ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Encounter: ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ; ಉಧಂಪುರದಲ್ಲಿ ಮೂವರು ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಅಥವಾ ಮೂವರು ಭಯೋತ್ಪಾದಕರು ಸ್ಥಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಉಧಂಪುರದಲ್ಲಿ ಮೂವರು ಉಗ್ರರು ಅಡಗಿರುವ ಶಂಕೆ; ಭದ್ರತಾಪಡೆಯಿಂದ ಕಾರ್ಯಾಚರಣೆ

Profile Vishakha Bhat Apr 9, 2025 3:53 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ (Terrorist Encounter) ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಅಥವಾ ಮೂವರು ಭಯೋತ್ಪಾದಕರು ಸ್ಥಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಉಧಂಪುರದ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜೋಫರ್ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂದು ತಿಳಿದು ಬಂದಿದೆ.

ಗುಂಡಿನ ಚಕಮಕಿ ಮುಂದುವರಿದಿದ್ದು, ಸ್ಥಳದಲ್ಲಿ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಸಿಲುಕಿಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಕಳೆದ ವಾರವಷ್ಟೇ, ಕಥುವಾದ ಬಿಲ್ಲಾವರ್ ಪ್ರದೇಶದ ಪಂಜತೀರ್ಥಿ ದೇವಸ್ಥಾನದ ಬಳಿ ಮೂವರು ಜೈಶ್ ಭಯೋತ್ಪಾದಕರು ಮತ್ತು ಪೊಲೀಸರ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಕ್ಕಿಬಿದ್ದರು. ಏಪ್ರಿಲ್ 1 ರಂದು ಈ ಪ್ರದೇಶದಲ್ಲಿ 'ಭಯೋತ್ಪಾದಕರ' ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭಾರತೀಯ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್, ಜೆ & ಕೆ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೂಡಿ ಶೋಧ ಕಾರ್ಯಾಚರಣೆ ನಡೆಸಿತ್ತು.

ಮಾರ್ಚ್ ಕೊನೆಯಲ್ಲಿ , ಕಥುವಾ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ದಿನವಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರೆ, ಮೂವರು ಪೊಲೀಸರು ಹುತಾತ್ಮರಾಗಿದ್ದರು. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ನೇತೃತ್ವದ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೆರವಿನಿಂದ ನಡೆದ ಎನ್‌ಕೌಂಟರ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಏಳು ಮಂದಿ ಪೊಲೀಸರು ಗಾಯಗೊಂಡಿದ್ದರು. ಇತ್ತೀಚೆಗೆ ಜಮ್ಮು- ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬುಧವಾರ ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿದ್ದವು.

ಈ ಸುದ್ದಿಯನ್ನೂ ಓದಿ: Terrorist Encounter: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಗುಂಡಿನ ಕಾಳಗ; ಡಿವೈಎಸ್‌ಪಿ ಸೇರಿ ನಾಲ್ವರು ಪೊಲೀಸರಿಗೆ ಗಾಯ

ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.