ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್; ಪಾಕ್ ಬೆಂಬಲಿತ ಮೂರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಸುತ್ತುವರಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ತೀವ್ರ ಎನ್‌ಕೌಂಟರ್ ನಡೆದಿರುವ ಬಗ್ಗೆ ವರದಿಯಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿದ್ದು, ಪಾಕ್ ಬೆಂಬಲಿತ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿರುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ

ಶ್ರೀನಗರ, ಜ. 18: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾನುವಾರ (ಜನವರಿ18) ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹಮ್ಮದ್ (Jaish-e-Mohammad) ಭಯೋತ್ಪಾದಕ ಸಂಘಟನೆಯ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಯ ಸಿಬ್ಬಂದಿ ಸುತ್ತುವರಿದಿದ್ದಾರೆ. ಅವರು ಭದ್ರತಾ ಸಿಬ್ಬಂದಿಯ ಮೇಲೆ ಗ್ರೆನೇಡ್‌ಗಳನ್ನು ಎಸೆದಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳ ಪ್ರಕಾರ, ಚತ್ರೂ ಪ್ರದೇಶದ ಮಂದ್ರಲ್-ಸಿಂಗೂರ ಬಳಿಯ ಸೊನ್ನಾರ್ ಗ್ರಾಮದಲ್ಲಿ ಮಧ್ಯಾಹ್ನ ನಡೆದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ.

ಗಣರಾಜ್ಯೋತ್ಸವ ದಿನಕ್ಕೂ ಮುನ್ನ ಉಗ್ರರ ಕರಿನೆರಳು; ಕಡಿಮೆ ಬೆಲೆಯ ಸ್ಫೋಟಕ, ಡ್ರೋನ್ ತಯಾರಿ

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಹಲವು ಎನ್‌ಕೌಂಟರ್‌ಗಳು ನಡೆದಿವೆ. ಜನವರಿ 8ರಂದು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು.

2025ರ ನವೆಂಬರ್‌ನಲ್ಲಿ ಕಿಶ್ತ್ವಾರ್‌ನ ಛಾತ್ರುವಿನಲ್ಲಿ ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ಪೊಲೀಸರು ಭಾರತೀಯ ಸೇನೆಯ ಸಹಾಯದಿಂದ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು. ಮುಂಜಾನೆ ಸಮಯದಲ್ಲಿ ಸಂಘಟಿತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ನಂತರ ಪರಸ್ಪರ ಗುಂಡಿನ ಚಕಮಕಿ ನಡೆಯಿತು.

ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರ ಇರುವಿಕೆಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಛಾತ್ರು ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರತೀಯ ಸೇನೆಯ ಸಹಾಯದಿಂದ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ಮುಂಜಾನೆ ಸಮಯದಲ್ಲಿ ಸಂಘಟಿತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಉಗ್ರರೊಂದಿಗೆ ಭದ್ರತಾ ಪಡೆಯ ಸಿಬಬದಿ ಗುಂಡಿನ ಚಕಮಕಿ ನಡೆಸಿದರು.

ಜಮ್ಮು ಹಾಗೂ ಸುತ್ತಮುತ್ತಲಿನ ಪರ್ವತ ಜಿಲ್ಲೆಗಳಾದ ಕಿಶ್ತ್ವಾರ್ ಮತ್ತು ದೋಡಾ ಸಮೀಪ 35 ಪಾಕಿಸ್ತಾನಿ ಭಯೋತ್ಪಾದಕರು ಕಾಡುಗಳಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಸೇನೆ ಹೊಸ ಪ್ರತಿತಂತ್ರ ಆರಂಭಿಸಿದೆ.

ಈ ಹೊಸ ಕಾರ್ಯಾಚರಣೆಯನ್ನು ಈಗಾಗಲೇ ಶುರು ಮಾಡಲಾಗಿದೆ. ಸಾಮಾನ್ಯವಾಗಿ ತೀವ್ರ ಚಳಿಗಾಲದ ಅವಧಿಯಲ್ಲಿ ಭದ್ರತಾ ಕಾರ್ಯಾಚರಣೆಗಳನ್ನು ಕಡಿಮೆ ಮಾಡಲಾಗುತ್ತದೆ. ಅದರ ಬದಲಾಗಿ ಇದೀಗ ಹಿಮದಿಂದ ಆವೃತಗೊಂಡಿರುವ ಎತ್ತರದ ಪ್ರದೇಶಗಳಲ್ಲಿ ಕಾರ್ಯಾಚರಣೆಗಳನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತಿದೆ. ಭಯೋತ್ಪಾದಕರು ಇಂತಹ ಎತ್ತರದ, ಹಿಮಾಚ್ಛಾದಿತ ಪ್ರದೇಶಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿರುವ ಸಾಧ್ಯತೆ ಇರುವುದರಿಂದ, ಭಾರತೀಯ ಸೇನೆ ಈ ಹೊಸ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ ಎಂದು ತಿಳಿಸಲಾಗಿದೆ.