ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CJI BR Gavai: ಸಿಜೆಐಗೆ ಅವಹೇಳನ, ಐವರ ಮೇಲೆ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲು

Supreme court: ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ ಮಂಜು ಹೆಸರಿನ‌ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ‌ ಕಾಯ್ದೆಯ 67, 66 ಹಾಗೂ 66(C), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು: ಇತ್ತೀಚಿಗೆ ಸುಪ್ರೀಂ ಕೋರ್ಟ್ (Supreme court) ಸಿಜೆಐ ಬಿ.ಆರ್ ಗವಾಯಿ (CJI BR Gavai) ಅವರ ಮೇಲೆ ಹಿರಿಯ ವಕೀಲ ರಾಕೇಶ್ ಕಿಶೋರ್ ಶೂ ಎಸೆದಿದ್ದ ಪ್ರಕರಣ ಭಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಸಿಜೆಐ ಬಿ.ಆರ್ ಗವಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಐದು ಖಾತೆಗಳ ವಿರುದ್ಧ ಬೆಂಗಳೂರಿನ (Bengaluru) ಸೈಬರ್ ಕ್ರೈಮ್ (Cyber crime) ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ ಮಂಜು ಹೆಸರಿನ‌ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ‌ ಕಾಯ್ದೆಯ 67, 66 ಹಾಗೂ 66(C), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶೂ ಎಸೆತದ ಪ್ರಕರಣದ ಕುರಿತು ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥ ಕಾಮೆಂಟ್ ಪ್ರಕಟಿಸಿದ್ದರು. ಇದನ್ನು ಗಮನಿಸಿದ್ದ ಸೈಬರ್ ಕ್ರೈಮ್‌ನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Rakesh Kishore: CJI ಗವಾಯಿ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಯಾರು? ಘಟನೆ ಹಿಂದಿದೆಯಾ ಆ ಕಾರಣ?

ಪ್ರಕರಣದ ಹಿನ್ನೆಲೆಯೇನು?

ಅಕ್ಟೋಬರ್ 06 ರಂದು ಈ ಘಟನೆ ನಡೆದಿದ್ದು, ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಬಿರ್.ಆರ್ ಗವಾಯಿ ಅವರು ನ್ಯಾಯಾಲಯದಲ್ಲಿ ಕಲಾಪ ನಡೆಸುವ ವೇಳೆ ವಕೀಲ ರಾಕೇಶ್ ಕಿಶೋರ್ (Rakesh Kishore) ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದಾನೆ. ಘಟನೆೆ ಬಗ್ಗೆ ಬಹಳ ತಾಳ್ಮೆಯಿಂದ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ, ʼಘಟನೆಯಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಕೋರ್ಟ್‌ನಲ್ಲಿದ್ದ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದರು.

ಸಿಜೆಐ ಮೇಲೆಯೇ ಶೂ ಎಸೆತ ಪ್ರಯತ್ನ ಮಾಡಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ವಕೀಲ ರಾಕೇಶ್ ಕಿಶೋರ್ ಹೇಳಿದ್ದು, ನಾನು ಮಾಡಿದ್ದು ಸರಿಯಿದೆ ಎಂದು ವಿತಂಡ ವಾದ ಮಾಡಿದ್ದಾನೆೆ. ಪ್ರಕರಣದ ಸಲುವಾಗಿ ನಾನು ಯಾವುದೇ ಪರಿಣಾಮ ಎದುರಿಸಲು ಸಿದ್ಧನಿದ್ದೇನೆ. ನಾನು ಜೈಲಿಗೆ ಹೋಗುತ್ತೇನೆ. ಅಲ್ಲಿನ ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆಂದು ಹೇಳಿದ್ದಾನೆ.

ಹರೀಶ್‌ ಕೇರ

View all posts by this author