ಪ್ರತಿಭಟನೆಯ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ...ಪಕ್ಷದೊಳಗಿನ ಗುಟ್ಟು ಬಿಟ್ಟುಕೊಟ್ಟ ಬಿಜೆಪಿ ನಾಯಕ
ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾದ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲು ಸಿದ್ಧವಾಗಿದ್ದರು ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಅದರ ಕ್ರೆಡಿಟ್ ಪಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆ ಬಳಿಕ ಇದರ ಕ್ರೆಡಿಟ್ ಪಡೆಯಲು ಕಾಂಗ್ರೆಸ್ (Congress) ಪ್ರಯತ್ನಿಸಿದೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿ ಹೇಳಿದ್ದು, ಕಾಕ್ರೋಚ್ ಜನತಾ ಪಕ್ಷದ (Cockroach Janta Party) ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾದ ಮೊದಲ ದಿನವೇ ಅವರು ರಾಜೀನಾಮೆ ನೀಡಲು ಸಿದ್ಧವಾಗಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಗೆ ಆಗ್ರಹಿಸಿದ್ದರು. ಅವರು ಶನಿವಾರ ರಾಜೀನಾಮೆ ನೀಡಿದ್ದರಿಂದ ಬಳಿಕ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು.
ಈ ಕುರಿತು ಇಂದೋರ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯಪ್ರದೇಶ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಬಿಜೆಪಿ ಇದನ್ನು ತಡೆಯಲು ಪ್ರಯತ್ನಿಸಿತ್ತು ಎಂದು ಅವರು ಹೇಳಿದರು.
ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!
ಬಿಜೆಪಿಯು ಆರಂಭದಲ್ಲಿ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡದಂತೆ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಕಾಯುವಂತೆ ಕೇಳಿಕೊಂಡಿತ್ತು. ಆದರೆ ಶನಿವಾರ ಅವರು ರಾಜೀನಾಮೆ ನೀಡಿದರು ಎಂದರು.
ಪರೀಕ್ಷೆಗಳಲ್ಲಿ ಅಕ್ರಮ ಮತ್ತು ನೀಟ್ ಪತ್ರಿಕೆ ಸೋರಿಕೆಯ ಆರೋಪ ಕೇಳಿ ಬಂದ ಬಳಿಕ ಕಾಕ್ರೋಚ್ ಜನತಾ ಪಕ್ಷವು ನಿರಂತರವಾಗಿ 36 ದಿನಗಳ ಪ್ರತಿಭಟನೆಯನ್ನು ನಡೆಸಿತ್ತು. ಧರ್ಮೇಂದ್ರ ಪ್ರಧಾನ್ ಅವರು ತಮಗೆ ನೀಡಲಾದ ಪ್ರತಿಯೊಂದು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಸಂಪೂರ್ಣ ಸಮರ್ಪಣೆಯಿಂದ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಹೋರಾಟ ಪ್ರಾರಂಭಿಸಿದ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ಅವರು ಬಿಜೆಪಿ ಅಧ್ಯಕ್ಷರನ್ನು ಭೇಟಿ ಮಾಡಿ ಅಗತ್ಯವೆಂದು ಭಾವಿಸಿದರೆ ತಾವು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿರುವುದಾಗಿ ತಿಳಿಸಿದ್ದರು. ಆಗ ಪಕ್ಷದ ಅಧ್ಯಕ್ಷರು ಅವರನ್ನು ತಡೆದಿದ್ದರು. ತಾವು ನಿರ್ಧಾರ ತೆಗೆದುಕೊಳ್ಳುವವರೆಗೆ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಬಾರದು ಅಥವಾ ಯಾರೊಂದಿಗೂ ಈ ಕುರಿತು ಚರ್ಚಿಸಬಾರದು ಎಂದು ಹೇಳಿದ್ದರು ಎಂದರು.
ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದಂತೆ ದೇಶದಲ್ಲಿ ಹಿಂಸಾಚಾರ ನಡೆಸಿ ರಾಜಕೀಯ ಅಸ್ಥಿರತೆ ಉಂಟು ಮಾಡಲು ವಿದೇಶಿ ಶಕ್ತಿಗಳು ಸಂಚು ರೂಪಿಸಿದ್ದರು. ಆದರೆ ಪ್ರಧಾನ್ ಅವರ ರಾಜೀನಾಮೆ ಇದನ್ನು ವಿಫಲಗೊಳಿಸಿದೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವಿಜಯವರ್ಗಿ ತಿಳಿಸಿದರು.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಸಂಭ್ರಮದಂತೆ ಆಚರಿಸಿದೆ. ವಿದ್ಯಾರ್ಥಿ ಆಂದೋಲನದಲ್ಲಿ ಕಾಂಗ್ರೆಸ್ ಯಾವ ಪಾತ್ರ ವಹಿಸಿದೆ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳು ಚಳುವಳಿಯಲ್ಲಿ ಕಾಂಗ್ರೆಸ್ ಅವರ ಅವರ ಹಿಂದೆ ನಿಂತಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ಅವರು ನಿರಾಶೆಗೊಂಡಿದ್ದರೆ. ಕಾಕ್ರೋಚ್ ಜನತಾ ಪಕ್ಷದಲ್ಲಿ ತಮ್ಮ ಹೊಸ ನಿರೀಕ್ಷೆಗಳನ್ನು ಕಂಡುಕೊಂಡಿದ್ದಾರೆ ಎಂದರು.
ಭಾರತ ಬಾಹ್ಯಾಕಾಶಕ್ಕೆ ಉಪಗ್ರಹ ಕಳುಹಿಸಿದರೆ ಪಾಕಿಸ್ತಾನ ಗಡಿಯಾಚೆಗೆ ಭಯೋತ್ಪಾದಕರನ್ನು ಕಳುಹಿಸುತ್ತಿದೆ: ರಾಜನಾಥ್ ಸಿಂಗ್
ಆರ್‌ಎಸ್‌ಎಸ್ ಗೆದ್ದಲುಗಳಂತೆ ವರ್ತಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರ ಬುದ್ಧಿಶಕ್ತಿಯ ಬಗ್ಗೆ ನನಗೆ ತುಂಬಾ ವಿಷಾದವಿದೆ. ಅವರು ಇನ್ನೂ ಆರ್‌ಎಸ್‌ಎಸ್ ಏನೆಂದು ಅರ್ಥಮಾಡಿಕೊಂಡಿಲ್ಲ ಎಂದು ಹೇಳಿದರು.