ನವದೆಹಲಿ: ಗುರುಗ್ರಾಮ ಭೂ ವ್ಯವಹಾರಕ್ಕೆ (Gurugram land deal) ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Congress leader Priyanka Gandhi) ಅವರ ಪತಿ ರಾಬರ್ಟ್ ವಾದ್ರಾ (Robert Vadra) ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಮೊದಲ ಜಾರ್ಜ್ ಶೀಟ್ ಅನ್ನು ಸಲ್ಲಿಸಿದೆ. ಈ ಬಗ್ಗೆ ಕೆಂಡ ಕಾರಿರುವ ಕಾಂಗ್ರೆಸ್ (congress) ನಾಯಕರು ಇಡಿ ವಿರುದ್ಧ ಹರಿಹಾಯ್ದಿದ್ದಾರೆ. ಈ ನಡುವೆಯೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (rahul gandhi) ಅವರು ವಾದ್ರಾ ಅವರಿಗೆ ಬೆಂಬಲವನ್ನು ನೀಡಿದ್ದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯವು ರಾಬರ್ಟ್ ವಾದ್ರಾ ವಿರುದ್ಧ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದರು. ರಾಬರ್ಟ್ ವಾದ್ರಾ ವಿರುದ್ಧ ದಶಕಗಳಿಂದ ಕೇಂದ್ರ ಸರ್ಕಾರ ಬೇಟೆ ನಡೆಸುತ್ತಿದೆ ಎಂದು ಆರೋಪಿಸಿದರು.
ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರ ವಾದ್ರಾ ಅವರನ್ನು ಬೇಟೆಯಾಡುತ್ತಿದೆ. ಇತ್ತೀಚಿಗೆ ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಅದರ ಮುಂದುವರಿದ ಭಾಗವಾಗಿದೆ. ರಾಬರ್ಟ್, ಪ್ರಿಯಾಂಕಾ ಮತ್ತು ಅವರ ಮಕ್ಕಳು ಮತ್ತೊಮ್ಮೆ ದುರುದ್ದೇಶ, ರಾಜಕೀಯ ಪ್ರೇರಿತ ನಿಂದನೆ ಮತ್ತು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಈ ವೇಳೆ ನಾನು ಅವರೊಂದಿಗೆ ನಿಲ್ಲುತ್ತೇನೆ ಎಂದು ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಯಾವುದೇ ರೀತಿಯ ಕಿರುಕುಳವನ್ನು ಅವರೆಲ್ಲರೂ ತಡೆದುಕೊಳ್ಳುವಷ್ಟು ಧೈರ್ಯಶಾಲಿಗಳು ಎಂದು ನನಗೆ ಗೊತ್ತು. ಅವರೆಲ್ಲರೂ ಅದನ್ನು ಧೈರ್ಯದಿಂದ ಮತ್ತು ಗೌರವದಿಂದ ಎದುರಿಸುತ್ತಾರೆ. ಸತ್ಯವು ಅಂತಿಮವಾಗಿ ಮೇಲುಗೈ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ನಡೆದ ಭೂ ವ್ಯವಹಾರದಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವಿವಾಹವಾಗಿರುವ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದ ಒಂದು ದಿನದ ಅನಂತರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
My brother-in-law has been hounded by this government for the last ten years. This latest chargesheet is a continuation of that witch hunt.
— Rahul Gandhi (@RahulGandhi) July 18, 2025
I stand with Robert, Priyanka and their children as they face yet another onslaught of malicious, politically motivated slander and…
ರಾಬರ್ಟ್ ವಾದ್ರಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ
56 ವರ್ಷದ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಇದೇ ಮೊದಲ ಬಾರಿಗೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್‌ನಾದ್ಯಂತ 37 ಕೋಟಿ ರೂ. ಗೂ ಹೆಚ್ಚು ಮೌಲ್ಯದ 43 ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದ್ದು, ಇವು ವಾದ್ರಾ ಮತ್ತು ಅವರ ಕಂಪೆನಿಗಳಿಗೆ ಸೇರಿದೆ ಎನ್ನಲಾಗಿದೆ.
ಸುಳ್ಳು ಘೋಷಣೆಯ ಮೂಲಕ ವಾದ್ರಾ ಅವರ ಸಂಸ್ಥೆಯು 3.53 ಎಕರೆ ಭೂಮಿಯನ್ನು ಖರೀದಿಸಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದು, ಈ ಭೂಮಿಯನ್ನು 7.5 ಕೋಟಿ ರೂ.ಗೆ ಓಂಕಾರೇಶ್ವರ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್‌ನಿಂದ ಖರೀದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಸೆನ್ಸೆಕ್ಸ್ 528 ಅಂಕ ಕುಸಿತ; ರಷ್ಯಾ ತೈಲಕ್ಕೆ ನ್ಯಾಟೊ ನಿರ್ಬಂಧ, ಭಾರತದ ನಡೆ ಏನು?
ಇಡಿಯಿಂದ ಪದೇಪದೇ ವಿಚಾರಣೆಗೆ ಒಳಗಾದರೂ ವಾದ್ರಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಈ ಪ್ರಕರಣದ ಮೂಲಕ ಆಡಳಿತ ಪಕ್ಷವು ಅವರನ್ನು ಮತ್ತು ಅವರ ಕುಟುಂಬವನ್ನು ಗುರಿಯಾಗಿಸಿಕೊಂಡ ರಾಜಕೀಯ ಸೇಡು ತೀರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ವಾದ್ರಾ ಅವರನ್ನು ಬೆಂಬಲಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಮೋದಿ ಸರ್ಕಾರವು ತನ್ನ ನಾಯಕರನ್ನು ಬೆದರಿಸಲು ಮಾಡಿದ ಮತ್ತೊಂದು ಪ್ರಯತ್ನ ಇದಾಗಿದ್ದು, ಖಂಡಿತ ಅವರ ಯೋಜನೆ ವಿಫಲವಾಗುತ್ತದೆ ಎಂದು ಹೇಳಿದ್ದಾರೆ.