ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Encounter: ಕಥುವಾದಲ್ಲಿ ಉಗ್ರರ ಹೆಡೆಮುರಿ ಕಟ್ಟಲು ಭದ್ರತಾ ಪಡೆಯಿಂದ ಮತ್ತೆ ಕಾರ್ಯಾಚರಣೆ ಶುರು

ಕಥುವಾದ ಪಂಜತೀರ್ಥಿ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿ ಶೋಧ ಕಾರ್ಯ ನಡೆಸುತ್ತಿದೆ.

ಉಗ್ರರ ಹೆಡೆಮುರಿ ಕಟ್ಟಲು ಭದ್ರತಾ ಪಡೆಯಿಂದ ಮತ್ತೆ ಕಾರ್ಯಾಚರಣೆ ಶುರು

Profile Vishakha Bhat Apr 1, 2025 11:19 AM

ಶ್ರೀನಗರ: ಕಥುವಾದ ಪಂಜತೀರ್ಥಿ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭಾರತೀಯ ಸೇನೆ ಕಾರ್ಯಾಚರಣೆ (Terrorist Encounter) ನಡೆಸುತ್ತಿದೆ. ಭಾರತೀಯ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿ ಶೋಧ ಕಾರ್ಯ ನಡೆಸುತ್ತಿದೆ. ಸೋಮವಾರ ರಾತ್ರಿ ಪಂಜತೀರ್ಥಿ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂದಿದ್ದರಿಂದ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು.

ಕಾರ್ಯಾಚರಣೆಯಲ್ಲಿ ಕಥುವಾದ ಲ್ಲಾವರ್ ಪ್ರದೇಶದ ಪಂಜತೀರ್ಥಿ ದೇವಸ್ಥಾನದ ಬಳಿ ಮೂವರು ಜೈಶ್ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಮೂಲಗಳು ತಿಳಿಸಿವೆ. ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಶಿವ್ ಕುಮಾರ್ ಶರ್ಮಾ ಅವರು ಕೊನೆಯ ಭಯೋತ್ಪಾದಕನನ್ನು ತಟಸ್ಥಗೊಳಿಸುವವರೆಗೆ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ತಿಳಸಿದ್ದಾರೆ. ರಿಯಾಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬ್ಬ ಭಯೋತ್ಪಾದಕ ಅಡಗಿರುವ ಶಂಕೆ ಇದೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತನ್ನ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಮ್ಮ ಪಡೆ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಮತ್ತು ಜಮ್ಮು ಮತ್ತು ಕಾಶ್ಮೀರದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಭದ್ರತಾ ಪಡೆಗಳು ಡ್ರೋನ್‌ಗಳು ಹಾಗೂ ಸ್ನಿಫರ್ ನಾಯಿಗಳನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಎಷ್ಟು ಉಗ್ರರು ಅಡಗಿದ್ದಾರೆ ಎಂಬ ನಿಖರ ಸಂಖ್ಯೆ ಪತ್ತೆಯಾಗಿಲ್ಲ. ಆದರೆ, ಇವರೆಲ್ಲಾ ಪಾಕಿಸ್ತಾನ ಮೂಲದ ಜೈಶ್​-ಎ-ಮೊಹಮ್ಮದ್​ (ಜೆಇಎಂ) ಜೊತೆ ಸಂಬಂಧ ಹೊಂದಿರಬಹುದು ಎಂದು ಶಂಕಿಸಲಾಗಿದೆ. ಈ ಶಂಕಿತರು ಈ ಹಿಂದೆ ಸನಿಯಾಲ್ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ತಪ್ಪಿಸಿಕೊಂಡವರು ಇರಬಹುದು ಎಂದು ಅಧಿಕಾರಿಗಳು ನಂಬಿದ್ದಾರೆ. ಕಥುವಾದಲ್ಲಿದಲ್ಲಿ ಇದು ಕಳೆದ 9 ದಿನಗಳಿಂದ ನಡೆದ ಮೂರನೇ ಶೋಧ ಕಾರ್ಯಾಚರಣೆಯಾಗಿದೆ. ಮೊದಲಿಗೆ ಮಾರ್ಚ್ 23 ರಂದು ಅಂತಾರಾಷ್ಟ್ರೀಯ ಗಡಿ ರೇಖೆ ಬಳಿಯ ಹಿರಾನಗರ ವಲಯದಲ್ಲಿರುವ ಸನಿಯಾಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಶಂಕಿತ ಜೆಇಎಂ ಉಗ್ರರೊಂದಿಗೆ ಗುಂಡಿನ ಚಕಮಕಿ ಆರಂಭವಾಗಿತ್ತು. ಈ ಎನ್​ಕೌಂಟರ್​ನಲ್ಲಿ ಉಗ್ರರು ತಪ್ಪಿಸಿಕೊಳ್ಳಲು ಯಶಸ್ವಿಯಾದರೂ ಅವರ ಬಳಿ ಇದ್ದ ಅಮೆರಿಕ ನಿರ್ಮಿತ ಎಂ4 ಕಾರ್ಬೈನ್‌ಗಳ ಮ್ಯಾಗಜೀನ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.

ಈ ಸುದ್ದಿಯನ್ನೂ ಓದಿ: Terrorist Encounter: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಗುಂಡಿನ ಕಾಳಗ; ಡಿವೈಎಸ್‌ಪಿ ಸೇರಿ ನಾಲ್ವರು ಪೊಲೀಸರಿಗೆ ಗಾಯ

ಕಥುವಾದ ಪಂಜತೀರ್ಥಿ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿ ಶೋಧ ಕಾರ್ಯ ನಡೆಸುತ್ತಿದೆ. ಸೋಮವಾರ ರಾತ್ರಿ ಪಂಜತೀರ್ಥಿ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂದಿದ್ದರಿಂದ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು.