ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವುದಿಲ್ಲ; ಜನರ ಆದೇಶವನ್ನು ನಾವು ಪಾಲಿಸುತ್ತೇವೆ ಎಂದ ಕೇಂದ್ರ ಸರ್ಕಾರ!

Dharmendra Pradhan Will Not Resign: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ (NEET paper leak) ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಸಾಧ್ಯತೆಯನ್ನು ಸರ್ಕಾರ ತಳ್ಳಿಹಾಕಿದೆ ಎಂದು ಹೇಳಲಾಗಿದೆ. ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ.

ಧರ್ಮೇಂದ್ರ ಪ್ರಧಾನ್ (ಸಂಗ್ರಹ ಚಿತ್ರ)

ನವದೆಹಲಿ, ಜು.24: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ (NEET paper leak) ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡುವ ಸಾಧ್ಯತೆಯನ್ನು ಸರ್ಕಾರ ತಳ್ಳಿಹಾಕಿದೆ ಎನ್ನಲಾಗಿದೆ. ರಾಜೀನಾಮೆ ನೀಡುವುದು ಅತ್ಯಂತ ಸುಲಭದ ಕೆಲಸ ಮತ್ತು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಮಾನವಾಗಿರುತ್ತದೆ ಎಂದು ತಿಳಿಸಿವೆ. ನೀಟ್ ಹಾಗೂ ಇತರೆ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ. ಸಾಮಾಜಿಕ ಮಾಧ್ಯಮ ವಿಡಂಬನಾತ್ಮಕ ಚಳುವಳಿ ಕಾಕ್ರೋಚ್ ಜನತಾ ಪಾರ್ಟಿಗೆ (CJP) ಗೆ ಇದೊಂದು ದೊಡ್ಡ ಹೊಡೆತವಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದು ಸುಲಭದ ಕೆಲಸ. ಜನರು ನಮಗೆ ಜನಾದೇಶ ನೀಡಿದ್ದಾರೆ ಎಂದು ಸರ್ಕಾರ ಹೇಳಿದೆ ಎನ್ನಲಾಗಿದೆ. ಸರ್ಕಾರವು ಸಾಂಕೇತಿಕ ಕ್ರಮಗಳನ್ನು ತೆಗೆದುಕೊಳ್ಳುವ ಬದಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯೊಳಗಿನ ವ್ಯವಸ್ಥಿತ ಸಮಸ್ಯೆಗಳನ್ನು ಸರಿಪಡಿಸುವತ್ತ ಗಮನಹರಿಸಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಸಂಸ್ಥೆಯಲ್ಲಿನ ನ್ಯೂನತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಸರಿಪಡಿಸುವ ಕ್ರಮಗಳನ್ನು ಹೊರತರುವ ನಿರೀಕ್ಷೆಯಿದೆ.

ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಗಳ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯ ಬಗ್ಗೆಯೂ ಮೂಲಗಳು ಮಾಹಿತಿ ನೀಡಿವೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ತೊಡಗಿದ್ದ ಹಲವು ಗ್ಯಾಂಗ್‌ಗಳನ್ನು ಈಗಾಗಲೇ ಪತ್ತೆಹಚ್ಚಿ ಭೇದಿಸಲಾಗಿದೆ ಎಂದು ಅವು ತಿಳಿಸಿವೆ. ಅಲ್ಲದೆ, ಈ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಇನ್ನಷ್ಟು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ.

ಅನುಮತಿಯಿಲ್ಲದೆ ನ್ಯಾಯಾಲಯದ ವಿಡಿಯೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುವುದು ನಿಷೇಧ; ಸುಪ್ರೀಂ ಮಹತ್ವದ ಆದೇಶ

ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಗಳ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯ ಬಗ್ಗೆಯೂ ಮೂಲಗಳು ಮಾಹಿತಿ ನೀಡಿವೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ತೊಡಗಿದ್ದ ಹಲವು ಗ್ಯಾಂಗ್‌ಗಳನ್ನು ಈಗಾಗಲೇ ಪತ್ತೆಹಚ್ಚಿ ಭೇದಿಸಲಾಗಿದೆ ಎಂದು ಅವು ತಿಳಿಸಿವೆ. ಅಲ್ಲದೆ, ಈ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಇನ್ನಷ್ಟು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಪ್ರತಿಭಟನೆಗಳನ್ನು ಮುನ್ನಡೆಸುತ್ತಿರುವ ಸಿಜೆಪಿ, ಪ್ರಧಾನ್ ಅವರ ರಾಜೀನಾಮೆ ಮಾತುಕತೆಗೆ ಯೋಗ್ಯವಲ್ಲದ ಬೇಡಿಕೆಯಾಗಿ ಉಳಿದಿದೆ ಎಂದು ಪುನರುಚ್ಚರಿಸಿದ ದಿನದಂದು ಸರ್ಕಾರದ ಈ ಹೇಳಿಕೆ ಹೊರಬಿದ್ದಿದೆ.

ಶುಕ್ರವಾರ (ಜು.24) ವಿಠಲಭಾಯಿ ಪಟೇಲ್ ಹೌಸ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ, ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿ ತಿಳಿಸಿದೆ. ಜುಲೈ 20ರಂದು ನಡೆದಿದ್ದ ಸಂಸತ್ ಚಲೋ ಮೆರವಣಿಗೆಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕಾಗಿ ಕೇಂದ್ರ, ಕ್ಷಿಪ್ರ ಕಾರ್ಯಪಡೆ ಮತ್ತು ದೆಹಲಿ ಪೊಲೀಸ್ ಆಯುಕ್ತರಿಂದ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಸಂಘಟನೆ ಒತ್ತಾಯಿಸಿದೆ.