ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮತ್ತೊಮ್ಮೆ ಆಮರಣಾಂತ ಉಪವಾಸ ಘೋಷಿಸಿದ ಅಣ್ಣಾ ಹಜಾರೆ; ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯ

ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಅಮರಣಾಂತ ಉಪವಾಸ ನಡೆಸುವುದಾಗಿ ಹೇಳಿದ್ದಾರೆ. ಇದು ತಮ್ಮ ಅಂತಿಮ ಹೋರಾಟ ಎಂದು ಹೇಳಿರುವ ಅವರು ಮಹಾರಾಷ್ಟ್ರ ಸರ್ಕಾರ ಲೋಕಾಯುಕ್ತ ಕಾಯ್ದೆಯನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದು, ಜನವರಿ 30ರಿಂದ ಮಹಾರಾಷ್ಟ್ರದ ರಾಲೇಗನ್ ಸಿದ್ಧಿಯಲ್ಲಿ ಅನಿರ್ದಿಷ್ಟವಧಿ ಉಪವಾಸ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

(ಸಂಗ್ರಹ ಚಿತ್ರ)

ನವದೆಹಲಿ: ಲೋಕಾಯುಕ್ತ ಕಾನೂನು (Lokayukta Act) ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಮರಣಾಂತ ಉಪವಾಸ (hunger strike) ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಘೋಷಿಸಿದ್ದಾರೆ. ಇದು ತಮ್ಮ ಅಂತಿಮ ಹೋರಾಟ ಎಂದಿರುವ ಅವರು, ಸಾರ್ವಜನಿಕ ಕಲ್ಯಾಣಕ್ಕೆ ಈ ಕಾನೂನು ಅಗತ್ಯವಿದೆ. ಆದರೆ ಇದನ್ನು ಜಾರಿಗೆ ತರುವಲ್ಲಿ ಮಹಾರಾಷ್ಟ್ರ ಸರ್ಕಾರ (Maharastra Government) ಅನೇಕ ವರ್ಷಗಳಿಂದ ನಿರ್ಲಕ್ಷ ಮಾಡುತ್ತಿದೆ. ಆದ್ದರಿಂದ ರಾಲೇಗನ್ ಸಿದ್ಧಿಯಲ್ಲಿ ಜನವರಿ 30ರಿಂದ ತಾವು ಅನಿರ್ದಿಷ್ಟವಧಿಯ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ.

2011ರಲ್ಲಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆದಿದ್ದ ಅಣ್ಣಾ ಹಜಾರೆ ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ 2022ರಲ್ಲಿ ರಾಲೇಗನ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆಗ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಕೃಷಿ ಸಚಿವರು ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ಮರಳಿ ಪಡೆಯುವಂತೆ ಮಾಡಿದ್ದರು.

Rahul Gandhi: "3 ವರ್ಷದಿಂದ ರಾಹುಲ್‌ ಭೇಟಿಯಾಗಿ ಅಲೆಯುತ್ತಿದ್ದೇನೆ"; ಕಾಂಗ್ರೆಸ್‌ ಅವನತಿ ಕುರಿತು ಸೋನಿಯಾಗೆ ಪತ್ರ ಬರೆದ ಮಾಜಿ MLA

ಆ ಬಳಿಕ ಲೋಕಾಯುಕ್ತ ಕಾನೂನು ಜಾರಿಗೆ ಒಂದು ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯು ಲೋಕಾಯುಕ್ತ ಕಾಯ್ದೆಯ ಕರಡನ್ನು ಸಿದ್ಧಪಡಿಸಿತ್ತು. ಇದನ್ನು ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳಲ್ಲಿ ಮಂಡಿಸಲಾಗಿದ್ದು, ಇದನ್ನು ಅಂಗೀಕರಿಸಿ ಅಂತಿಮ ಒಪ್ಪಿಗೆಗಾಗಿ ರಾಷ್ಟ್ರಪತಿಗೆ ಕಳುಹಿಸಿಕೊಡಲಾಗಿದೆ. ಆದರೆ ಆ ಬಳಿಕ ಏನಾಗಿದೆ ಎನ್ನುವ ಕುರಿತು ಮಾಹಿತಿ ಇಲ್ಲ. ಕಾಯ್ದೆಯೂ ಜಾರಿಗೆ ಬಂದಿಲ್ಲ. ಹೀಗಾಗಿ ಅಣ್ಣಾ ಹಜಾರೆ ಅವರು ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ.

ಪ್ರತಿಭಟನೆಯ ಕುರಿತು ಘೋಷಣೆ ಮಾಡುವುದಕ್ಕೂ ಮೊದಲು ಕಾಯ್ದೆಯ ಕುರಿತು ಪ್ರಶ್ನಿಸಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಏಳು ಪತ್ರಗಳನ್ನು ಬರೆದಿದ್ದೇನೆ. ಆದರೆ ಅವರಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ಹಜಾರೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕಾನೂನನ್ನು ಸರ್ಕಾರ ಜಾರಿಗೆಗೊಳಿಸಲು ಯಾಕೆ ವಿಳಂಬ ಮಾಡುತ್ತಿದೆ ಎಂಬುದು ತಿಳಿಯುತ್ತಿಲ್ಲ. ಸರ್ಕಾರವು ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು ಪ್ರದರ್ಶನಕ್ಕಾಗಿ ಅಲ್ಲ ಎಂದರು.

Ashwini Vaishnaw: 15,767 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ

ಅಣ್ಣಾ ಹಜಾರೆ ಅವರು ಜನವರಿ 30ರಂದು ಉಪವಾಸಕ್ಕೆ ಕುಳಿತುಕೊಳ್ಳುವುದಾಗಿ ಘೋಷಿಸಿದ್ದು, ಈ ದಿನ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಾಗಿದೆ. ತಮ್ಮ ಸಂಪೂರ್ಣ ಜೀವನವೇ ದೇಶದ ಕಲ್ಯಾಣಕ್ಕಾಗಿ ಮೀಸಲಾಗಿದೆ ಎಂದಿರುವ ಅವರು ನನ್ನ ದೇಹದಲ್ಲಿ ಜೀವ ಇರುವವರೆಗೂ ಸಮಾಜಕ್ಕಾಗಿ ದುಡಿಯುತ್ತೇನೆ. ಕಾನೂನು ಜಾರಿಯಾಗುವವರೆಗೂ ಹೋರಾಡುತ್ತೇನೆ ಇಲ್ಲವಾದರೆ ನಾನು ಅಲ್ಲಿಯೇ ಸಾಯುತ್ತೇನೆ ಎಂದು ಅವರು ಹೇಳಿದರು.

ಈ ದೇಶವು ಕಾನೂನಿನ ಆಧಾರದಲ್ಲಿ ನಡೆಯುತ್ತಿದೆ. ಈವರೆಗೆ ನಾನು 10 ಕಾನೂನುಗಳನ್ನು ರೂಪಿಸಲು ಸಹಾಯ ಮಾಡಿದ್ದೇನೆ. ಈಗ ರಾಜ್ಯದಲ್ಲಿ ಬಲವಾದ ಲೋಕಾಯುಕ್ತ ಕಾನೂನು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ವಿದ್ಯಾ ಇರ್ವತ್ತೂರು

View all posts by this author