ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Breaking News: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್‌ ಅವರು ಜುಲೈ 25 ರಂದು ಶನಿವಾರಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಸಲ್ಲಿಕೆ.

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆಂದು ವರದಿಯಾಗಿದೆ.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಆರಂಭಗೊಂಡಿರುವ ಸಿಜೆಪಿ (Cockroach Janta Party) ನೇತೃತ್ವದ ಪ್ರತಿಭಟನೆಯು, ಪರೀಕ್ಷಾ ವ್ಯವಸ್ಥೆಯಲ್ಲಿ ಜವಾಬ್ದಾರಿತನ, ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಸುಧಾರಣೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಮಾಸ್ಟರ್ ಮೈಂಡ್ ಬಿಹಾರದಲ್ಲಿ ಬಂಧನ

ನೀಟ್-ಯುಜಿ ಪರೀಕ್ಷೆ ವಿವಾದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಹಲವಾರು ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದು, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಕೂಡ ಜೂನ್ 28ರಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಕೇಂದ್ರ ಸರ್ಕಾರವು ಕೆಲವು ಪ್ರಮುಖ ಭರವಸೆಗಳನ್ನು ಲಿಖಿತ ರೂಪದಲ್ಲಿ ನೀಡಿದ ನಂತರ, ಈ ವಾರದ ಆರಂಭದಲ್ಲಿ ವಾಂಗ್ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.

ನೀಟ್-ಯುಜಿ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತಂತೆ ಕೇಂದ್ರ ಸರ್ಕಾರ ಮತ್ತು ಸಿಜೆಪಿ (Cockroach Janta Party) ನಡುವಿನ ಮೂರನೇ ಸುತ್ತಿನ ಮಾತುಕತೆಗೂ ಮುನ್ನ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ "ರಾಜಿಯಾಗದ ಬೇಡಿಕೆ" ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರು.



ಇದರ ಕೆಲವೇ ಗಂಟೆಗಳ ಬಳಿಕ, ಧರ್ಮೇಂದ್ರ ಪ್ರಧಾನ್ ಅವರು ಎರಡು ಪುಟಗಳ ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗಳು ಮತ್ತು ರಾಜಕೀಯ ಒತ್ತಡದ ನಡುವೆ ಮೋದಿ ಸರ್ಕಾರದ ಹಿರಿಯ ಸಚಿವರೊಬ್ಬರು ರಾಜೀನಾಮೆ ನೀಡಿರುವುದು ಅಪರೂಪದ ಬೆಳವಣಿಗೆಯಾಗಿದೆ.

ಇಂಡಿಯಾ ಟುಡೇಗೆ ಮೂಲಗಳು ನೀಡಿದ ಮಾಹಿತಿಯ ಪ್ರಕಾರ, ನೀಟ್ ವಿವಾದದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆಯೇ ಹೊರತು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿಲ್ಲ. ಇದರಿಂದ ಸರ್ಕಾರವು ಅವರಿಗೆ ಗೌರವಯುತ ನಿರ್ಗಮನ ಕಲ್ಪಿಸಲು ಮುಂದಾಗಿತ್ತು ಎಂಬ ಸಂದೇಶವೂ ವ್ಯಕ್ತವಾಗಿದೆ.

“ಯುವಜನತೆಯೇ ಭಾರತದ ನಿಜವಾದ ಶಕ್ತಿ”: ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್‌ ಹೇಳಿದ್ದೇನು? ಇಲ್ಲಿದೆ ಕಂಪ್ಲೀಟ್‌ ಡೀಟೈಲ್‌

ಒಡಿಶಾ ಮೂಲದ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ಅವರು 2021ರಲ್ಲಿ ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಬಳಿಕ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ನಂತರವೂ ಅವರು ಅದೇ ಹುದ್ದೆಗೆ ಮರುನೇಮಕಗೊಂಡಿದ್ದರು.

ಧರ್ಮೇಂದ್ರ ಪ್ರಧಾನ್‌ ಹೇಳಿದ್ದೇನು?

ಕಳೆದ 10 ದಿನಗಳ ಬೆಳವಣಿಗೆಗಳು ತಮ್ಮನ್ನು "ತೀವ್ರವಾಗಿ ದುಃಖಿತಗೊಳಿಸಿವೆ" ಎಂದು ಪ್ರಧಾನ್ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜುಲೈ 20ರಂದು ವಿದ್ಯಾರ್ಥಿಗಳು ಸಂಸತ್ತಿನತ್ತ ನಡೆಸಿದ ಪ್ರತಿಭಟನಾ ಮೆರವಣಿಗೆಯ ವೇಳೆ ಸಂಭವಿಸಿದ ಭಾರೀ ಹಿಂಸಾಚಾರವನ್ನು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ಈ ಹಿಂಸಾಚಾರದಲ್ಲಿ 180ಕ್ಕೂ ಹೆಚ್ಚು ವಿದ್ಯಾರ್ಥಿ ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.