Self Harming: ಯುವ ವೈದ್ಯೆ ಆತ್ಮಹತ್ಯೆ, ಅಂಗೈಯ ಡೆತ್‌ನೋಟ್‌ನಲ್ಲಿತ್ತು ಆತ್ಮಹತ್ಯೆಯ ರಹಸ್ಯ
Harassment: ಅಂಗೈಯಲ್ಲಿ ಬರೆದಿರುವ ಸೂಸೈಡ್ ನೋಟ್ನಲ್ಲಿ, ಪೊಲೀಸ್ ಅಧಿಕಾರಿ ಗೋಪಾಲ್ ಬದನೆ ಐದು ತಿಂಗಳುಗಳಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಬರೆದಿದ್ದಾರೆ. ತನ್ನ ಮನೆಯ ಮಾಲೀಕರಾಗಿದ್ದ ಪ್ರಶಾಂತ್ ಬಂಕರ್ ಕೂಡ ತನಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
-
ಹರೀಶ್ ಕೇರ
Oct 25, 2025 7:51 AM
ಮುಂಬೈ, ಅ.24: ಮಹಾರಾಷ್ಟ್ರದ (Maharashtra) ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಸತತ ಅತ್ಯಾಚಾರ (Physcal Abuse) ನಡೆಸಿದ್ದಾರೆ ಮತ್ತು ಲೈಂಗಿಕ ಕಿರುಕುಳ (Harassment) ನೀಡಿದ್ದಾರೆ ಎಂದು ಆರೋಪಿಸಿ ಅವರು ತಮ್ಮ ಅಂಗೈಯಲ್ಲಿ ಡೆತ್‌ನೋಟ್ ಬರೆದುಕೊಂಡಿದ್ದಾರೆ.
ಅಂಗೈಯಲ್ಲಿ ಬರೆದಿರುವ ಸೂಸೈಡ್ ನೋಟ್ನಲ್ಲಿ, ಪೊಲೀಸ್ ಅಧಿಕಾರಿ ಗೋಪಾಲ್ ಬದನೆ ಐದು ತಿಂಗಳುಗಳಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಬರೆದಿದ್ದಾರೆ. ತನ್ನ ಮನೆಯ ಮಾಲೀಕರಾಗಿದ್ದ ಪ್ರಶಾಂತ್ ಬಂಕರ್ ಕೂಡ ತನಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
28 ವರ್ಷದ ವೈದ್ಯೆ ಬೀಡ್ ಜಿಲ್ಲೆಯವರಾಗಿದ್ದು, ಫಾಲ್ಟನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು. ಈ ಘಟನೆ ಬೆಳಕಿಗೆ ಬಂದ ನಂತರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆ ವೈದ್ಯರ ಕೈಯಲ್ಲಿ ಬರೆದಿದ್ದ ಸೂಸೈಡ್ ನೋಟ್ನ ವಿಧಿವಿಜ್ಞಾನ ವಿಶ್ಲೇಷಣೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: Police Encounter: ದೆಹಲಿಯಲ್ಲಿ ಪೊಲೀಸ್ ಎನ್‌ಕೌಂಟರ್, ನಾಲ್ವರು ಕುಖ್ಯಾತ ಗ್ಯಾಂಗ್‌ಸ್ಟರ್‌ಗಳ ಹತ್ಯೆ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸತಾರಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿ, ವೈದ್ಯೆ ತಮ್ಮ ಸೂಸೈಡ್ ನೋಟ್ನಲ್ಲಿ ಹೆಸರಿಸಿರುವ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು. ಹಾಗೇ ಈ ಪ್ರಕರಣದ ಆರೋಪಿಗಳೆಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.