ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು: 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ; ರೈಲು ಸಂಚಾರಕ್ಕೂ ಅಡ್ಡಿ

Dense fog at Delhi airport: ನವದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಆವರಿಸಿದ್ದು, 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದ ಪ್ರಯಾಣಿಕರು ಪ್ರಯಾಣದಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಮತ್ತು ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು (ಸಂಗ್ರಹ ಚಿತ್ರ)

ನವದೆಹಲಿ: ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಲ್ಲಿ ಪ್ರತಿದಿನ ಬೆಳಿಗ್ಗೆ ಮಂಜು ಆವರಿಸುತ್ತಿದ್ದು, ಭಾನುವಾರವೂ ಈ ಪ್ರವೃತ್ತಿ ಮುಂದುವರೆದಿದೆ. ಗೋಚರತೆ ಕಡಿಮೆಯಾಗಿ ಪ್ರಯಾಣಕ್ಕೆ ಅಡ್ಡಿಯಾಗಿದೆ. ವಿಮಾನ (flight) ಮತ್ತು ರೈಲು (train) ಪ್ರಯಾಣದ ಮೇಲೆ ಮಂಜು ಪರಿಣಾಮ ಬೀರಿರುವುದರಿಂದ, ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಇಲ್ಲಿಯವರೆಗೆ 200ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಪ್ರತಿಕೂಲ ಹವಾಮಾನ ಮತ್ತು ಮಂಜಿನಿಂದಾಗಿ ಉತ್ತರ ರೈಲ್ವೆಯಿಂದ ಕಾರ್ಯನಿರ್ವಹಿಸುವ 50ಕ್ಕೂ ಹೆಚ್ಚು ರೈಲುಗಳು ವಿಳಂಬವಾಗಿವೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಂಜು ಕವಿದಿರುವುದರಿಂದ ಏನೂ ಕಾಣಿಸುತ್ತಿಲ್ಲ. ಹೀಗಾಗಿ ಆಯ್ದ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ವಿಳಂಬ ಅಥವಾ ಬದಲಾವಣೆಗಳು ಸಂಭವಿಸಬಹುದು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಭಾನುವಾರ ಎಚ್ಚರಿಕೆ ನೀಡಿದೆ.

ಗುವಾಹಟಿಯಲ್ಲಿ ದೇಶದ ಮೊದಲ ಬಿದಿರಿನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಉತ್ತರ ಭಾರತದ ಕೆಲವು ಭಾಗಗಳಲ್ಲಿನ ಮಂಜಿನ ವಾತಾವರಣವು ಗೋಚರತೆಯ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಆಯ್ದ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸಂಚಾರದಲ್ಲಿ ವಿಳಂಬ ಅಥವಾ ಬದಲಾವಣೆಗಳು ಸಂಭವಿಸಬಹುದು. ಪ್ರಯಾಣಿಕರು ತಮ್ಮ ವಿಮಾನಗಳ ನವೀಕರಣಗಳನ್ನು ಅಧಿಕೃತ ಮಾರ್ಗಗಳ ಮೂಲಕ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಿ, ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಹಾಗೂ ಅಗತ್ಯ ಪ್ರಕ್ರಿಯೆಗಳಿಗೆ ಹೆಚ್ಚುವರಿ ಸಮಯವನ್ನು ಮೀಸಲಿಡುವಂತೆ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಸಲಹೆ ನೀಡಿದೆ.

ದೆಹಲಿ ವಿಮಾನ ನಿಲ್ದಾಣ ಹೇಳಿದ್ದೇನು?

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಸಾಮಾನ್ಯವಾಗಿ ಮುಂದುವರೆದಿವೆ ಎಂದು ದೆಹಲಿ ವಿಮಾನ ನಿಲ್ದಾಣದ ಪ್ರಾಧಿಕಾರ ತಿಳಿಸಿದೆ. ಆದರೆ, ಪ್ರಯಾಣಿಕರು ನವೀಕರಿಸಿದ ವಿಮಾನ ವೇಳಾಪಟ್ಟಿಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಸಮಾಲೋಚಿಸುವಂತೆ ಸಲಹೆ ನೀಡಿದೆ.

India-Pakistan ceasefire: ಮಂಗಳವಾರದಿಂದ ಜಮ್ಮು ವಿಮಾನ ನಿಲ್ದಾಣದಲ್ಲಿ ಸೇವೆ ಪುನರಾರಂಭ

ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯ ರೀತಿಯಲ್ಲಿ ಮುಂದುವರೆದಿವೆ. ನವೀಕರಿಸಿದ ವಿಮಾನ ವೇಳಾಪಟ್ಟಿಗಳಿಗಾಗಿ, ದಯವಿಟ್ಟು ನಿಮ್ಮ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಿ ಅಥವಾ ಅಧಿಕೃತ ವಿಮಾನ ನಿಲ್ದಾಣದ ವೆಬ್‌ಸೈಟ್‌ಗೆ ಭೇಟಿ ನೀಡಿ. ಎಲ್ಲಾ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಆಹ್ಲಾದಕರ ಪ್ರಯಾಣವನ್ನು ನಾವು ಬಯಸುತ್ತೇವೆ ಎಂದು ಎಕ್ಸ್‌ನಲ್ಲಿ ತಿಳಿಸಲಾಗಿದೆ.

ದೆಹಲಿಯಲ್ಲಿ ಮುಂದುವರಿದ ಹೊಗೆ, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಮತ್ತಷ್ಟು ಕುಸಿತ

ಭಾನುವಾರ ಬೆಳಗ್ಗೆಯೂ ದೆಹಲಿಯಲ್ಲಿ ಮತ್ತೆ ವಿಷಕಾರಿ ಹೊಗೆ ದಟ್ಟವಾಗಿ ಕಾಣಿಸಿಕೊಂಡಿದೆ. ಇದರಿಂದ ಏನೇನೂ ಕಾಣಿಸದಾಯಿತು. ವಾಹನ ಸವಾರರು ಪರದಾಡುವಂತಾಯಿತು. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) ಬೆಳಗ್ಗೆ 7 ಗಂಟೆಯ ಸುಮಾರಿಗೆ 390ಕ್ಕೆ ದಾಖಲಾಗಿದೆ. ಇದು ಅತ್ಯಂತ ಕಳಪೆಯಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ತಿಳಿಸಿದೆ.

ರಾಷ್ಟ್ರ ರಾಜಧಾನಿಯ ಹಲವಾರು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಕುಸಿದಿದ್ದು, ಗಂಭೀರ ಮಟ್ಟವನ್ನು ತಲುಪಿದೆ. ದೆಹಲಿಯ ಹಲವು ಭಾಗಗಳಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚಾಗಿದೆ.