ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dilsukhnagar Blasts Case: ಬಾಂಬ್ ಸ್ಫೋಟ ಅಪರಾಧಿಗಳಿಗೆ ಮರಣದಂಡನೆ - ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು

Dilsukhnagar Blasts Case: ದಿಲ್ಸುಖ್‌ನಗರದಲ್ಲಿ 2013ರಲ್ಲಿ ಸಂಭವಿಸಿದ ಅವಳಿ ಬಾಂಬ್‌ ಸ್ಫೋಟ ಪ್ರಕರಣದ ಐದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿರುವ ಮರಣದಂಡನೆ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು.

ಅವಳಿ  ಬಾಂಬ್‌ ಬ್ಲಾಸ್ಟ್‌- ಐವರಿಗೆ ಮರಣದಂಡನೆ ಘೋಷಿಸಿದ ಹೈಕೋರ್ಟ್‌

ತೆಲಂಗಾಣ: ದಿಲ್ಸುಖ್‌ನಗರದಲ್ಲಿ (Dilsukhnagar Blasts Case) 2013ರಲ್ಲಿ ಸಂಭವಿಸಿದ ಎರಡು ಮಾರಕ ಸ್ಫೋಟ ಪ್ರಕರಣದ ಐದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿರುವ ಮರಣದಂಡನೆ ತೀರ್ಪನ್ನು ತೆಲಂಗಾಣ ಹೈಕೋರ್ಟ್ (Telangana HC) ಎತ್ತಿಹಿಡಿದಿದೆ. 2013ರ ಫೆಬ್ರವರಿ 21ರಂದು ಜನದಟ್ಟಣೆಯ ಶಾಪಿಂಗ್ ಪ್ರದೇಶವಾದ ದಿಲ್ಸುಖ್‌ನಗರದಲ್ಲಿ ಅವಳಿ ಸ್ಫೋಟಗಳು ಸಂಭವಿಸಿದ್ದವು, ಇದರಲ್ಲಿ 18 ಮಂದಿ ಸಾವನ್ನಪ್ಪಿದ್ದು, 131 ಜನರು ಗಾಯಗೊಂಡಿದ್ದರು. ಈ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಉಗ್ರರನ್ನು ಅರೆಸ್ಟ್‌ ಮಾಡಲಾಗಿತ್ತು. ಇವರಿಗೆ ವಿಚಾರಣಾ ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ವಿಚಾರಣಾ ನ್ಯಾಯಾಲಯ ವಿಧಿಸಿರುವ ಮರಣದಂಡನೆ ತೀರ್ಪನ್ನು ಎತ್ತಿ ಹಿಡಿದಿದೆ.

ಇದನ್ನೂ ಓದಿ: Sheikh Hasina: ಶೀಘ್ರದಲ್ಲೇ ಬಾಂಗ್ಲಾದೇಶಕ್ಕೆ ಮರಳುತ್ತಾರಾ ಶೇಖ್ ಹಸೀನಾ?

ನ್ಯಾಯಮೂರ್ತಿ ಕೆ. ಲಕ್ಷ್ಮಣ್, ನ್ಯಾಯಮೂರ್ತಿ ಪಿ. ಶ್ರೀ ಸುಧಾ ಅವರ ಪೀಠವು ಎನ್ಐಎ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು ಐಎಂ ಕಾರ್ಯಕರ್ತರು ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಮೇಲ್ಮನವಿಯನ್ನು ವಜಾಗೊಳಿಸಿತು. ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ದೃಢಪಡಿಸಲಾಗಿದೆ ಎಂದು ಪೀಠ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಎನ್ಐಎ ನ್ಯಾಯಾಲಯವು 2016ರ ಡಿಸೆಂಬರ್ 13ರಂದು ಐಎಂ ಸಹ- ಸಂಸ್ಥಾಪಕ ಮೊಹಮ್ಮದ್ ಅಹ್ಮದ್ ಸಿಡಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಅಜಾಜ್ ಶೇಖ್ ಸೇರಿದಂತೆ ಐದು ಮಂದಿಯನ್ನು ಅಪರಾಧಿಗಳನ್ನಾಗಿ ಘೋಷಿಸಿತ್ತು.