ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಮಯ ವ್ಯರ್ಥ ಮಾಡಬೇಡಿ; ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸ್ ಹಲ್ಲೆಯ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿಯಲ್ಲಿ ಕಳೆದ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಕೇವಲ ವಿಡಿಯೋಗಳನ್ನು ಸಲ್ಲಿಸುವ ಮೂಲಕ ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಅರ್ಜಿದಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದೆ.

ಸಿಜೆಪಿ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಸಂಗ್ರಹ ಚಿತ್ರ -

ನವದೆಹಲಿ: ಕಳೆದ ಸೋಮವಾರ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ (Delhi police attack) ಸಂಬಂಧಿಸಿ ತುರ್ತು ಅರ್ಜಿ ವಿಚಾರಣೆಗೆ ಬುಧವಾರ ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ವಿಡಿಯೋಗಳನ್ನು ಸಲ್ಲಿಸುವ ಮೂಲಕ ನ್ಯಾಯಾಲಯದ ಮತ್ತು ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಕಾನೂನಿನಲ್ಲಿ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ (CJI Surya Kant) ಅರ್ಜಿದಾರರಿಗೆ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಸಿಜೆಪಿ ಸಲ್ಲಿಸಿದ ಅರ್ಜಿಕುರಿತು ವಿಷಯ ಪ್ರಸ್ತಾಪಿಸಲಾಯಿತು.

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಕಳೆದ ಸೋಮವಾರ ವಿದ್ಯಾರ್ಥಿ ಪ್ರತಿಭಟನಾಕಾರರು ಸಂಸತ್ತಿಗೆ ಮುತ್ತಿಗೆ ಹಾಕಲು ತೆರಳಿದ್ದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಸಿಡಿಸಿದ್ದರು. ಇದರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪೊಲೀಸರು ಕೂಡ ಗಾಯಗೊಂಡಿದ್ದರು.

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕರ ದಾಳಿಗೆ ಪೊಲೀಸ್ ಪೇದೆ ಹುತಾತ್ಮ

ಪೊಲೀಸರು ನಡೆಸಿರುವ ದೌರ್ಜನ್ಯದ ಕುರಿತು ನ್ಯಾಯಕ್ಕಾಗಿ ಸಿಜೆಪಿ ನೇತೃತ್ವದ ನಿಯೋಗ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಈ ಕುರಿತು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ನ್ಯಾಯಾಲಯದ ಮುಂದೆ ವಕೀಲರೊಬ್ಬರು ಸ್ವಯಂಪ್ರೇರಿತ ವಿಚಾರಣೆ ನಡೆಸುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ವಿ ಮೋಹನ್ ಅವರನ್ನೊಳಗೊಂಡ ನ್ಯಾಯಪೀಠವು, ನಮ್ಮ ಮತ್ತು ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ತಿಳಿಸಿದೆ.

ಪೊಲೀಸ್ ಸಿಬ್ಬಂದಿ ನಿರಾಯುಧರಾಗಿದ್ದ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತೋರಿಸುವ ವಿಡಿಯೋವನ್ನು ನ್ಯಾಯಾಲಯದ ಮುಂದೆ ವಕೀಲರು ಸಲ್ಲಿಸಲು ಮುಂದಾದಾಗ ಸಿಜೆಐ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿ, ನಮಗೆ ವಿಡಿಯೋಗಳಲ್ಲಿ ಆಸಕ್ತಿ ಇಲ್ಲ. ವೀಕ್ಷಿಸಲು ಸಮಯ ಕೂಡ ಇಲ್ಲ ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ, ಈ ಪ್ರಕರಣದಲ್ಲಿ ನ್ಯಾಯಾಲಯವನ್ನು ಎಳೆದು ತರಬೇಡಿ ಎಂದು ತಿಳಿಸಿದರು.

ದೆಹಲಿಯ ಜಂತರ್ ಮಂತರ್ ನಲ್ಲಿ ಕಳೆದ ತಿಂಗಳ ಆರಂಭದಲ್ಲಿ ಆರಂಭವಾಗಿರುವ ಪ್ರತಿಭಟನೆಯಲ್ಲಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದರು. ಶನಿವಾರ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಪ್ರತಿಭಟನಾಕಾರರು ಸ್ಥಳದಲ್ಲಿ ಸೇರಿದ್ದರು. ಈ ನಡುವೆ ಪ್ರತಿಭಟನಾಕಾರರು ಸೋಮವಾರ ದೆಹಲಿ ಸಂಸತ್ ಚಲೋ ಅಭಿಯಾನವನ್ನು ನಡೆಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಪ್ರಯತ್ನಿಸಿದ್ದರಿಂದ ಘರ್ಷಣೆಗಳು ನಡೆದಿವೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದು, ಮಳೆಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಿ ಬಂಧಿತರಾದರು.

ನೀಟ್‌ ವಿವಾದ; ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಹುಲ್ ಗಾಂಧಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ಪ್ರತಿಭಟನೆಯ ನಾಯಕತ್ವ ವಹಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.