ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಐ-ಪಿಎಸಿ ಮೇಲೆ ಇಡಿ ದಾಳಿ; ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ರ‍್ಯಾಲಿ

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐ-ಪಿಎಸಿ) ಮತ್ತು ಅದರ ಸಹ-ಸಂಸ್ಥಾಪಕ ಪ್ರತೀಕ್ ಜೈನ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇದನ್ನು ಖಂಡಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ರ‍್ಯಾಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಬಂಗಾಳ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಾಗದೇ ಇರುವುದರಿಂದ ಈ ರೀತಿಯ ತಂತ್ರಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು.

(ಸಂಗ್ರಹ ಚಿತ್ರ)

ಕೋಲ್ಕತ್ತಾ: ವರ್ಷಾಂತ್ಯದಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದ ಚುನಾವಣೆಯನ್ನು (Bengal Assembly elections) ಎದುರಿಸಲು ತೃಣಮೂಲ ಕಾಂಗ್ರೆಸ್‌ಗೆ ಕಾರ್ಯತಂತ್ರ ರೂಪಿಸಲು ಸಹಾಯ ಮಾಡುತ್ತಿರುವ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (I-PAC) ಮತ್ತು ಅದರ ಸಹ-ಸಂಸ್ಥಾಪಕ ಪ್ರತೀಕ್ ಜೈನ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇದು ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ (West bengal) ಸರ್ಕಾರದ ನಡುವಿನ ಜಗಳಕ್ಕೆ ಕಾರಣವಾಗಿದೆ. ಇಡಿ ದಾಳಿಯನ್ನು (ED Raid) ಖಂಡಿಸಿ ಶುಕ್ರವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Chief Minister Mamata Banerjee) ನೇತೃತ್ವದಲ್ಲಿ ಅವರ ಬೆಂಬಲಿಗರು ಕೋಲ್ಕತ್ತಾದ ಬೀದಿಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐ-ಪಿಎಸಿ) ಮತ್ತು ಅದರ ಸಹ-ಸಂಸ್ಥಾಪಕ ಪ್ರತೀಕ್ ಜೈನ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಜೈನ ಅವರ ಮನೆಯಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಇತರ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಸಾರ್ಥಕತೆ ಎಂದರೆ ಇದು: ಹೆತ್ತವರ ಮೊದಲ ವಿಮಾನ ಪ್ರಯಾಣದ ಕನಸು ನನಸು ಮಾಡಿದ ಮಗ; ಭಾವನಾತ್ಮಕ ಕ್ಷಣದ ವಿಡಿಯೊ ವೈರಲ್‌

ಈ ಕುರಿತಾದ ಅರ್ಜಿ ವಿಚಾರಣೆ ನಡೆಸುತ್ತಿರುವ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸುವ್ರಾ ಘೋಷ್ ಅವರು ಹೈಕೋರ್ಟ್ ವಾರಾಂತ್ಯದಲ್ಲಿ ಕಾರ್ಯನಿರ್ವಹಿಸುವುದಿಲ್ಲವಾದ್ದರಿಂದ ಈ ಪ್ರಕರಣವನ್ನು ಬುಧವಾರ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಜೈನ್ ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಮಮತಾ ಬ್ಯಾನರ್ಜಿ ಅವರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಈ ಮೂಲಕ ಅವರು ತಮ್ಮ ಸಾಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹೀಗಾಗಿ ಕಲ್ಲಿದ್ದಲು ಹಗರಣದಲ್ಲಿ ಮುಖ್ಯಮಂತ್ರಿಯ ಪಾತ್ರ ಸೇರಿದಂತೆ ಇತರ ವಿಷಯಗಳ ಬಗ್ಗೆ ಕೂಡ ಸಿಬಿಐ ತನಿಖೆ ನಡೆಸಬೇಕೆಂದು ಅದು ಒತ್ತಾಯಿಸಿದೆ. ಇದಕ್ಕೆ ಪ್ರತಿಯಾಗಿ ಜೈನ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಈ ಕುರಿತಾಗಿ ಶುಕ್ರವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಬ್ಯಾನರ್ಜಿ ಅವರು ಕೋಲ್ಕತ್ತಾದ ಜಾದವ್‌ಪುರದಿಂದ 6 ಕಿಮೀ ದೂರದಲ್ಲಿರುವ ಹಜ್ರಾ ಕ್ರಾಸಿಂಗ್‌ಗೆ ಕಾಲ್ನಡಿಗೆಯಲ್ಲಿ ದೊಡ್ಡ ಪ್ರತಿಭಟನಾ ರ‍್ಯಾಲಿ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯು ಪಶ್ಚಿಮ ಬಂಗಾಳದ ಚುನಾವಣೆ ಗೆಲ್ಲಲು ಹತಾಶವಾಗಿರುವುದರಿಂದ ಇಡಿಯನ್ನು ಮುಂದಿಟ್ಟುಕೊಂಡು ನಮ್ಮನ್ನು ಸೋಲಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳೋದಲ್ಲ, ಜನರನ್ನೇ ಕೇಳಿ: ಡಿಕೆಶಿಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರು ಇಡಿ ಅಧಿಕಾರಿಗಳನ್ನು ಬೆದರಿಸಿದ್ದಾರೆ. ಇದಕ್ಕಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ವಿದ್ಯಾ ಇರ್ವತ್ತೂರು

View all posts by this author