ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Earthquake: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗಿನ ಜಾವ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲಿ ಭೀತಿ ಮನೆ ಮಾಡಿದೆ. ಲಘುವಾಗಿ ಭೂಮಿ ಕಂಪಿಸಿದ್ದರೂ ಆತಂಕಕ್ಕೀಡಾದ ಜನ ತಮ್ಮ ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭೂಕಂಪ!

Profile Rakshita Karkera Jul 10, 2025 9:22 AM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭೂಕಂಪ ಸಂಭವಿಸಿದ್ದು(Delhi Earthquake), ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗಿನ ಜಾವ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲಿ ಭೀತಿ ಮನೆ ಮಾಡಿದೆ. ಲಘುವಾಗಿ ಭೂಮಿ ಕಂಪಿಸಿದ್ದರೂ ಆತಂಕಕ್ಕೀಡಾದ ಜನ ತಮ್ಮ ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಹಾನಿ ವರದಿಯಾಗಿಲ್ಲ, ಆದರೆ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Viral Video: ಭೂಕಂಪದಿಂದ ಎಲ್ಲರೂ ಮನೆಬಿಟ್ಟು ಓಡುತ್ತಿದ್ದರೆ, ಈ ಹುಡುಗ ಮಾತ್ರ ತಿನ್ನುವುದರಲ್ಲಿ ಬ್ಯುಸಿ!

ಸ್ಥಳೀಯರ ಮಾಹಿತಿ ಪ್ರಕಾರ ಗುರುವಾರ ಬೆಳಿಗ್ಗೆ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 9.04 ರ ಸುಮಾರಿಗೆ ಕಂಪನಗಳು ಸಂಭವಿಸಿದ್ದು, ಒಂದು ನಿಮಿಷ ಕಾಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹರಿಯಾಣದ ರೋಹ್ಟಕ್‌ನಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ಅದರ ಪರಿಣಾಮ ದೆಹಲಿಯಲ್ಲೂ ಭೂಮಿ ಕಂಪಿಸಿದೆ.



ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 9:04 IST ಕ್ಕೆ 10 ಕಿಮೀ ಆಳದಲ್ಲಿ ಕಂಪನ ಸಂಭವಿಸಿದ್ದು, 28.63°N ಅಕ್ಷಾಂಶ ಮತ್ತು 76.68°E ರೇಖಾಂಶದಲ್ಲಿ ಕಂಪನ ಉಂಟಾಗಿದೆ.