ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ED Raid: ದೆಹಲಿ ಸ್ಫೋಟ ಪ್ರಕರಣ; ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಇಡಿ ದಾಳಿ

Delhi Blast: ಫರಿದಾಬಾದ್ ಭಯೋತ್ಪಾದನಾ ಘಟಕ ಮತ್ತು ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಅಲ್-ಫಲಾಹ್ ವಿಶ್ವವಿದ್ಯಾಲಯದ ನಿಧಿಯ ತನಿಖೆಯನ್ನು ಆರಂಭಿಸಿರುವ ಜಾರಿ ನಿರ್ದೇಶನಾಲಯವು ಮಂಗಳವಾರ ದೆಹಲಿ-ಎನ್‌ಸಿಆರ್‌ನಾದ್ಯಂತ ಕನಿಷ್ಠ 25 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಸಂಗ್ರಹ ಚಿತ್ರ

ಫರಿದಾಬಾದ್ ಭಯೋತ್ಪಾದನಾ ಘಟಕ ಮತ್ತು ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಅಲ್-ಫಲಾಹ್ ವಿಶ್ವವಿದ್ಯಾಲಯದ ನಿಧಿಯ ತನಿಖೆಯನ್ನು ಆರಂಭಿಸಿರುವ ಜಾರಿ ನಿರ್ದೇಶನಾಲಯವು ಮಂಗಳವಾರ ದೆಹಲಿ-ಎನ್‌ಸಿಆರ್‌ನಾದ್ಯಂತ ಕನಿಷ್ಠ 25 ಸ್ಥಳಗಳಲ್ಲಿ ಶೋಧ ನಡೆಸಿದೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆಗೆ ದಾಳಿಗಳು ಪ್ರಾರಂಭವಾದವು. ವಿವರಗಳ ಪ್ರಕಾರ, ತನಿಖಾ ಸಂಸ್ಥೆಯು ಟ್ರಸ್ಟಿಗಳು ಮತ್ತು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇತರ ವ್ಯಕ್ತಿಗಳನ್ನೂ ವಿಚಾರಣೆಗೆ ಒಳಪಡಿಸಿದೆ.

ಅಲ್-ಫಲಾಹ್ ಗುಂಪಿಗೆ ಸಂಬಂಧಿಸಿದ ಒಂಬತ್ತು ನಕಲಿ ಕಂಪನಿಗಳು, ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿವೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ವಿವಿಧ ಕಂಪನಿಗಳು ಮತ್ತು ಖಾತೆಗಳಲ್ಲಿ ಒಂದೇ ಮೊಬೈಲ್‌ ಸಂಖ್ಯೆ ಬಳಸಲಾಗಿದೆ ಎಂದು ಇಡಿ ಹೇಳಿದೆ. ಅಷ್ಟೇ ಅಲ್ಲದೇ ಹಲವು ಆರೋಪಗಳನ್ನು ಪಟ್ಟಿ ಮಾಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ/ನೌಕರರ ರಾಜ್ಯ ವಿಮಾ ನಿಗಮದ ಫೈಲಿಂಗ್‌ಗಳ ಅನುಪಸ್ಥಿತಿಯು ವರದಿಯಾದ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಿಕೆಯಾಗುವುದಿಲ್ಲ. ಬ್ಯಾಂಕಿಂಗ್ ಮಾರ್ಗಗಳ ಮೂಲಕ ಕನಿಷ್ಠ ವೇತನ ವಿತರಣೆ ಮತ್ತು ಮಾನವ ಸಂಪನ್ಮೂಲ ದಾಖಲೆಗಳ ಅನುಪಸ್ಥಿತಿ ಇಂದು ಇಡಿ ಹೇಳಿದೆ.

ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ಕಾರ್ಯ ನಡೆಯುತ್ತಿದೆ



ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಹಲವಾರು ಶಂಕಿತರು ವಿಶ್ವವಿದ್ಯಾಲಯದೊಂದಿಗೆ ಸಂಬಂಧ ಹೊಂದಿದ್ದಾರೆಂದು ಎಂದು ಶಂಕಿಸಲಾಗಿದ್ದು, ಗಮನಾರ್ಹವಾಗಿ, ದೆಹಲಿ ಸ್ಫೋಟದ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಅಲ್ ಫಲಾಹ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ. ನವೆಂಬರ್ 13 ರಂದು, ಭಯೋತ್ಪಾದನಾ ಮಾಡ್ಯೂಲ್‌ನ ಕೇಂದ್ರಬಿಂದುವಾಗಿ ಹೊರಹೊಮ್ಮಿರುವ ವಿಶ್ವವಿದ್ಯಾನಿಲಯಕ್ಕೆ ಶೋಕಾಸ್ ನೋಟಿಸ್ ನೀಡಲಾಯಿತು . ವಿಶ್ವವಿದ್ಯಾನಿಲಯವು ಮಾನ್ಯತೆ ಪಡೆದಿಲ್ಲ ಅಥವಾ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

Delhi Blast: ದೆಹಲಿ ಸ್ಫೋಟ ಪ್ರಕರಣ; ಹಮಾಸ್‌ ರೀತಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರು!

ತನಿಖಾಧಿಕಾರಿಗಳು ಸಂಸ್ಥೆಯ ಮೂಲಕ ರವಾನಿಸಲಾದ ಹಣ ಮತ್ತು ಪ್ರಕರಣದಲ್ಲಿ ಈಗಾಗಲೇ ತನಿಖೆಯಲ್ಲಿರುವ ವ್ಯಕ್ತಿಗಳನ್ನು ಒಳಗೊಂಡ ಯಾವುದೇ ಅನುಮಾನಾಸ್ಪದ ಹಣಕಾಸು ವಿನಿಮಯದ ಮೇಲೆ ಕೇಂದ್ರೀಕರಿಸುವ ನಿರೀಕ್ಷೆಯಿದೆ. ಫರಿದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದ ತನಿಖೆ ಮತ್ತು ನಕಲಿ ಮತ್ತು ವಂಚನೆಗಾಗಿ ವಿಶ್ವವಿದ್ಯಾಲಯದ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಲ್-ಫಲಾಹ್ ವಿಶ್ವವಿದ್ಯಾಲಯದ ಕುಲಪತಿಗೆ ಎರಡು ಸಮನ್ಸ್ ಜಾರಿ ಮಾಡಿದ್ದಾರೆ.

ಮತ್ತೋರ್ವನ ಬಂಧನ

ದೆಹಲಿಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯಾ ಬಾಂಬರ್ ಡಾ. ಉಮರ್ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.