ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

“ಸ್ನೇಹ-ಸಂಬಂಧಗಳ ಹೊರತಾಗಿಯೂ ಉಕ್ರೇನ್ ಯುದ್ಧ ನಿಲ್ಲಿಸಲು ಭಾರತ ಬಯಸುತ್ತದೆ”: ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಪುಟಿನ್‌

India Wants Ukraine War to End: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಪ್ರಯತ್ನಗಳನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶ್ಲಾಘಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿನ ಸಂಘರ್ಷವನ್ನು ಅಂತ್ಯಗೊಳಿಸುವ ಕುರಿತು ನಿರಂತರವಾಗಿ ಪ್ರಶ್ನೆ ಎತ್ತುತ್ತಿರುವ ವಿಶ್ವ ನಾಯಕರಲ್ಲಿ ಒಬ್ಬರು ಎಂದು ಅವರು ಹೇಳಿದರು.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್-ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ, ಅ.2: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಾಡುತ್ತಿರುವ ಪ್ರಯತ್ನಗಳನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (Vladimir Putin) ಶ್ಲಾಘಿಸಿದ್ದಾರೆ. ಶಾಂತಿಯುತ ಪರಿಹಾರ ಕಂಡುಕೊಳ್ಳಲು ಮೋದಿ ಬಹಳ ಉತ್ತಮ ಆಲೋಚನೆಗಳನ್ನು ಹೊಂದಿದ್ದಾರೆ ಎಂದು ಪುಟಿನ್ ಹೇಳಿದ್ದಾರೆ. ಗುರುವಾರ (ಅ.1) ರಷ್ಯಾದ ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪುಟಿನ್, ತಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿದ್ದರೂ ಪ್ರಧಾನಿ ಮೋದಿ ಅವರು ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ಬಗ್ಗೆ ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಿದರು.

ರಷ್ಯಾ-ಉಕ್ರೇನ್ ಸಂಘರ್ಷ ಇದೀಗ ಐದನೇ ವರ್ಷಕ್ಕೆ ಕಾಲಿಟ್ಟಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೊಂದಿಗೆ ಉತ್ತಮ ಮತ್ತು ಸ್ನೇಹಪರ ಸಂಬಂಧ, ವೈಯಕ್ತಿಕವಾಗಿ ಉತ್ತಮ ಬಾಂಧವ್ಯ ಹೊಂದಿದ್ದರೂ, ಉಕ್ರೇನ್‌ನಲ್ಲಿನ ಸಂಘರ್ಷವನ್ನು ಅಂತ್ಯಗೊಳಿಸುವ ಕುರಿತು ನಿರಂತರವಾಗಿ ಪ್ರಶ್ನೆ ಎತ್ತುತ್ತಿರುವ ವಿಶ್ವ ನಾಯಕರಲ್ಲಿ ಒಬ್ಬರು ಎಂದು ಅವರು ಹೇಳಿದರು.

“ಉಕ್ರೇನ್ ಸಂಘರ್ಷಕ್ಕೆ ಪರಸ್ಪರ ಒಪ್ಪಿಗೆಯಾಗುವ ಪರಿಹಾರಗಳನ್ನು ಕಂಡುಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಅವರಿಗೆ ತೀವ್ರ ಆಸಕ್ತಿ ಇದೆ. ಅವರ ಬಳಿ ಉತ್ತಮ ಆಲೋಚನೆಗಳಿವೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಸಹಜವಾಗಿಯೇ ತಟಸ್ಥ ನಿಲುವನ್ನು ಹೊಂದಿದ್ದಾರೆ. ಆದರೆ ಸಂಘರ್ಷ ಅಂತ್ಯಗೊಳ್ಳಬೇಕು ಎಂಬ ಆಸಕ್ತಿಯನ್ನು ಅವರು ಹೊಂದಿದ್ದಾರೆ. ಇದನ್ನು ನೇರವಾಗಿ ಹೇಳುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ಅವರ ಆಲೋಚನೆಗಳಿಗಾಗಿ ನಾವು ಭಾರತದ ಪ್ರಧಾನಿಗೆ ಕೃತಜ್ಞರಾಗಿದ್ದೇವೆ” ಎಂದು ಪುಟಿನ್ ಹೇಳಿದರು.

ಅಮೆರಿಕದ ಸುಂಕ ಬೆದರಿಕೆ ನಡುವೆ ನರೇಂದ್ರ ಮೋದಿ–ಡೊನಾಲ್ಡ್‌ ಟ್ರಂಪ್ ಮಾತುಕತೆ: ವ್ಯಾಪಾರ, ರಕ್ಷಣೆ ಸೇರಿ ಹಲವು ವಿಚಾರಗಳ ಚರ್ಚೆ

ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದ ವೇಳೆ, ಪ್ರಧಾನಿ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧದ ಕುರಿತು ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದರು. ಸೆಪ್ಟೆಂಬರ್ 11ರಂದು ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಅವರು, ಸಂಘರ್ಷಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ಏಕೈಕ ಮಾರ್ಗ ಎಂದು ಹೇಳಿದ್ದರು.

