ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Election Commission: ಹೆಸರಿಗೆ ಮಾತ್ರ ಇರುವ 345 ರಾಜಕೀಯ ಪಕ್ಷಗಳನ್ನು ಕೈಬಿಟ್ಟ ಚುನಾವಣಾ ಆಯೋಗ

ಒಂದಾದರೂ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪೂರೈಸಲು ವಿಫಲವಾದ 345 ನೋಂದಾಯಿತ ರಾಜಕೀಯ ಪಕ್ಷಗಳನ್ನು (RUPPs) ಚುನಾವಣಾ ಆಯೋಗ ಕೈಬಿಟ್ಟಿದೆ. ಈ 345 ನೋಂದಾಯಿತ ಪಕ್ಷಗಳು ಕೇವಲ ಹೆಸರಿಗೆ ಮಾತ್ರ ಇದ್ದು ಕಳೆದ ಆರು ವರ್ಷಗಳಿಂದ ಒಂದೇ ಒಂದು ಚುನಾವಣೆಯಲ್ಲೂ ಪಾಲ್ಗೊಂಡಿಲ್ಲ. ಹೀಗಾಗಿ ಇವುಗಳ ಹೆಸರನ್ನು ಚುನಾವಣಾ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನವದೆಹಲಿ: ದೇಶದ ಒಟ್ಟು 345 ರಾಜಕೀಯ ಪಕ್ಷಗಳನ್ನು (Political Party) ಭಾರತೀಯ ಚುನಾವಣಾ ಆಯೋಗವು (Election Commission) ಚುನಾವಣಾ ಪಟ್ಟಿಯಿಂದ ತೆಗೆದು ಹಾಕಿದೆ. ಹೆಸರಿಗೆ ಮಾತ್ರ ಈ ಪಕ್ಷಗಳು (Registered unrecognized political parties) ನೋಂದಾಯಿಸಲ್ಪಟ್ಟಿದ್ದು, ಯಾವುದೇ ರೀತಿಯಲ್ಲಿ ದೇಶದ ಯಾವುದೇ ಭಾಗದಲ್ಲೂ ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವುಗಳನ್ನು ಚುನಾವಣಾ (Election) ಪಟ್ಟಿಯಿಂದ ಕೈಬಿಡಲಾಗಿದೆ. ಚುನಾವಣಾ ಪಟ್ಟಿಯಿಂದ ತೆಗೆದುಹಾಕಲಾದ 345 ರಾಜಕೀಯ ಪಕ್ಷಗಳು 2019ರಿಂದ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಿಲ್ಲ. ಆದ್ದರಿಂದ ಅವುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಒಂದಾದರೂ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪೂರೈಸಲು ವಿಫಲವಾದ 345 ನೋಂದಾಯಿತ ಗುರುತಿಸಲಾಗದ ರಾಜಕೀಯ ಪಕ್ಷಗಳನ್ನು (RUPPs) ಚುನಾವಣಾ ಆಯೋಗ ಕೈಬಿಟ್ಟಿದೆ. ಈ 345 ನೋಂದಾಯಿತ ಪಕ್ಷಗಳು ಕೇವಲ ಹೆಸರಿಗೆ ಮಾತ್ರ ಇದ್ದು ಕಳೆದ ಆರು ವರ್ಷಗಳಿಂದ ಒಂದೇ ಒಂದು ಚುನಾವಣೆಯಲ್ಲೂ ಪಾಲ್ಗೊಂಡಿಲ್ಲ. ಹೀಗಾಗಿ ಚುನಾವಣಾ ಆಯೋಗದ ಷರತ್ತನ್ನು ಪಾಲಿಸುವಲ್ಲಿ ವಿಫಲವಾಗಿರುವ ಇವುಗಳ ಹೆಸರನ್ನು ಚುನಾವಣಾ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.



ಚುನಾವಣಾ ಆಯೋಗವು ಗುರುತಿಸಿರುವ ಪಕ್ಷಗಳ ಕಚೇರಿಗಳು ಭೌತಿಕವಾಗಿ ಎಲ್ಲಿಯೂ ಕಾರ್ಯ ನಿರ್ವಹಿಸುತ್ತಿಲ್ಲ. ಈ ರಾಜಕೀಯ ಪಕ್ಷಗಳು ದೇಶಾದ್ಯಂತ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೋಂದಾಯಿಸಲ್ಪಟ್ಟಿದೆ. ಆದರೆ ಅವುಗಳು ಯಾವುದೇ ಚುನಾವಣೆಯಲ್ಲಿ ಪಾಲ್ಗೊಂಡಿಲ್ಲ ಎಂದು ಆಯೋಗ ಹೇಳಿದೆ.

ಇದನ್ನೂ ಓದಿ: Building Collapses: 40 ವರ್ಷಗಳ ಹಿಂದಿನ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರು ಸಾವು, ಮತ್ತೊಬ್ಬ ನಾಪತ್ತೆ

ಪ್ರಸ್ತುತ ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾಗಿರುವ 2,800ಕ್ಕೂ ಹೆಚ್ಚು ರಾಜಕೀಯ ಪಕ್ಷಗಳಿವೆ. ಅವುಗಳಲ್ಲಿ ಹೆಚ್ಚಿನ ಪಕ್ಷಗಳು ಷರತ್ತುಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂಬುದನ್ನು ಆಯೋಗ ಗಮನಿಸಿರುವುದಾಗಿ ಪ್ರಕಟಣೆ ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author