ನವದೆಹಲಿ, ಜೂ.25: ತುರ್ತು ಪರಿಸ್ಥಿತಿ ವಾರ್ಷಿಕೋತ್ಸವವನ್ನು (Emergency Anniversary) ಸಂವಿಧಾನದ ಮೇಲಿನ ದಾಳಿ ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಕರೆದಿದ್ದಾರೆ. ಈ ಅವಧಿಯಲ್ಲಿ ನಾಗರಿಕ ಸ್ವಾತಂತ್ರ್ಯಗಳ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರ್ಬಂಧ ಮತ್ತು ಭಾರತೀಯ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಸಂಸ್ಥೆಗಳ ಮೇಲಿನ ದಾಳಿ ನಡೆದಿದೆ ಎಂದು ಹೇಳಿದರು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲಾಗಿತ್ತು ಹಾಗೂ ಭಾರತೀಯ ಪ್ರಜಾಪ್ರಭುತ್ವದ (Indian democracy) ಅಡಿಪಾಯವಾಗಿರುವ ಸಂಸ್ಥೆಗಳ ಮೇಲೆ ದಾಳಿ ನಡೆದಿತ್ತು ಎಂದು ಅವರು ಹೇಳಿದರು.
ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದೆಂದು ಕರೆದ ಅವಧಿಯಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಿದವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಜೂನ್ 25, 1975 ಮತ್ತು ಮಾರ್ಚ್ 21, 1977 ರ ನಡುವಿನ ಅವಧಿಯು ಮೌನವಾಗಿರಲು ನಿರಾಕರಿಸಿದ ನಾಗರಿಕರ ಧೈರ್ಯವೂ ಮೆಚ್ಚುವಂಥದ್ದು ಎಂದು ಹೇಳಿದರು. 2025 ರಿಂದ, ಕೇಂದ್ರವು ಜೂನ್ 25 ಅನ್ನು ಸಂವಿಧಾನ ಹತ್ಯೆ ದಿನ ಎಂದು ಆಚರಿಸುತ್ತಿದೆ.
1975 ರ ಈ ದಿನದಂದು ತುರ್ತು ಪರಿಸ್ಥಿತಿ ಘೋಷಣೆಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತುರ್ತು ಪರಿಸ್ಥಿತಿ ನಮ್ಮ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು. ಆ ಅವಧಿಯಲ್ಲಿ ನಾಗರಿಕ ಸ್ವಾತಂತ್ರ್ಯಗಳನ್ನು ಅಮಾನತುಗೊಳಿಸಲಾಯಿತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲಾಯಿತು, ರಾಜಕೀಯ ನಾಯಕರು, ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಯಿತು. ಜೊತೆಗೆ, ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಂಸ್ಥೆಗಳ ಮೇಲೆಯೂ ದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.
Dr T N Vasudevamurthy Column: ತುರ್ತು ಪರಿಸ್ಥಿತಿ: ಯೋಗ್ಯ ಸರ್ವಾಧಿಕಾರ ಸ್ಥಾಪನೆಯ ಸಂಕಲ್ಪ
ಸಂವಿಧಾನವು 140 ಕೋಟಿ ಭಾರತೀಯರ ಆಕಾಂಕ್ಷೆಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಸಾಕಾರವಾಗಿದೆ ಎಂದು ಅವರು ಹೇಳಿದರು. ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ನಮ್ಮ ಸಾಮೂಹಿಕ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ನಮ್ಮ ಸಂವಿಧಾನದ ಸ್ಫೂರ್ತಿಯಿಂದ ಮಾರ್ಗದರ್ಶಿಸಲ್ಪಟ್ಟ ನಾವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಕ್ಕೆ ಸದಾ ಬದ್ಧವಾಗಿರುವ ಭಾರತವನ್ನು ನಿರ್ಮಿಸುತ್ತೇವೆ ಎಂದು ಅವರು ಹೇಳಿದರು.
ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನ ಹತ್ಯೆ ದಿನ ದೇಶದ ಪ್ರತಿಯೊಬ್ಬರಿಗೂ ಭಾರತೀಯ ಪ್ರಜಾಪ್ರಭುತ್ವವನ್ನು ಕ್ರೂರವಾಗಿ ಹತ್ತಿಕ್ಕಿದ ಆ ಕರಾಳ ಅವಧಿಯನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ. ಈ ದಿನವು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಗೆ ಸದಾ ಬದ್ಧರಾಗಿರಲು ನಮಗೆ ಸ್ಫೂರ್ತಿ ನೀಡುತ್ತದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಮಹನೀಯರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಸರ್ಕಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ, 1975ರ ಜೂನ್ 25ರಂದು ತುರ್ತು ಪರಿಸ್ಥಿತಿ ಘೋಷಿಸಲಾಯಿತು ಎಂದು ಉಲ್ಲೇಖಿಸಲಾಗಿದೆ. ಅದರ ನಂತರ ಅಂದಿನ ಸರ್ಕಾರದಿಂದ ಅಧಿಕಾರದ ಭಾರಿ ದುರುಪಯೋಗ ನಡೆದಿದ್ದು, ಭಾರತದ ಜನರು ದೌರ್ಜನ್ಯಗಳು ಮತ್ತು ಅನ್ಯಾಯಗಳಿಗೆ ಒಳಗಾಗಿದ್ದರು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.