ಸಭೆ ನಡೆಯುವ ಎರಡು ವಾರಗಳ ಮೊದಲು, ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪುಟಿನ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ ಅವರು, ಇದು ಯುದ್ಧದ ಯುಗವಲ್ಲ ಎಂಬ ತಮ್ಮ ಸಂದೇಶವನ್ನು ಮತ್ತೊಮ್ಮೆ ಒತ್ತಿಹೇಳಿದ್ದರು. ಈ ಯುದ್ಧವು ಆದಷ್ಟು ಬೇಗ ಅಂತ್ಯಗೊಳ್ಳಬೇಕು ಎಂಬುದು ಇಡೀ ಮಾನವಕುಲದ ಆಶಯವಾಗಿದೆ ಪುಟಿನ್ ಅವರೊಂದಿಗೆ ನಡೆದ ಜಂಟಿ ಹೇಳಿಕೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

“ನಾವು ಉಕ್ರೇನ್ ವಿಷಯದ ಬಗ್ಗೆ ನಿರಂತರವಾಗಿ ಚರ್ಚಿಸುತ್ತಿದ್ದೇವೆ. ನಾವು ಕೊನೆಯ ಬಾರಿ ಭೇಟಿಯಾದಾಗಲೂ ನೀವು ಅಲ್ಲಿನ ಪರಿಸ್ಥಿತಿಯನ್ನು ನನಗೆ ವಿವರವಾಗಿ ತಿಳಿಸಿದ್ದೀರಿ. ನಿಮಗೆ ತಿಳಿದಿರುವಂತೆ, ಬಿಕ್ಕಟ್ಟನ್ನು ಪರಿಹರಿಸಲು ಎಲ್ಲಾ ಶಾಂತಿಯುತ ಮಾರ್ಗಗಳನ್ನು ಭಾರತ ಬೆಂಬಲಿಸುತ್ತದೆ” ಎಂದು ಮೋದಿ ಹೇಳಿದರು. “ಎಲ್ಲಾ ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸುವುದನ್ನು ಭಾರತ ಪ್ರತಿಪಾದಿಸುತ್ತದೆ. ಇದು ಇಡೀ ಮಾನವಕುಲದ ಹಿತದೃಷ್ಟಿಯಿಂದ ಅಗತ್ಯವಾಗಿದೆ” ಎಂದು ಅವರು ಹೇಳಿದರು.

ಡೊನಾಲ್ಡ್‌ ಟ್ರಂಪ್‌ ಭಾರತದ ಮೇಲೆ ಶೇಕಡಾ 100ರಷ್ಟು ಸುಂಕ ವಿಧಿಸಿದ ಬೆನ್ನಲ್ಲೇ ಅಮೆರಿಕ ಪ್ರವಾಸಕ್ಕೆ ನರೇಂದ್ರ ಮೋದಿ ಸಜ್ಜು

2022ರ ಫೆಬ್ರವರಿಯಲ್ಲಿ ಆರಂಭವಾದ ರಷ್ಯಾ-ಉಕ್ರೇನ್ ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸುವ ಅಗತ್ಯವನ್ನು ಪ್ರಧಾನಿ ಮೋದಿ ಅವರು ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಮಾತುಕತೆಗಳಲ್ಲಿ ನಿರಂತರವಾಗಿ ಒತ್ತಿಹೇಳುತ್ತಾ ಬಂದಿದ್ದಾರೆ.

“ಶಾಶ್ವತ ಶಾಂತಿಗಾಗಿ ಭಾರತ ಪ್ರತಿಪಾದಿಸುತ್ತದೆ. ಇದು ಯುದ್ಧದ ಯುಗವಲ್ಲ. ಮಾನವಕುಲಕ್ಕೆ ಅಪಾಯವನ್ನುಂಟುಮಾಡುವ ಸವಾಲುಗಳ ವಿರುದ್ಧ ಎಲ್ಲರೂ ಒಗ್ಗೂಡುವ ಸಮಯವಿದು. ಆದ್ದರಿಂದ, ಭಾರತ ರಾಜತಾಂತ್ರಿಕತೆ ಮತ್ತು ಮಾತುಕತೆಯಲ್ಲಿ ನಂಬಿಕೆ ಇಟ್ಟಿದೆ” ಎಂದು ಪ್ರಧಾನಿ ಮೋದಿ ಅವರು ಹೇಳಿದ್ದರು.