ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

S. Jaishankar: ನಿಜಕ್ಕೂ ದೊಡ್ಡ ಹೆಜ್ಜೆ; ತಹವ್ವೂರ್‌ ರಾಣಾ ಹಸ್ತಾಂತರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಜೈಶಂಕರ್

26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್‌ ರಾಣಾನನ್ನು ಹಸ್ತಾಂತರಿಸುವುದು ಭಯೋತ್ಪಾದಕ ಕೃತ್ಯದ ಸಂತ್ರಸ್ತರಿಗೆ ನ್ಯಾಯವನ್ನು ಖಾತ್ರಿಪಡಿಸುವಲ್ಲಿ “ದೊಡ್ಡ ಹೆಜ್ಜೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ. ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ರಾಣಾನನ್ನು ಯಶಸ್ವಿಯಾಗಿ ಹಸ್ತಾಂತರಿಸಿದ ಬಗ್ಗೆ ಯುಎಸ್ ಸ್ಟೇಟ್ ಸೆಕ್ರೆಟರಿ ಮಾರ್ಕೊ ರುಬಿಯೊ ಅವರ ಹೇಳಿಕೆಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.

ತಹವ್ವೂರ್‌ ರಾಣಾ ಹಸ್ತಾಂತರದ ಬಗ್ಗೆ ಸಚಿವ  ಜೈಶಂಕರ್ ಹೇಳಿದ್ದೇನು?

Profile Vishakha Bhat Apr 12, 2025 9:39 AM

ನವದೆಹಲಿ: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್‌ ರಾಣಾನನ್ನು (Tahawwur Rana) ಹಸ್ತಾಂತರಿಸುವುದು ಭಯೋತ್ಪಾದಕ ಕೃತ್ಯದ ಸಂತ್ರಸ್ತರಿಗೆ ನ್ಯಾಯವನ್ನು ಖಾತ್ರಿಪಡಿಸುವಲ್ಲಿ “ದೊಡ್ಡ ಹೆಜ್ಜೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S. Jaishankar) ಶುಕ್ರವಾರ ಹೇಳಿದ್ದಾರೆ. ಅಮೆರಿಕದ ಅಧಿಕಾರಿಗಳಿಂದ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ರಾಣಾನನ್ನು ಯಶಸ್ವಿಯಾಗಿ ಹಸ್ತಾಂತರಿಸಿದ ಬಗ್ಗೆ ಯುಎಸ್ ಸ್ಟೇಟ್ ಸೆಕ್ರೆಟರಿ ಮಾರ್ಕೊ ರುಬಿಯೊ ಅವರ ಹೇಳಿಕೆಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಎರಡೂ ದೇಶಗಳ ನಡುವಿನ ಭಯೋತ್ಪಾದನೆ ನಿಗ್ರಹ ಸಹಕಾರವನ್ನು ಶ್ಲಾಘಿಸುತ್ತೇನೆ. 26/11 ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಾತ್ರಿಪಡಿಸುವಲ್ಲಿ ಇದು ನಿಜಕ್ಕೂ ಒಂದು ದೊಡ್ಡ ಹೆಜ್ಜೆಯಾಗಿದೆ” ಎಂದು ಎಂಇಎ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

26/11 ದಾಳಿಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ದೀರ್ಘಕಾಲದಿಂದ ಕಾಯುತ್ತಿದ್ದ ದಿನ ಅಂತಿಮವಾಗಿ ರಾಣಾ ಹಸ್ತಾಂತರದೊಂದಿಗೆ ಬಂದಿದೆ ಎಂದು ರುಬಿಯೊ ಎಕ್ಸ್ ನಲ್ಲಿ ಹೇಳಿದ್ದರು. 2008 ರ ಭೀಕರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಅವರ ಪಾತ್ರದ ಆರೋಪಗಳನ್ನು ಎದುರಿಸಲು ನಾವು ತಹವೂರ್ ಹುಸೇನ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದ್ದೇವೆ. ಭಾರತದೊಂದಿಗೆ, ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 6 ಅಮೆರಿಕನ್ನರು ಸೇರಿದಂತೆ 166 ಜನರಿಗೆ ನ್ಯಾಯವನ್ನು ನಾವು ದೀರ್ಘಕಾಲದಿಂದ ಕೋರಿದ್ದೇವೆ. ಆ ದಿನ ಬಂದಿದೆ ಎಂದು ನನಗೆ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.



ನ್ಯಾಯಾಲಯವು ರಾಣಾನನ್ನು 18 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದೆ. 26/11 ಪ್ರಮುಖ ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನು ಪ್ರತಿ 24 ಗಂಟೆಗಳಿಗೊಮ್ಮೆ ನಡೆಸುವಂತೆ ಮತ್ತು ಪ್ರತಿ ಎರಡು ದಿನಗಳಿಗೊಮ್ಮೆ ತನ್ನ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ನ್ಯಾಯಾಧೀಶರು ತಿಳಿಸಿದ್ದಾರೆ. ತಹವ್ವೂರ್ ಹುಸೇನ್ ರಾಣಾ ಪಾಕಿಸ್ತಾನದ ಮಾಜಿ ಮಿಲಿಟರಿ ವೈದ್ಯನಾಗಿ ಸೇವೆ ಸಲ್ಲಿಸಿದ್ದ.



ಈ ಸುದ್ದಿಯನ್ನೂ ಓದಿ:Narendra Modi: ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರ; 14 ವರ್ಷಗಳ ಹಿಂದೆ ಮೋದಿ ಮಾಡಿದ್ದ ಟ್ವೀಟ್‌ ವೈರಲ್‌

2011 ರಲ್ಲಿ, ಲಷ್ಕರ್-ಎ-ತೈಬಾ (LeT) ಉಗ್ರಗಾಮಿ ಗುಂಪುಗೆ ಬೆಂಬಲ ನೀಡಿದ ಆರೋಪ ಮತ್ತು ಡ್ಯಾನಿಶ್ ಪತ್ರಿಕೆ ಜಿಲ್ಯಾಂಡ್ಸ್-ಪೋಸ್ಟನ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಆತನನ್ನು ದೋಷಿ ಎಂದು ಘೋಷಿಸಲಾಗಿತ್ತು.