ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Elon Musk: ಈ ವರ್ಷದ ಕೊನೆಯಲ್ಲಿ ಎಲಾನ್‌ ಮಸ್ಕ್‌ ಭಾರತ ಭೇಟಿ; ಮೋದಿ ಜೊತೆ ದೂರವಾಣಿ ಮಾತುಕತೆ ಬೆನ್ನಲ್ಲೇ ಮಹತ್ವದ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಒಂದು ದಿನದ ನಂತರ , ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ತಾವು ಭೇಟಿ ನೀಡುವುದಾಗಿ ಹೇಳಿದ್ದಾರೆ. ಟೆಸ್ಲಾ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಎಲೆಕ್ಟ್ರಿಕ್ ವಾಹನಗಳ ಸಮೂಹವನ್ನು ಪರಿಚಯಿಸಲು ಸಿದ್ಧವಾಗಿದೆ.

ಈ ವರ್ಷದ ಕೊನೆಯಲ್ಲಿ ಎಲಾನ್‌ ಮಸ್ಕ್‌ ಭಾರತ ಭೇಟಿ

Profile Vishakha Bhat Apr 19, 2025 4:49 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ( Narendra Modi) ದೂರವಾಣಿ ಸಂಭಾಷಣೆ ನಡೆಸಿದ ಒಂದು ದಿನದ ನಂತರ , ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ತಾವು ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಟೆಸ್ಲಾ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಎಲೆಕ್ಟ್ರಿಕ್ ವಾಹನಗಳ ಸಮೂಹವನ್ನು ಪರಿಚಯಿಸಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಅವರ ಭೇಟಿ ಮಹತ್ವದ್ದಾಗಿದೆ. ಈ ವರ್ಷ ಭಾರತದಲ್ಲಿ ಟೆಸ್ಲಾವನ್ನು ಬಿಡುಗಡೆ ಮಾಡಲು ಮಸ್ಕ್ ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ಟೆಸ್ಲಾ ಮುಂಬೈ ಮತ್ತು ದೆಹಲಿಯಲ್ಲಿ ಶೋ ರೂಂಗಾಗಿ ಜಾಗವನ್ನು ಬಾಡಿಗೆಗೆ ಪಡೆದಿದೆ.

ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ, ಎಲೋನ್ ಮಸ್ಕ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ "ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದು ಗೌರವದ ಸಂಗತಿ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪೋಸ್ಟ್ ಮಾಡಿದ್ದಾರೆ. ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಏಪ್ರಿಲ್ 21 ರಿಂದ ಏಪ್ರಿಲ್ 24 ರವರೆಗೆ ಭಾರತ ಭೇಟಿ ನೀಡಿದ ಬೆನ್ನಲ್ಲೇ ಈ ಸಂಭಾಷಣೆ ನಡೆದಿದೆ.

ಎಕ್ಸ್‌ ನಲ್ಲಿ ಸಂವಾದದ ವಿವರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ," ಎಲೋನ್ ಮಸ್ಕ್ ಅವರೊಂದಿಗೆ ಮಾತನಾಡಿದೆ ಮತ್ತು ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯಲ್ಲಿ ನಾವು ಚರ್ಚಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಮಾತನಾಡಿದೆವು ಎಂದು ಬರೆದುಕೊಂಡಿದ್ದಾರೆ.



ಈ ಸುದ್ದಿಯ್ನನೂ ಓದಿ: Elon Musk: ಎಲಾನ್‌ ಮಸ್ಕ್ ʼಡಿನ್ನರ್ ಎಂಟರ್‌ಟೈನ್‌ಮೆಂಟ್ʼ ನೋಡಿ ನೆಟ್ಟಿಗರು ಫುಲ್‌ ಫಿದಾ! ವಿಡಿಯೊ ಇಲ್ಲದೆ

ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಎಲೋನ್ ಮಸ್ಕ್ ಅವರನ್ನು ಭೇಟಿಯಾದರು. ಆ ಸಭೆಯಲ್ಲಿ, ಮೋದಿ ಮತ್ತು ಮಸ್ಕ್ ಬಾಹ್ಯಾಕಾಶ ಪರಿಶೋಧನೆ, ಕೃತಕ ಬುದ್ಧಿಮತ್ತೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತೀಯ ಮತ್ತು ಅಮೆರಿಕದ ಸಂಸ್ಥೆಗಳ ನಡುವಿನ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಸಿದ್ದರು. ಮುಂಬರುವ ತಿಂಗಳುಗಳಲ್ಲಿ ಮುಂಬೈ ಬಳಿಯ ಬಂದರಿಗೆ ಕೆಲವು ಸಾವಿರ ಕಾರುಗಳನ್ನು ರವಾನಿಸುವ ಮೂಲಕ ಟೆಸ್ಲಾ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲು ಸಿದ್ಧತೆ ನಡೆಸುತ್ತಿದೆ ಎಂಬ ವರದಿಗಳ ಮಧ್ಯೆ ಪ್ರಧಾನಿ ಎಲೋನ್ ಮಸ್ಕ್ ಅವರೊಂದಿಗಿನ ದೂರವಾಣಿ ಸಂಭಾಷಣೆ ನಡೆದಿದೆ.