾಹಿರ್ ಹುಸೇನ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ 2021ರಲ್ಲಿ ಜಾಮೀನು ನೀಡಲಾಗಿದೆ. ಸಫೂರಾ ಜರ್ಗರ್ ಅವರಿಗೆ ಮಾನವೀಯ ಆಧಾರದ ಮೇಲೆ ಹಾಗೂ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಅವರಿಗೂ ಜಾಮೀನು ನೀಡಲಾಗಿದೆ.