ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

National Herald Case‌: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತನಿಗೆ ದೆಹಲಿ ಪೊಲೀಸ್‌ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ (DK Shivakumar) ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ‌ ಶಿವಕುಮಾರ್ ಆಪ್ತನಿಗೆ ನೋಟಿಸ್

ಇನಾಯತ್‌ ಅಲಿಗೆ ನೋಟಿಸ್ -

ಹರೀಶ್‌ ಕೇರ
ಹರೀಶ್‌ ಕೇರ Dec 8, 2025 8:22 AM

ಮಂಗಳೂರು, ಡಿ.08: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ (Inayat Ali) ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ. ಇದಕ್ಕೂ ಮುನ್ನ ಈ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್‌ಗೂ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌; ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದೆ. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಪ್ರಮಾಣ, ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಎಂಬುದರ ಮಾಹಿತಿ, ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.