ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಟ್ರಕ್‌-ಟ್ರ್ಯಾಕ್ಟರ್ ನಡುವೆ ಅಪಘಾತ, 8 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ (Road Accident) ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 43 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್‌-ಟ್ರ್ಯಾಕ್ಟರ್ ನಡುವೆ ಅಪಘಾತ, 8 ಮಂದಿ ಸಾವು

Vishakha Bhat Vishakha Bhat Aug 25, 2025 8:52 AM

ಲಖನೌ: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ (Road Accident) ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 43 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಅರ್ನಿಯಾ ಬೈಪಾಸ್ ಬಳಿ ಬೆಳಗಿನ ಜಾವ 2:10 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಟ್ರಾಕ್ಟರ್-ಟ್ರಾಲಿಯು 61 ಜನರನ್ನು ಹೊತ್ತೊಯ್ಯುತ್ತಿತ್ತು, ಅವರು ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಎಂಟು ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 43 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಮೂವರು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಎಸ್‌ಪಿ ಸೇರಿದಂತೆ ಪೊಲೀಸ್ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಿನಿ ವ್ಯಾನ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾ-ನಳಂದ ಗಡಿಯ ಬಳಿಯ ಶಹಜಹಾನ್‌ಪುರದಲ್ಲಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಮೃತರೆಲ್ಲರೂ ನಳಂದ ಜಿಲ್ಲೆಯ ಮಾಲವನ್ ಗ್ರಾಮದ ಒಂದೇ ಕುಟುಂಬದವರು. ಅವರು ಗಂಗಾ ಸ್ನಾನ ಮಾಡಲು ಫತುಹಾಗೆ ಹೋಗುತ್ತಿದ್ದರು ಎಂದು ವರದಿಯಾಗಿದೆ.

ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಎಸ್ಪಿ (ಗ್ರಾಮೀಣ) ವಿಕ್ರಮ್ ಸಿಹಾಂಗ್ ಹೇಳಿದರು. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಮೃತರನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ವರ್ಷದ ಮೇ ತಿಂಗಳ ಆರಂಭದಲ್ಲಿ, ಕತಿಹಾರ್‌ನಲ್ಲಿ ಇದೇ ರೀತಿಯ ಅಪಘಾತ ಸಂಭವಿಸಿ ಎಂಟು ಜನರು ಪ್ರಾಣ ಕಳೆದುಕೊಂಡರು. ಆ ಅಪಘಾತದಲ್ಲಿ, ಸಮೇಲಿ ಬ್ಲಾಕ್ ಪ್ರಧಾನ ಕಚೇರಿಯ ಬಳಿ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದಿತ್ತು.