Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ; 4.0 ತೀವ್ರತೆ ದಾಖಲು
ದೆಹಲಿ ಹಾಗೂ ಅಕ್ಕಪಕ್ಕದ ಉತ್ತರ ಭಾರತದ ಹಲವು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 5:36:55 ಕ್ಕೆ ಸಂಭವಿಸಿದೆ. ಇನ್ನು ಪ್ರಧಾನಿ ಮೋದಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.


ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ(Delhi Earthquake) ಸಂಭವಿಸಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ದೆಹಲಿ-ಎನ್‌ಸಿಆರ್‌ನಲ್ಲಿ ಐದು ಕಿ.ಮೀ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದೆ. ಕೇಂದ್ರಬಿಂದು ದೆಹಲಿಯ ಬಳಿ ಇದೆ ಎಂದು ವರದಿಯಾಗಿದೆ. ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ ಜನ ಭಯಭೀತಗೊಂಡು ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 5:36:55 ಕ್ಕೆ ಸಂಭವಿಸಿದೆ. ಕೆಲವು ಸೆಕೆಂಡುಗಳ ಕಾಲ ನಡೆದ ಕಂಪನವು ವಸತಿ ಪ್ರದೇಶಗಳಲ್ಲಿ ಅನುಭವಿಸುವಷ್ಟು ಪ್ರಬಲವಾಗಿದ್ದು, ನಿವಾಸಿಗಳಲ್ಲಿ ಭಯಭೀತರಾಗಿದ್ದರು.
ಈ ಸುದ್ದಿಯನ್ನೂ ಓದಿ: ರೈತರ ದೆಹಲಿ ಚಲೋ ಚಳುವಳಿ: ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದು
ಪ್ರಧಾನಿ ನರೇಂದ್ರ ಮೋದಿ ಸಂದೇಶ
ಇನ್ನ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದು, ಶಾಂತವಾಗಿರಿ, ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಎಂದಿದ್ದಾರೆ.ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಅನುಭವಕ್ಕೆ ಬಂದಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಘಟನೆಯ ನಂತರ ಉಂಟಾಗಬಹುದಾದ ಆಘಾತಗಳ ಬಗ್ಗೆ ಎಚ್ಚರದಿಂದಿರಲು ಹೇಳಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಡುತ್ತಿದ್ದಾರೆ" ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.