ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Encounter in Kishtwar: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಭಯೋತ್ಪಾದಕರನ್ನು ಹಿಮ್ಮೆಟ್ಟಿಸುತ್ತಿರುವ ಭಾರತೀಯ ಸೇನೆ

Jammu and Kashmir: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಿದೆ. ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈಗಲೂ ಕಾರ್ಯಾಚರಣೆ ಮುಂದುವರಿದಿದೆ.

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ

ಸಾಂದರ್ಭಿಕ ಚಿತ್ರ -

Ramesh B Ramesh B Sep 21, 2025 11:02 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಮತ್ತೆ ಗುಂಡಿನ ಸದ್ದು ಮೊಳಗಿದೆ. ಭಾರತೀಯ ಸೇನೆ ಮತ್ತು ಭಯೋತ್ಪಾದಕರ ಮಧ್ಯೆ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ (Encounter in Kishtwar). ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈಗಲೂ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ ಯಾವುದೇ ಜೀವ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

"ಭಾನುವಾರ (ಸೆಪ್ಟೆಂಬರ್‌ 21) ಮಧ್ಯಾಹ್ನ 1 ಗಂಟೆ ಸುಮಾರಿಗೆ ವೈಟ್ ನೈಟ್ ಕಾರ್ಪ್ಸ್‌ನ ಪಡೆಗಳು ಕಿಶ್ತ್ವಾರ್‌ನಲ್ಲಿ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದರು. ಸದ್ಯ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ಮುಂದುವರಿದಿದೆ" ಎಂದು ಸೇನೆಯ ಮೂಲಗಳು ಎಕ್ಸ್‌ನಲ್ಲಿ ತಿಳಿಸಿವೆ.

ಪಿಟಿಐ ವರದಿಯ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ ಸೇನಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಭಯೋತ್ಪಾದಕರನ್ನು ಹೊಡೆದುರುಳಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ: Pakistan Opens Fire: ಮತ್ತೆ ಬಾಲ ಬಿಚ್ಚಿದ ಪಾಕ್‌; LOC ಬಳಿ ಸೈನಿಕರ ನಡುವೆ ಗುಂಡಿನ ಚಕಮಕಿ

ಉಧಂಪುರದಲ್ಲಿ ಹುತಾತ್ಮ ಸೈನಿಕನಿಗೆ ಸೇನೆಯಿಂದ ಗೌರವ

ಸೆಪ್ಟೆಂಬರ್ 19-20ರ ಮಧ್ಯರಾತ್ರಿ ಉಧಂಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೈನಿಕನೊಬ್ಬರು ಹುತಾತ್ಮರಾಗಿದ್ದರು. ಶನಿವಾರ (ಸೆಪ್ಟೆಂಬರ್‌ 20) ಹುತಾತ್ಮರಾದ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಲ್ಯಾನ್ಸ್ ದಫದರ್ ಬಲದೇವ್ ಚಂದ್ ಅವರಿಗೆ ಗೌರವ ಸಲ್ಲಿಸಲಾಯಿತು. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಅವರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

LOC ಬಳಿ ಗುಂಡಿನ ಚಕಮಕಿ

ಶ್ರೀನಗರ: ಆಪರೇಷನ್‌ ಸಿಂದೂರದ ಬಳಿಕ ತಣ್ಣಗಾಗಿದ್ದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಬಾಲ ಬಿಚ್ಚಿದೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಹಾಗೂ ಪಾಕ್​ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಆದರೆ ಈ ಘಟನೆ ಕನದ ವಿರಾಮ ಉಲ್ಲಂಘನೆಗೆ ಸಮವಲ್ಲ ಎಂದು ಸೇನೆ ಹೇಳಿದೆ. ಎಲ್‌ಒಸಿ ಉದ್ದಕ್ಕೂ ಎರಡೂ ಕಡೆಯಿಂದ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಪ್ರಕಾರ ಶನಿವಾರ ಸಂಜೆ 6.15 ರ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಮತ್ತು ಸುಮಾರು ಒಂದು ಗಂಟೆ ಕಾಲ ನಿರಂತರವಾಗಿ ಮುಂದುವರಿಯಿತು. ನಂತರ ತಣ್ಣಗಾಗಿದೆ.

ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ ಮತ್ತು ಇದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಈ ತಿಂಗಳ ಆರಂಭದಲ್ಲಿ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನ ಎಲ್‌ಒಸಿ ಬಳಿ ಶಂಕಿತ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿತು. ಇದರಿಂದಾಗಿ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ಕಾರ್ಯಾಚರಣೆಯಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆದಿದ್ದು, ಶಂಕಿತ ಒಳನುಸುಳುವವರ ಚಲನವಲನಗಳನ್ನು ಪಡೆಗಳು ಯಶಸ್ವಿಯಾಗಿ ತಡೆಯಲಾಗಿದೆ.