ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿ SIR: ಮುಖ್ಯಮಂತ್ರಿ ರೇಖಾ ಗುಪ್ತಾ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗದಿಂದ ನೋಟೀಸ್‌

Dehli SIR: ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಉಂಟಾದ ಕೆಲವು ವ್ಯತ್ಯಾಸಗಳಿಂದಾಗಿ ಹಾಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ನೋಟೀಸ್‌ ನೀಡಲಾಗಿದೆ.

ಸಂಗ್ರಹ ಚಿತ್ರ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಉಂಟಾದ ಕೆಲವು ವ್ಯತ್ಯಾಸಗಳಿಂದಾಗಿ ಹಾಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ದೆಹಲಿಯ ಸುಮಾರು 31.6 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.

ದೆಹಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಈಗ ತಮ್ಮ ದಾಖಲೆಗಳಲ್ಲಿನ ವ್ಯತ್ಯಾಸಗಳ ಕುರಿತು ನೋಟಿಸ್‌ಗಳನ್ನು ಸ್ವೀಕರಿಸಿದ ಮತದಾರರ ಪಟ್ಟಿಯನ್ನು ಬಹಿರಂಗಪಡಿಸಿದೆ. ಆಗಸ್ಟ್ 31 ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ಸುಮಾರು ಮೂರು ವಾರಗಳ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಶಾಲಿಮಾರ್ ಬಾಗ್ ಕ್ಷೇತ್ರದ ಮತದಾರರಾಗಿರುವ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಫಾರ್ಮ್‌ನಲ್ಲಿ, ಅವರಿಗೂ ಮತ್ತು ಅವರ ಪೋಷಕರಿಗೂ ಇರುವ ವಯಸ್ಸಿನ ವ್ಯತ್ಯಾಸವು 15 ವರ್ಷಕ್ಕಿಂತ ಕಡಿಮೆ ಎಂದು ದಾಖಲಾಗಿತ್ತು. ಹೀಗಾಗಿ ಇದನ್ನು 'ತಾರ್ಕಿಕ ವ್ಯತ್ಯಾಸ ಎಂದು ಪರಿಗಣಿಸಿ ನೋಟೀಸ್‌ ನೀಡಲಾಗಿದೆ.

ನೋಟಿಸ್ ಬಂದ ಬೆನ್ನಲ್ಲೇ ಬೂತ್ ಮಟ್ಟದ ಅಧಿಕಾರಿಗಳು (BLO) ಭೌತಿಕ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ದಾಖಲೆಗಳನ್ನು ಒದಗಿಸಿದ ನಂತರ ಅವರ ವಿವರಗಳನ್ನು ದೃಢೀಕರಿಸಲಾಗಿದ್ದು ನವೆಂಬರ್ 4 ರಂದು ಪ್ರಕಟವಾಗಲಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿ ಕ್ಷೇತ್ರದ ಮತದಾರರಾಗಿರುವ ಅರವಿಂದ್ ಕೇಜ್ರಿವಾಲ್, ಅವರ ಪತ್ನಿ ಸುನಿತಾ ಕೇಜ್ರಿವಾಲ್, ಪೋಷಕರು ಮತ್ತು ಮಗ ಪುಲ್ಕಿತ್ ಅವರ ವಿವರಗಳು ಹಿಂದಿನ ಎಸ್‌ಐಆರ್ (SIR) ದಾಖಲೆಗಳೊಂದಿಗೆ ಸರಿಯಾಗಿ ಹೊಂದಾಣಿಕೆ ಆಗದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ.

ಕೇಜ್ರಿವಾಲ್ ಮತ್ತು ಅವರ ಕುಟುಂಬದವರು ತಮ್ಮ ಅಗತ್ಯ ದಾಖಲೆಗಳು ಹಾಗೂ ವಿವರಗಳನ್ನು ಒದಗಿಸಿ ಪರಿಶೀಲನೆ ನಡೆಸಿದ ನಂತರ, ಅವರ ಹೆಸರುಗಳನ್ನೂ ಅಂತಿಮ ಮತದಾರರ ಪಟ್ಟಿಗೆ ಸೇರಿಸಲಾಗುವುದು ಎಂದು ಚುನಾವಣಾ ನೋಂದಣಿ ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಈ ಹಿಂದೆ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ 13,79,785 ಮತದಾರರು ಮ್ಯಾಪಿಂಗ್ ಮಾಡದ ವರ್ಗದ ಅಡಿಯಲ್ಲಿ ಬಂದಿದ್ದಾರೆ. ಇನ್ನೂ 19,33,134 ಮತದಾರರನ್ನು ತಾರ್ಕಿಕ ವ್ಯತ್ಯಾಸಗಳಿಗಾಗಿ ಗುರುತಿಸಲಾಗಿದೆ.

Vishakha Bhat Heggar

View all posts by this author